ಚಿಕ್ಕಮಗಳೂರು: ಕಾಡಾನೆಗಳ ಉಪಟಳದ ಕಾರಣ ಜಿಲ್ಲೆಯ ಕೆಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ನಿಷೇಧಾಜ್ಞೆಯನ್ನೂ ಹೇರಲಾಗಿದೆ.
ಕಾಡಾನೆಗಳ ಉಪಟಳವು ಚಿಕ್ಕಮಗಳೂರು ಜಿಲ್ಲೆಯ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹೆಚ್ಚಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ 11 ಗ್ರಾಮಗಳಲ್ಲಿ ನಿಷೇಧಾಜ್ಞೆ ಹೇರಿ ಜಿಲ್ಲಾಡಳಿತ ಭಾನುವಾರ ಆದೇಶ ಹೊರಡಿಸಿತ್ತು. ಇದೀಗ ಕೆಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಾಲೆ ಕಾಲೇಜುಗಳಿಗೂ ರಜೆ ಘೋಷಣೆ ಮಾಡಿದ ಸಂಭಾವ್ಯ ಅನಾಹುತ ತಪ್ಪಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ.
ಚಿಕ್ಕಮಗಳೂರು ಜಿಲ್ಲೆಯ ವಸ್ತಾರ, ಮೂಗ್ತಿಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗಿದೆ. ಹೀಗಾಗಿ ವಸ್ತಾರ, ಮೂಗ್ತಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಹೇರಲಾಗಿದೆ. 2 ಗ್ರಾಮ ಪಂಚಾಯಿತಿ ವ್ಯಾಪ್ತಿಯ 13 ಗ್ರಾಮಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಗ್ರಾಮಗಳಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಕಾಡಾನೆಗಳ ಹಾವಳಿಗೆ ಕಾಫಿ, ಮಣಸು, ಬಾಳೆ ಬೆಳೆ ಸಂಪೂರ್ಣ ನಾಶವಾಗುತ್ತಿವೆ. ಸದ್ಯ, ಮಾರಿಕಟ್ಟೆ ಗ್ರಾಮದ ಕಾಫಿತೋಟದಲ್ಲಿ ಕಾಡಾನೆಗಳು ಬೀಡುಬಿಟ್ಟಿವೆ.
ಇದನ್ನೂ ಓದಿ: ಭೌಗೋಳಿಕ ವಾಸ್ತವವೂ ಟ್ರಂಪ್ ಮರುಆಯ್ಕೆಯೂ ಅಮೆರಿಕದ ಫಲಿತಾಂಶಗಳು ಜಾಗತಿಕವಾಗಿ ವಿಭಿನ್ನ ಪರಿಣಾಮಗಳನ್ನು ಬೀರುವ ಸಾಧ್ಯತೆಗಳಿವೆ
ಜಿಲ್ಲಾಡಳಿತದ ಆದೇಶದಲ್ಲೇನಿದೆ?
ಚಿಕ್ಕಮಗಳೂರು ತಾಲೂಕು ಮಹಳ್ಳಿ ಮತ್ತು ವಸ್ತಾರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಾದ ಮತ್ತಾವರ, ದಂಬದಹಳ್ಳಿ, ತಿರಗುಂದ, ದುಂಗರೆ, ಮೂಗಿಹಳ್ಳಿ, ಕಡಿಮಿದ್ರಿ ಹಾಗೂ ವಸ್ತಾರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಟದಗುರ ವಸ್ತಾರೆ, ನಂದಿಕರ ಹುಲುವಾಳ, ತಂಡವಳಿ, ಸಂಸ, ಬಿಜೆ ಕರೆ, ಗ್ರಾಮಗಳಲ್ಲಿ, ಬಿಟ್ಟು ಆನೆ ತಂಡವು ಸಂಚರಿಸುತ್ತಿದ್ದು ಸಾರ್ವಜನಿಕರ ಸುರಕ್ಷತೆ ದ್ರವ ಯಿಂದ ಮುಂಜಾಗ್ರತಾ ಕ್ರಮವಾಗಿ 10-11-2020 ರ ಸಂಜೆ 7 ರಿಂದ 11-11-2024 ರ ರಾತ್ರಿ 9ರ ವರೆಗೆ ಕಾಡಾನೆ ಇರುವ ಸುತ್ತಮುತ್ತಲಿನ ಗ್ರಾಮಗಳಲ್ಲಿ ಸಾರ್ವಜನಿಕರಿಂದ ಕಾರ್ಯಾಚರಣೆಗೆ ತೊಂದರೆ ಉಂಟಾಗದಂತೆ ಸೂಕ್ತ ಭದ್ರತೆ ಒದಗಿಸಬೇಕಾಗಿ ವಲಯ ಅರಣ್ಯಾಧಿಕಾರಿ ಆಲ್ಲೂರು ವಲಯ ಚಿಕ್ಕಮಗಳೂರು ಅವರು ಕೋರಿರುತ್ತಾರೆ.
ಹೀಗಾಗಿ ಮೇಲೆ ಉಲ್ಲೇಖಿಸಿರುವ ಗ್ರಾಮಗಳಲ್ಲಿ ಗ್ರಾಮಗಳಲ್ಲಿ ಸಾರ್ವಜನಿಕರ ಸುರಕ್ಷತೆ ದೃಷ್ಟಯಿಂದ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಡಳಿತದ ಆದೇಶ ತಿಳಿಸಿದೆ.
ವಿದ್ಯಾರ್ಥಿಗಳು, ಶಾಲಾ ಸಿಬ್ಬಂದಿ ಓಡಾಟಕ್ಕೆ ನಿರ್ಬಂಧ
ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿರುವುದರಿಂದ ವಿದ್ಯಾರ್ಥಿಗಳು ಹಾಗೂ ಶಾಲಾ ಕಾಲೇಜು ಸಿಬ್ಬಂದಿ ಓಡಾಡುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಡಳಿತದ ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಕರ್ತವ್ಯದ ಮೇಲಿರುವ ಸರ್ಕಾರಿ ಅಧಿಕಾರಿಗಳು ಮತ್ತು ನೌಕರರಿಗೆ ಮಾತ್ರ ನಿಷೇಧಾಜ್ಞೆಯಿಂದ ವಿನಾಯಿತಿ ನೀಡಲಾಗಿದೆ.
ಇದನ್ನೂ ನೋಡಿ: ಎಲ್ಐಸಿ ಖಾಸಗೀಕರಣದ ವಿರುದ್ಧ ಹೋರಾಟ ಬಲಗೊಳ್ಳಲಿದೆ – ಎಸ್.ಕೆ ಗೀತಾ Janashakthi Media