ಬೆಂಗಳೂರು: ರಾಜ್ಯ ಸರ್ಕಾರ ಇಬ್ಬರು ಹಿರಿಯ ಐಪಿಎಸ್ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಿಲು ಆದೇಶ ಹೊರಡಿಸಿದೆ.
ಐಪಿಎಸ್ ಅಧಿಕಾರಿ ಶರತ್ ಚಂದ್ರ ಅವರನ್ನು ಪೊಲೀಸ್ ನೇಮಕಾತಿ ವಿಭಾಗದ ನಿರ್ದೇಶಕರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಇದರ ಜೊತೆಗೆ ಟ್ರಾಫಿಕ್, ರಸ್ತೆ ಸುರಕ್ಷತಾ ವಿಭಾಗದ ಎಡಿಜಿಪಿ ಜವಾಬ್ದಾರಿಯನ್ನೂ ನೀಡಲಾಗಿದೆ.
ಇದನ್ನು ಓದಿ : ಸೀತಾರಾಂ ಯಚೂರಿ ನಿಧನ: ಪ್ರಧಾನಿ ಮೋದಿ, ವಿಪಕ್ಷ ನಾಯಕ ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರಿಂದ ಸಂತಾಪ
ಈ ಹಿಂದೆ ಶರತ್ ಚಂದ್ರ ಗುಪ್ತಚರ ಇಲಾಖೆ ಎಡಿಜಿಪಿಯಾಗಿದ್ದರು.
ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಅವರನ್ನು ಗುಪ್ತಚರ ಇಲಾಖೆ ನೀತನ ಎಡಿಜಿಪಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಇದರ ಜೊತೆಗೆ ಹೇಮಂತ್ ನಿಂಬಾಳ್ಕರ್ ವಾರ್ತಾ ಇಲಾಖೆ ಆಯುಕ್ತರಾಗಿಯೂ ಮುಂದುವರೆಯಲಿದ್ದಾರೆ.
ಇದನ್ನು ನೋಡಿ : ಪ್ರತಿಭಟನೆಗಳನ್ನು ಫ್ರೀಡಂ ಪಾರ್ಕ್‌ಗೆ ಸೀಮಿತಗೊಳಿಸಿರುವ ಆದೇಶ ಹಿಂಪಡೆಯಿರಿJanashakthi Media