‘ಸಮಯಕ್ಕೆ ಸರಿಯಾಗಿ ಬಸ್ ಬರುತ್ತಿಲ್ಲ’ ಆಕ್ರೋಶಗೊಂಡ ವಿದ್ಯಾರ್ಥಿಗಳಿಂದ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ

ಬಳ್ಳಾರಿ: ಸಮಯಕ್ಕೆ ಸರಿಯಾಗಿ ಬಸ್ ಬರುತ್ತಿಲ್ಲ ಎಂದು ಆಕ್ರೋಶಗೊಂಡ ವಿದ್ಯಾರ್ಥಿಗಳು ಶಾಲಾ, ಕಾಲೇಜು ಬಿಟ್ಟು ಜಿಲ್ಲಾಧಿಕಾರಿ ಕಚೇರಿಗೆ ಬಂದ ಘಟನೆ ಬಳ್ಳಾರಿ ತಾಲೂಕಿನ ಬೆಣಕಲ್ ಗ್ರಾಮದಲ್ಲಿ ಗುರುವಾರ ನಡೆದಿದೆ. ಹಲವು ದಿನಗಳಿಂದ ಬೆಣಕಲ್ ಗ್ರಾಮಕ್ಕೆ ಸಾರಿಗೆ ಇಲಾಖೆ ಬಸ್‌ ಬರುತ್ತಿಲ್ಲ.

ಇದರಿಂದ ವಿದ್ಯಾರ್ಥಿಗಳು, ಪ್ರಯಾಣಿಕರಿಗೆ ತೊಂದರೆಯಾಗಿದೆ. ಬಸ್ ಇರದ ಕಾರಣ ವಿದ್ಯಾರ್ಥಿಗಳು ಶಾಲಾ, ಕಾಲೇಜಿಗೆ ಹೋಗಲು ಸಮಸ್ಯೆ ಆಗಿದೆ. ಇದರಿಂದ ಶೈಕ್ಷಣಿಕವಾಗಿ ಪೆಟ್ಟು ಬೀಳುತ್ತಿದೆ.

ಇದನ್ನೂ ಓದಿ : ಬೆಳ್ತಂಗಡಿ| ಮಕ್ಕಳನ್ನು ಶಾಲೆಗೆ ಕೊಂಡೊಯ್ಯುವಾಗ ಕಾಡಾನೆ ದಾಳಿ

ಸಾಕಷ್ಟು ವಿದ್ಯಾರ್ಥಿಗಳಿಗೆ ಬಸ್ ಸಮಸ್ಯೆಯಿಂದ ಕಾಲೇಜು ತೊರೆಯುವ ಪರಿಸ್ಥಿತಿ ಉಂಟಾಗಿದೆ. ಈ ಬಗ್ಗೆ ಸಾರಿಗೆ ಘಟಕದ ಅಧಿಕಾರಿಗಳಿಗೆ ಹಲವು ಬಾರಿ ಮನವಿ ನೀಡಿ ಸಾಕಾಗಿದೆ. ಸಾರಿಗೆ ಇಲಾಖೆ ಅಧಿಕಾರಿಗಳು ಗಮನ ಹರಿಸದ ಕಾರಣ ಬೇಸತ್ತು ಶಾಲಾ ಕಾಲೇಜು ಬಿಟ್ಟು ಜಿಲ್ಲಾಧಿಕಾರಿ ಕಚೇರಿಗೆ ಬಂದಿದ್ದೇವೆ ಎಂದು ಅಲವತ್ತುಕೊಂಡರು.

ಮನವಿ ಆಲಿಸಿದ ಎಡಿಸಿ ಮಹ್ಮದ್‌ ಜುಬೇರ್ ಸಾರಿಗೆ ಇಲಾಖೆಯ ಜಿಲ್ಲಾಧಿಕಾರಿಗೆ ದೂರವಾಣಿಯಲ್ಲಿ ಮಾತನಾಡಿ, ಸಮಸ್ಯೆ ಪರಿಹರಿಸುವಂತೆ ಸೂಚಿಸಿದರು. ವಿದ್ಯಾರ್ಥಿಗಳಾದ ಅಶ್ವಿನಿ, ತ್ರಿವೇಣಿ, ರವಿ ತೇಜ, ತಿರುಮಲ, ಶಿವಕುಮಾರ್, ಸರ್ವಲಿಂಗ್‌, ಶಾಂತಿ ಸೇರಿ ಇತರರು ಇದ್ದರು.

ಇದನ್ನೂ ನೋಡಿ : ವಿಕ್ರಂಗೌಡ ಶೂಟೌಟ್ ಪ್ರಕರಣ – ನ್ಯಾಯಾಂಗ ತನಿಖೆಗೆ ಒಪ್ಪಿಸಿ – ಮಾಜಿ ನಕ್ಸಲರ ಆಗ್ರಹJanashakthi Media

Donate Janashakthi Media

Leave a Reply

Your email address will not be published. Required fields are marked *