ವೈರಲ್ ಆಡಿಯೋದಿಂದ ಬಿಜೆಪಿಯಲ್ಲಿ ಸಂಚಲನ; ವಿಜಯೇಂದ್ರ ನಾಯಕತ್ವಕ್ಕೆ ಸವಾಲು!

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನದ ಬಳಿಕ ರಾಜ್ಯ ಬಿಜೆಪಿಯಲ್ಲಿ ಒಳರಾಜಕೀಯ ಚಟುವಟಿಕೆಗಳು ಚುರುಕುಗೊಂಡಿದ್ದು, ‘ಸಡನ್ ಆಪರೇಷನ್’ ಕುರಿತು ಚರ್ಚೆಗಳು ಜೋರಾಗಿವೆ.

ಪಕ್ಷದ ಕೆಲ ಶಾಸಕರು ಅಡ್ಡ ಮತದಾನ ಮಾಡಿದ ಹಿನ್ನೆಲೆ, ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರ ನಾಯಕತ್ವದ ಮೇಲೆ ಪ್ರಶ್ನೆಗಳು ಉದ್ಭವವಾಗಿವೆ ಎಂಬ ಮಾತುಗಳು ಕೇಳಿಬರುತ್ತಿವೆ.

ಇದನ್ನೂ ಓದಿ: ದೇಶದಲ್ಲೇ ರಸ್ತೆ ಅಪಘಾತಗಳಲ್ಲಿ ಬೆಂಗಳೂರು ಮೊದಲ ಸ್ಥಾನ; ಕರ್ನಾಟಕ ನಾಲ್ಕನೇ ಸ್ಥಾನದಲ್ಲಿ

ಈ ಮಧ್ಯೆ, ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರದ್ದು ಎನ್ನಲಾದ ಆಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದರಲ್ಲಿ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ತೆರವುಗೊಳಿಸುವಂತೆ ದೆಹಲಿ ನಾಯಕತ್ವದ ಮೇಲೆ ಒತ್ತಡ ಹೇರಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಬಿಜೆಪಿ ಕೇಂದ್ರ ನಾಯಕನೊಂದಿಗಿನ ಸಂಭಾಷಣೆ ಎನ್ನಲಾಗಿರುವ ಈ ಆಡಿಯೋ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಪಕ್ಷದೊಳಗಿನ ಬಣ ಬಡಿದಾಟ ಮತ್ತೆ ಮೆಲುಕು ಹಾಕಿದೆ.

ಇನ್ನೊಂದೆಡೆ, ಬಿಜೆಪಿ ರಾಜ್ಯಾಧ್ಯಕ್ಷರ ಅವಧಿ ಸಾಮಾನ್ಯವಾಗಿ ಮೂರು ವರ್ಷಗಳಾಗಿದ್ದು, ವಿಜಯೇಂದ್ರ ಅವರು ಆ ಅವಧಿಯನ್ನು ಶೀಘ್ರದಲ್ಲೇ ಪೂರ್ಣಗೊಳಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ನಾಯಕತ್ವ ಬದಲಾವಣೆ ಕುರಿತು ಊಹಾಪೋಹಗಳು ಮತ್ತಷ್ಟು ಗರಿಗೆದರಿವೆ.

ಇದನ್ನೂ ನೋಡಿ: ಬೀದಿ ವ್ಯಾಪಾರಿಗಳನ್ನು ರಕ್ಷಿಸಿ – ಪ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ Janashakthi Media

Donate Janashakthi Media

Leave a Reply

Your email address will not be published. Required fields are marked *