ಸುದ್ದಿ ಪ್ರಸಾರ ಮಾಡಲು ಮಾಧ್ಯಮಗಳ ಮೇಲೆ ವಿಧಿಸಲಾಗಿದ್ದ ನಿರ್ಬಂಧವನ್ನು ರದ್ದುಗೊಳಿಸಿ ಹೈಕೋರ್ಟ್

ಬೆಂಗಳುರು : ಸುದ್ದಿ ಪ್ರಸಾರ ಮಾಡಲು ಮಾಧ್ಯಮಗಳ ಮೇಲೆ ವಿಧಿಸಲಾಗಿದ್ದ ನಿರ್ಬಂಧವನ್ನು ರದ್ದುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ರಹಸ್ಯವಾಗಿ ಹೂತಿಟ್ಟಿದ್ದ  ಕೇಸ್ ಗೆ ಸಂಬಂಧಪಟ್ಟಂತೆ ಇಂದು (ಆ.1) ಹೈಕೋರ್ಟ್  ಮಹತ್ವದ ಆದೇಶ ನೀಡಿದೆ.

ಈಗಾಗಲೇ ಈ ಕೇಸ್ ನ ತನಿಖೆಗಾಗಿ ರಾಜ್ಯ ಸರ್ಕಾರ ಎಸ್.ಐ.ಟಿ ರಚನೆ ಮಾಡಿದ್ದು, ಅಧಿಕಾರಿಗಳ ತಂಡ ದೂರುದಾರ ತೋರಿಸಿರುವ ಸ್ಥಳಗಳಲ್ಲಿ ಈಗಾಗಲೇ ಅಗೆಯುವ ಕಾರ್ಯ ಪ್ರಾರಂಭಿಸಿದ್ದು ತನಿಖೆ ಮುಂದುವರೆದಿದೆ.ಈ ಮಧ್ಯೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ಅವರ ಸಹೋದರ ಹರ್ಷೇಂದ್ರ ಕುಮಾರ್.ಡಿ ಅವರು ಮಾಧ್ಯಮಗಳ ವಿರುದ್ಧ ತಡಿದ್ದ ಪ್ರತಿಬಂಧಕಾದೇಶವನ್ನು ತಂದಿದ್ದರು.ಈ ಬಗ್ಗೆ ಕ್ಷೇತ್ರ ಮತ್ತು ಕುಟುಂಬದ ಹೆಸರನ್ನು ಹಾನಿ ಮಾಡುವ ಸಾಧ್ಯತೆಯನ್ನು ಪರಿಗಣಿಸಿ ನಿರ್ಭಂಧ ವಿಧಿಸಲಾಗಿತ್ತು.

ಮಾಧ್ಯಮಗಳ ಮೇಲಿನ ನಿರ್ಬಂಧವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿದೆ. ಈ ಪ್ರಕರಣದ ಸಂಪೂರ್ಣ ಬೆಳವಣಿಗೆಗಳನ್ನು ಗಮನಿಸಿದ ಮಾನ್ಯ ನ್ಯಾಯಾಲಯ ದಿನಾಂಕ 8-7-2025ರಂದು ವಿಚಾರಣಾಧೀನ ನ್ಯಾಯಾಲಯ ನೀಡಿರುವ ಆಕ್ಷೇಪಾರ್ಹ ಮತ್ತು ಏಕಪಕ್ಷೀಯ ಪ್ರತಿಬಂಧಕಾದೇಶವನ್ನು ರದ್ದುಪಡಿಸಿ ಹೊಸ ಆದೇಶ ನೀಡಿದೆ ಮತ್ತು ಮಧ್ಯಂತರ ಅರ್ಜಿಯನ್ನು ಹೊಸದಾಗಿ ಪರಿಗಣಿಸಲು ಪ್ರಕರಣವನ್ನು ಸಕ್ಷಮ ನ್ಯಾಯಾಲಯಕ್ಕೆ ವಾಪಾಸ್ ಕಳುಹಿಸಿದೆ.

ಆದ್ರೆ ಇದೀಗ ಈ ಕೇಸ್ ನ ತನಿಖೆ ಚುರುಕಾಗಿದ್ದು, ಈಗಾಗಲೇ ಆರನೇ ಪಾಯಿಂಟ್ ನಲ್ಲಿ ಅಗೆಯುವ ವೆಲ್ ಮಾನವ ಮೂಳೆಗಳು ಕೂಡ ಲಭ್ಯವಾಗಿದೆ. ಹೀಗಾಗಿ ಇಂದು ಈ ಪ್ರತಿಬಂಧಕಾದೇಶವನ್ನು ಪ್ರಶ್ನಿಸಿ ಹೈಕೋರ್ಟ್ ಗೆ ದಕ್ಷಿಣ ಕನ್ನಡದ ಕುಡ್ಲ ರ್ಯಾಂಪೇಜ್ ಎಂಬ ಮಾಧ್ಯಮದ ಪ್ರಧಾನ ಸಂಪಾದಕ ಅಜಯ್ ಎಂಬ ವ್ಯಕ್ತಿ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿ ಈ ತೀರ್ಪು ನೀಡಿದೆ.

Donate Janashakthi Media

Leave a Reply

Your email address will not be published. Required fields are marked *