ಬೆಂಗಳೂರು:ಇಲ್ಲಿನ ವಿಶ್ವ ವಿದ್ಯಾಲಯ ಹಾಸ್ಟೇಲ್ ಊಟದಲ್ಲಿ ಹುಳಗಳು ಪತ್ತೆಯಾಗಿದ್ದು, ಗುಣಮಟ್ಟದ ಆಹಾರ ನೀಡುವಂತೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ವಿವಿ ಹಾಸ್ಟೇಲ್
ವಿಶ್ವ ವಿದ್ಯಾಲಯದ ಬಾಯ್ಸ್ ಹಾಸ್ಟೇಲ್‌ನಲ್ಲಿ ಕಳಪೆ ಊಟ ನೀಡಲಾಗುತ್ತಿದೆ. ಇದಕ್ಕೆ ವಾರ್ಡನ್ ನಿರ್ಲಕ್ಷ್ಯವೇ ಕಾರಣ. ಊಟದಲ್ಲಿ ಹುಳಗಳು ಬರುತ್ತಿದ್ದು, ಇಂತಹ ಊಟವನ್ನು ಸೇವಿಸಿದರೆ ಆರೋಗ್ಯದ ಗತಿ ಏನು ಎಂದು ವಿದ್ಯಾರ್ಥಿಗಳು ಆಕೋಶ ವ್ಯಕ್ತಪಡಿಸಿದ್ದಾರೆ. ಹಾಸ್ಟೆಲ್‌ನಲ್ಲಿ ಮೂಲಸೌಕರ್ಯ ಕೊರತೆಯ ಬಗ್ಗೆ ಪ್ರಶ್ನೆ ಮಾಡಿದ್ರೆ ವಾರ್ಡನ್ ಗೂಂಡಾಗಳ ರೀತಿ ವರ್ತನೆ ತೋರುತ್ತಾರೆ. ಹೊಸದಾಗಿ ಬಂದ ವಿದ್ಯಾರ್ಥಿಗಳಿಗೆ ಬೆಡ್ ವ್ಯವಸ್ಥೆ ಮಾಡಿಲ್ಲ. ಸೂಕ್ತ ಶೌಚಾಲಯ ಇಲ್ಲ, ಗುಣಮಟ್ಟದ ಊಟ ಕೊಡುತ್ತಿಲ್ಲ 650 ವಿದ್ಯಾರ್ಥಿಗಳಿರುವ ಹಾಸ್ಟೆಲ್ ಇಲ್ಲಿಒಂದು ಕೊಠಡಿಯಲ್ಲಿ 8 ಮಂದಿಗೆ ಅವಕಾಶ ಬೇರೆ ಬೇರೆ ವಿದ್ಯಾರ್ಥಿಗಳಿಗೆ ಆಶ್ರಯ ನೀಡಿರುವ ಆರೋಪ ಮಾಡಿದ್ಧಾರೆ.
ಇದನ್ನೂ ಓದಿ: ನೆಲಮಂಗಲ : ಗ್ರಾಪಂ ಕಚೇರಿಯಲ್ಲಿ ಕಳ್ಳತನ
ಹಾಸ್ಟೇಲ್‌ನಲ್ಲಿ ಗುಣಮಟ್ಟದ ಆಹಾರ ನೀಡುವಂತೆ ಕೇಳಿದರೆ, ಹುಳಬಿದ್ದ ಆಹಾರವನ್ನೇ ತಿನ್ನುವಂತೆ ವಿದ್ಯಾರ್ಥಿನಿಲಯದ ವಾರ್ಡನ್ ದಬ್ಬಾಳಿಕೆ ಮಾಡುತ್ತಿದ್ದಾರೆ.ಇದು ಆರೋಗ್ಯದ ಮೇಲೂ ಪರಿಣಾಮ ಬೀರುತ್ತಿದೆ. ಹಾಗಾಗಿ ಹಾಸ್ಟಲ್ ವಾರ್ಡನನ್ನು ಕೂಡಲೇ ಅಮಾನತು ಮಾಡಬೇಕು ಎಂದು ವಿದ್ಯಾರ್ಥಿಗಳು ವಿಶ್ವವಿದ್ಯಾಲಯದ ಕುಲಪತಿ ಮತ್ತು ರಿಜಿಸ್ಟ್ರಾರ್ ರನ್ನು ಒತ್ತಾಯಿಸಿದ್ದಾರೆ.
ವಿಶ್ವ ವಿದ್ಯಾಲಯದ ಹಾಸ್ಟೇಲ್‌ನಲ್ಲಿ ನಿರಂತರವಾಗಿ ಕಳಪೆ ಊಟ ನೀಡಲಾಗುತ್ತಿದೆ. ಹಲವಾರು ಬಾರಿ ವಾರ್ಡನ್‌ಗೆ ತಿಳಿ ಹೇಳಿದರು ಅವರು ಸರಿ ಹೋಗುತ್ತಿಲ್ಲ. ಊಟವನ್ನು ಪ್ರಶ್ನಿಸಿದ ವಿದ್ಯಾರ್ಥಿಗಳ ಮೇಲೆ ಇಲ್ಲಸಲ್ಲದ ಆರೋಪ ಮಾಡಿ ಅವರನ್ನು ಹಾಸ್ಟೇಲ್‌ನಿಂದ ತೆಗೆಯುವ ಹುನ್ನಾರವೂ ನಡೆಯುತ್ತಿದೆ. ಹಾಸ್ಟೇಲ್ ವಾತಾವರಣವನ್ನು ಹಾಳು ಮಾಡುತ್ತಿರುವ ಈ ವಾರ್ಡನ್‌ನ್ನು ಅಮಾನತ್ತು ಮಾಡಬೇಕು ಎಂದು ವಿದ್ಯಾರ್ಥಿ ಸಂಘಟನೆಗಳು ಆಗ್ರಹಿಸಿವೆ.
ವಿಡಿಯೋ ನೋಡಿ: ಗೂಗಲ್ ಮತ್ತು ಯುಟ್ಯೂಬ್ ಹ್ಯಾಕ್ ಆಗದಂತೆ ಎಚ್ಚರಿಕೆ ವಹಿಸೋದು ಹೇಗೆ? – ಡಾ. ಎನ್. ಬಿ. ಶ್ರೀಧರ್ Janashakthi Media