ಯಾದಗಿರಿ: ಓದಿ ಬರೆಯುವ ಕೈಯಲ್ಲಿ ಮಗುವನ್ನು ಹೆರುವಂತೆ ಮಾಡಿದ ವ್ಯವಸ್ಥೆಯ ಬಗ್ಗೆ ಸಾಕಷ್ಟು ಆಕ್ರೋಶವ್ಯಕ್ತವಾಗಿದೆ. ಶಹಾಪುರ ನಗರದ ವಸತಿ ಶಾಲೆಯೊಂದರಲ್ಲಿ ನಡೆದ ಪ್ರಕರಣದಲ್ಲಿ ಐವರ ವಿರುದ್ಧ ದೂರು ದಾಖಲಾಗಿದೆ.
ಈ ಘಟನೆಯ ಕುರಿತು ಶಹಾಪುರ ಪೊಲೀಸ್ ಠಾಣೆಯಲ್ಲಿ ಐದು ಜನರ ವಿರುದ್ಧ ಪೋಕ್ಸೊ ಹಾಗೂ ಬಾಲ ನ್ಯಾಯ ಕಾಯ್ದೆಯಡೀ ಪ್ರಕರಣ ದಾಖಲಾಗಿದ್ದು, ಶಾಲೆಯ ನಾಲ್ವರನ್ನು ಅಮಾನತು ಮಾಡಲಾಗಿದೆ. ಜೊತೆಗೆ ಪ್ರಕರಣ ಮುಚ್ಚಿಹಾಕಲು ಯತ್ನಿಸಿದ್ದ ಬಾಲಕಿಯ ಸಹೋದರ ಶರಣಬಸಪ್ಪ ವಿರುದ್ಧ ಕೇಸ್ ದಾಖಲಾಗಿದೆ.
ವಸತಿ ಶಾಲೆಯ ಪ್ರಾಂಶುಪಾಲೆ ಬಸಮ್ಮ, ವಾರ್ಡನ್ ಗೀತಾ, ತಾಲೂಕು ಸಾರ್ವಜನಿಕ ಆಸ್ಪತ್ರೆಯ ಸ್ಟಾಫ್ ನರ್ಸ್ ಕಾವೇರಮ್ಮ ಹಾಗೂ ಬಾಲಕಿಯ ಸಹೋದರ ಶರಣಬಸಪ್ಪ ಸೇರಿ ಐದು ಜನರ ವಿರುದ್ಧ ಪ್ರಕರಣ ದಾಖಲಾಗಿದೆ.
ವಸತಿ ಶಾಲೆಯ ಪ್ರಾಂಶುಪಾಲರು, ವಾರ್ಡನ್, ವಿಜ್ಞಾನ ಶಿಕ್ಷಕ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರನ್ನು ಅಮಾನತು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ತಿಳಿಸಿದ್ದಾರೆ. ತಾಲೂಕು ಸಾರ್ವಜನಿಕ ಆಸ್ಪತ್ರೆಯ ಸ್ಟಾಫ್ ನರ್ಸ್ ಹೊರಗುತ್ತಿಗೆ ಸಿಬ್ಬಂದಿಯಾಗಿದ್ದು, ಈ ಬಗ್ಗೆ ಮಾಹಿತಿ ಪಡೆದು ಕ್ರಮ ತೆಗೆದುಕೊಳ್ಳುವ ಸಾಧ್ಯತೆ ಇದೆ.
ಇದನ್ನೂ ಓದಿ: ಬೆಂಗಳೂರು | ಸಂಸ್ಕೃತಿ ಕಮಾಡಿಟಿ ಆಗ್ತಿದೆ. ಡಾ. ಸಿದ್ದನಗೌಡ ಪಾಟೀಲ
ವ್ಯವಸ್ಥೆಯ ವಿರುದ್ಧ ಸಾರ್ವಜನಿಕರ ಆಕ್ರೋಶ ಭುಗಿಲೆದ್ದಿದೆ. ಯಾಕಂದರೆ ಹೆಣ್ಣು ಮಕ್ಕಳ ಸುರಕ್ಷತೆ ಬಗ್ಗೆ ಸಾಕಷ್ಟು ಚರ್ಚೆ ಮಾಡುವಂತಾಗಿದೆ. ಕಲಿಯುವ ವಯಸ್ಸಲ್ಲಿ ಕೈಯಲ್ಲಿ ಮಗುವನ್ನು ಎತ್ತಾಡುವಂತೆ ಮಾಡಿದ್ದಾಗ, ವಸತಿ ಶಾಲೆಯ ಪ್ರಾಂಶುಪಾಲೆ, ವಾರ್ಡನ್, ಸ್ಟಾಪ್ ನರ್ಸ್ ಏನು ಮಾಡ್ತಿದ್ರು, ವಿದ್ಯಾರ್ಥಿನಿಯರ ಬಗ್ಗೆ ಕಾಳಜಿ ತೋರದೇ ನಿರ್ಲಕ್ಷ್ಯ ಯಾಕೆ ವಹಿಸಿದ್ರು ಎಂಬುದು ಪ್ರಶ್ನೆಯಾಗಿದೆ.
ಹಾಗಾದ್ರೆ ಈ ಅಧಿಕಾರಿಗಳು ಕೇವಲ ಸಂಬಳ ಪಡೆದು ಕೂತ್ರೆ ವಿದ್ಯಾರ್ಥಿನಿಯರ ಬಗ್ಗೆ ಕೇರ್ ಮಾಡುವವರು ಯಾರು.? ಹಾಗಾಗಿ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಕೂಡಲೇ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಂಡು, ಜೈಲಿಗಟ್ಟಬೇಕಾಗಿದೆ.
ಇದನ್ನೂ ನೋಡಿ: ಮೈಸೂರು ದಸರಾ ಉದ್ಘಾಟನೆ : ಬಿಜೆಪಿಯ ಧರ್ಮದ್ವೇಷಕ್ಕೆ ಸಾಹಿತಿಗಳ ಆಕ್ರೋಶ
