ಬೆಳಗಾವಿ: ವಿದ್ಯಾರ್ಥಿಗಳ ಶೈಕ್ಷಣಿಕ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ) ಕರ್ನಾಟಕ ರಾಜ್ಯ ಸಮಿತಿ ನೇತೃತ್ವದಲ್ಲಿ ವಿದ್ಯಾರ್ಥಿಗಳು “ಬೆಳಗಾವಿ ಚಲೋ” ಕರೆ ನೀಡಿದ ಭಾಗವಾಗಿ ಡಿಸೆಂಬರ್ 12ರಂದು ಪಿ.ಬಿ.ರಸ್ತೆಯಲ್ಲಿ ಸರ್ಕಾರ ಆಯೋಜಿಸಿದ ಟೆಂಟ್ ನಲ್ಲಿ ಪ್ರತಿಭಟನಾ ಧರಣಿ ನಡೆಸಿದರು. ಬೆಳಗಾವಿ
ಐಟಿಐ, ಇಂಜಿನಿಯರಿಂಗ್ ಸೇರಿದಂತೆ ವೃತ್ತಿಪರ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳಿಗೆ ಸ್ಥಳೀಯ ಮಟ್ಟದಲ್ಲಿ ಉದ್ಯೋಗ ಸೃಷ್ಟಿ ಮಾಡಬೇಕು. ಯಾವುದೇ ವಿಭಾಗದ ವಿದ್ಯಾರ್ಥಿಗಳಿಗೆ ಮೂರು ವರ್ಷಗಳಿಂದ ವಿದ್ಯಾರ್ಥಿ ವೇತನ (ಸ್ಕಾಲರರ್ಶಿಪ್) ನಿಡಿಲ್ಲ ಕೂಡಲೇ ಬಿಡುಗಡೆ ಮಾಡಬೇಕು. ವಿದ್ಯಾರ್ಥಿನಿಯರಿಗೆ ಮಹಿಳೆಯರಿಗೆ ಸೂಕ್ತ ರಕ್ಷಣೆಯಿಲ್ಲ, ದೌರ್ಜನ್ಯ, ಕೊಲೆ, ಲೈಂಗಿಕ ಕಿರುಕುಳ, ಘೋಷಣೆಗಳನ್ನು ತಡೆಗಟ್ಟುವಂತೆ ಆಗ್ರಹಿಸಿ, ಹಾಸ್ಟೆಲ್, ಶಾಲಾ ಕಾಲೇಜುಗಳಲ್ಲಿ ನಡೆಯುವ ಒಟ್ಟಾರೆ ಶಿಕ್ಷಣ ಕ್ಷೇತ್ರದಲ್ಲಿ ನಡೆಯುತ್ತಿರುವ ಭಾರಿ ಭ್ರಷ್ಟಾಚಾರದ ಹಗರಣಗಳು ಕುರಿತು ಚಳಿಗಾಲದ ಅಧಿವೇಶನದಲ್ಲಿ ಚರ್ಚೆ ಮಾಡಬೇಕು ಎಂದು ಎಸ್ಎಫ್ಐ ಮುಖಂಡರು ಒತ್ತಾಯಿಸಿದರು. ಬೆಳಗಾವಿ
ಇದನ್ನೂ ಓದಿ : ಬೆಳಗಾವಿ | ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ಅಧಿವೇಶನದಲ್ಲಿ ಚರ್ಚೆಗೆ ಅವಕಾಶ ಕಲ್ಪಿಸಿ
ಪ್ರತಿ ಹಾಸ್ಟೆಲ್ ವಿದ್ಯಾರ್ಥಿಗೆ ಆಹಾರ ಭತ್ಯೆಯನ್ನು 1750 ರಿಂದ 1850 ರೂ. ನಿಗದಿ ಮಾಡಲಾಗಿದೆ. ಪ್ರಸ್ತುತ ಬೆಲೆ ಏರಿಕೆಯಿಂದ ವಿದ್ಯಾರ್ಥಿಗಳಿಗೆ ಬೇಕಾಗಿರುವ ಪೌಷ್ಠಿಕಾಂಶ ಸಿಗದೇ ಅನಾರೋಗ್ಯ ಸಮಸ್ಯೆಗೆ ತುತ್ತಾಗುತ್ತಿದ್ದಾರೆ. ಆರೋಗ್ಯ ಭದ್ರತೆ ಇಲ್ಲದಂತಾಗಿದೆ. ಹಾಗೂ ರಾಜ್ಯದಲ್ಲಿ ಸುಮಾರು 10 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಸ್ಟೆಲ್ ಬಯಸಿ ಅರ್ಜಿ ಸಲ್ಲಿಸಿದರೆ 2.5 ಲಕ್ಷ ವಿದ್ಯಾರ್ಥಿಗಳಿಗೆ ಮಾತ್ರ ಹಾಸ್ಟೆಲ್ ನೀಡಲಾಗುತ್ತಿದೆ. 7.5ಲಕ್ಷ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ದೊರೆಯುತ್ತಿಲ್ಲ. ಆದರಿಂದ ಹಾಸ್ಟೆಲ್ ಅರ್ಜಿ ಸಲ್ಲಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಒದಗಿಸಲು ಅಗತ್ಯಕ್ಕೆ ಅನುಗುಣವಾಗಿ ಹೆಚ್ಚುವರಿಯಾಗಿ ಹೊಸ ಹಾಸ್ಟೆಲ್‌ಗಳನ್ನು ನಿರ್ಮಾಣ ಮಾಡಲು ಸರ್ಕಾರಕ್ಕೆ ಮನವರಿಕೆ ಮಾಡಿದರು.
ಸರ್ಕಾರಿ ಶಾಲಾ/ಕಾಲೇಜುಗಳಿಗಿ ಸರಿಯಾದ ಮೂಲಭೂತ ಸೌಕರ್ಯ, ಶಿಕ್ಷಕರ ನೇಮಕ, ಸರ್ಕಾರಿ ಶಾಲೆಗಳಿಗೆ ಸುಸಜ್ಜಿತ ಕಟ್ಟಡ, ಶೌಚಾಲಯ ನಿರ್ಮಾಣ, ಸಮಯಕ್ಕೆ ಸರಿಯಾಗಿ ಪಠ್ಯ ಪುಸ್ತಕ ವಿತರಣೆಯಾಗುತ್ತಿಲ್ಲದ ಕಾರಣ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಪ್ರಮಾಣ ವರ್ಷದಿಂದ ವರ್ಷಕ್ಕೆ ಕುಸಿಯುತ್ತಿದೆ. ಇದನ್ನೆಲ್ಲ ಕಡೆಗಣಿಸಿ ಪಂಚಾಯತಿಗೊಂದು ಕೆ.ಪಿ.ಎಸ್. ಶಾಲೆಗಳನ್ನು ತೆರೆಯಲಾಗುತ್ತಿದೆ. 5 ಕಿ.ಮೀ ವ್ಯಾಪ್ತಿಯ ಸರ್ಕಾರಿ ಶಾಲೆಗಳ ಕಡಿಮೆ ದಾಖಲಾತಿ ನೆಪಹೇಳಿ ವಿಲೀನದ ಹೆಸರಿನಲ್ಲಿ ಮುಚ್ಚಲು ಮುಂದಾಗಿದ್ದು ಸರಿಯಲ್ಲ ಈ ಯೋಜನೆಯ ಎಲ್ಲಾ ಸೌಲಭ್ಯಗಳನ್ನು ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಿಗೆ ವಿಸ್ತರಣೆ ಮಾಡಬೇಕು ಎಂದು ಒತ್ತಾಯಿಸಿದರು. ಬೆಳಗಾವಿ
ರಾಜ್ಯದ ಸರ್ಕಾರಿ ಪ್ರಾಥಮಿಕ/ಮಾಧ್ಯಮಿಕ ಶಾಲೆಗಳಲ್ಲಿ ಸುಮಾರು 62,000 ಶಿಕ್ಷಕರ ಹುದ್ದೆಗಳು ಖಾಲಿ ಇದ್ದು ಹಾಗೂ ಪದವಿ ಪೂರ್ವ(ಪಿ.ಯು) ಮತ್ತು ಪದವಿ(ಡಿಗ್ರಿ) ಕಾಲೇಜುಗಳಲ್ಲಿ ಹಾಗೂ ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಸಾವಿರಾರು ಉಪನ್ಯಾಸಕ, ಸಹಾಯಕ ಪ್ರಾಧ್ಯಾಪಕರು/ಪ್ರಾಧ್ಯಾಪಕರ ಹುದ್ದೆಗಳು ಸೇರಿದಂತೆ ಒಟ್ಟಾರೆ ಶಿಕ್ಷಣ ಕ್ಷೇತ್ರದಲ್ಲಿ ಸುಮಾರು 3 ಲಕ್ಷಕ್ಕೂ ಅಧಿಕ ಹುದ್ದೆಗಳು ಖಾಲಿ ಇವೆ. ಕೂಡಲೇ ಭರ್ತಿ ಮಾಡಬೇಕು ಎಂದು ಆಗ್ರಹಿಸಿದರು.
ವಿಶ್ವವಿದ್ಯಾಲಯಗಳು ವಿದ್ಯಾರ್ಥಿಗಳ ಪ್ರವೇಶ ಶುಲ್ಕ, ದಾಖಲಾತಿ ಶುಲ್ಕ, ಪರೀಕ್ಷಾ ಶುಲ್ಕ ಅಂಕಪಟ್ಟಿ ಶುಲ್ಕ ಹೆಚ್ಚಳ ಮಾಡುವ ಮೂಲಕ ಸರ್ಕಾರ ಲೂಟಿ ಮಾಡುತ್ತಿದೆ. ಕಳೆದ ನಾಲ್ಕು ವರ್ಷಗಳಿಂದ ಸುಮಾರು 30 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಅಂಕಪಟ್ಟಿ ನೀಡಲಾಗಿಲ್ಲ. ವಿಶ್ವವಿದ್ಯಾಲಯಗಳಲ್ಲಿ ಸಂಶೋಧನೆಗಳ ಪ್ರಮಾಣ ಕುಸುಯುತ್ತಿವೆ ಮತ್ತು ಸಂಶೋಧನೆ ಕೈಗೊಳ್ಳುವ ವಿದ್ಯಾರ್ಥಿಗಳಿಗೆ ಸರಿಯಾಗಿ ಫೆಲೋಶಿಪ್ ನೀಡಲಾಗುತ್ತಿಲ್ಲ ಎಂದು ದೂರಿದರು.
ರಾಜ್ಯದಲ್ಲಿರುವ ಹಳ್ಳಿಗಳ ವಿದ್ಯಾರ್ಥಿಗಳಿಗೆ ಮೇಡಿಕಲ್, ಕಾನೂನು ಹಾಗೂ ಎಂಜಿನಿಯರಿಂಗ್, ಉನ್ನತ ಶಿಕ್ಷಣ ಕೈಗೆಟುಕುತ್ತಿಲ್ಲ. ಇದಕ್ಕಾಗಿ ಹೊರ ರಾಜ್ಯ ಮತ್ತು ವಿದೇಗಳಿಗೆ ಹೋಗಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಇದನ್ನೇ ಲಾಭವಾಗಿಸಿಕೊಂಡ ಖಾಸಗಿ ವಿದ್ಯಾಸಂಸ್ಥೆಗಳು ಲಕ್ಷ ಗಟ್ಟಲೆ ಡೊನೆಷನ್ ವಸೂಲಿ ಮಾಡಲು ಮುಂದಾಗಿವೆ. ಬಡ ವಿದ್ಯಾರ್ಥಿಗಳು ವೃತ್ತಿಪರ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಹಾಗೂ ಖಾಸಗಿ ಕಾಲೇಜುಗಳಲ್ಲಿ ಶಿಕ್ಷಣ ಪಡೆಯಲು ಲಕ್ಷ ಗಟ್ಟಲೆ ಸಾಲ ಮಾಡಿ ವಿದ್ಯಾಭ್ಯಾಸ ಮಾಡುತ್ತಿರುವ ಪರಿಸ್ಥಿತಿ ಇದ್ದರೂ, ಉದ್ಯೋಗ ಸಿಗದೇ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುವವರ ಸಂಖ್ಯೆ ಹೆಚ್ಚಾಗುತ್ತಿದೆ. ಯುವಜನರ ರಕ್ಷಣೆಗಾಗಿ ಕಾಯಿದೆ ಜಾರಿಗೆ ತರಬೇಕು ಹಾಗೂ ಉದ್ಯೋಗ ಸೃಷ್ಟಿಸಿ ಭದ್ರತೆಯನ್ನು ನೀಡಬೇಕೆಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಗೂ ಮುಂಚೆ ವಿದ್ಯಾರ್ಥಿ ನಾಯಕರೊಂದಿಗೆ ಪೋಲೀಸ್ ಇಲಾಖೆಯು ಗೊಂದಲ ಸೃಷ್ಟಿಸಿ ವಯಸ್ಸು ನಿಗದಿ ಮಾಡಲಾಗಿದೆ ಆದರಿಂದ ಆದಾರ ಕಾರ್ಡ್ ಇದ್ದವರಿಗೆ ಮಾತ್ರ ಅವಕಾಶ ಅಂತಾ ಉಳಿದ ನೂರಾರು ವಿದ್ಯಾರ್ಥಿಗಳಿಗೆ ಅವಕಾಶ ನಿರಾಕರಣೆ ಮಾಡಿ ವಾಗ್ವಾದ ಮಾಡಿದರು. ಪ್ರತಿಭಟನಾ ಧರಣಿ ನಿರಾತ ವಿದ್ಯಾರ್ಥಿಗಳು ಕುಳಿತಲೇ ಸಚಿವರು ಬರಬೇಕೆಂದು ಪಟ್ಟುಹಿಡಿದು, ಭರವಸೆ ಬೇಡ ಪರಿಹಾರಬೇಕೆಂದು ಪ್ರತಿಭಟನಾಕಾರರು ವಿದ್ಯಾರ್ಥಿ ವಿರೋಧಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ಬೆಳಗಾವಿ
ವಿದ್ಯಾರ್ಥಿಗಳು ಕುಳಿತ ಸ್ಥಳಕ್ಕೆ ಸಚಿವರು ಆಗಮಿಸಿ ಮನವಿ ಪತ್ರ ಸ್ವೀಕರಿಸಬೇಕೆಂಬ ಒತ್ತಡಕ್ಕೆ ಮಣಿದು ಪ್ರತಿಭಟನಾ ಧರಣಿ ಸ್ಥಳಕ್ಕೆ ರಾಜ್ಯ ಸರ್ಕಾರದ ಪರವಾಗಿ ಮನವಿ ಪತ್ರ ಸ್ವೀಕರಿಸಲು ಆಗಮಿಸಿದ ಸಚಿವ ಮಂಕಾಳ ವೈದ್ಯ ಮಾತನಾಡಿ, ಸರ್ಕಾರದ ಪರವಾಗಿ ವಿದ್ಯಾರ್ಥಿಗಳ ಎಲ್ಲಾ ಬೇಡಿಕೆಗಳನ್ನು ಸರ್ಕಾರ ಹಾಗೂ ಇಲಾಖೆಗಳ ಗಮನಕ್ಕೆ ತಂದು ಪರಿಹಾರಿಸುತ್ತೇವೆ ಎಂದು ಭರವಸೆ ನೀಡಿದರು. ಬೆಳಗಾವಿ
ಈ ಸಂದರ್ಭದಲ್ಲಿ ಎಸ್ಎಫ್ಐ ರಾಜ್ಯಾಧ್ಯಕ್ಷ ಶಿವಪ್ಪ ಅಂಬ್ಲಿಕಲ್, ರಾಜ್ಯ ಕಾರ್ಯದರ್ಶಿ ವಿಜಯಕುಮಾರ್ ಟಿ ಎಸ್, ಕೇಂದ್ರ ಸಮಿತಿ ಸದಸ್ಯೆ ಸುಜಾತಾ ವೈ, ಉಪಾಧ್ಯಕ್ಷ ಬಸವರಾಜ ಎಸ್, ಗಣೇಶ ರಾಠೋಡ್, ಬಸವರಾಜ ಗುಳೆದಾಳು, ಸಿಐಟಿಯು ಅಧ್ಯಕ್ಷೆ ವನಂದನ, ಪದಾಧಿಕಾರಿ ಚಂದ್ರು ರಾಠೋಡ್, ಸುರೇಶ ಬಾಬು, ಅನಂತ, ರಾಜ್ಯ ಸಮಿತಿ ಸದಸ್ಯರಾದ ಅರ್ಪಿತಾ ಗ್ರೇಸಿ, ಬಾಲಾಜಿ, ಸೋಮಶೇಖರ, ಶಿವಾರೆಡ್ಡಿ, ಹಾಸ್ಟೆಲ್ ಉಪಸಮಿತಿ ರಾಜ್ಯ ಸಂಚಾಲಕ ಅರುಣ್ ನಾಗವತ್, ಸಹ ಸಂಚಾಲಕ ಶರೀಫ್, ಶರಣು ಹೆಚ್, ವಿನಾಯಕ ಎನ್ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಇದನ್ನೂ ನೋಡಿ : ಉದ್ಯೋಗ ಸೃಷ್ಟಿಯಲ್ಲಿ ಕುಂಟುತ್ತಿರುವ ಸರಕಾರಗಳು | ವಿಶ್ಲೇಷಣೆ : ಗುರುರಾಜ ದೇಸಾಯಿ Janashakthi Media

