ಬೆಂಗಳೂರು; ಜ, 06: ರಾಜ್ಯ ಬಿಜೆಪಿ ಸರಕಾರವು ಅನುಷ್ಠಾನಕ್ಕೆ ತರಲು ಹೊರಟ್ಟಿದ್ದ ಗೋಹತ್ಯೆ ನಿಷೇಧ ಸುಗ್ರಿವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ.
ವಿಧಾನಸಭೆಯಲ್ಲಿ ಅಂಗೀಕೃತವಾದ ಗೋ ಹತ್ಯೆ ನಿಷೇಧ ವಿಧೇಯಕ, ಪರಿಷತ್ ನಲ್ಲಿ ಮಂಡನೆ ಯಾಗಿರಲಿಲ್ಲ. ಇದರ ಜಾರಿಗಾಗಿ ಕರ್ನಾಟಕ ಸರ್ಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಮುಂದಾಗಿದ್ದು, ಮಸೂದೆಯನ್ನು ಈ ಹಿಂದೆ ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಿಕೊಟ್ಟಿತ್ತು.
ಇದನ್ನು ಓದಿ : ಗೋಹತ್ಯೆ ನಿಷೇಧದ ಮೂಲಕ ಆಹಾರ ಹಕ್ಕಿನ ಮೇಲೆ ದಾಳಿ, ಹಲವರ ಆಕ್ರೊಶ
ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ-2020” ಕಾಯ್ದೆಯನ್ನು ಸುಗ್ರೀವಾಜ್ಞೆ ಗೆ ರಾಜ್ಯಪಾಲರು ಅಂಗೀಕಾರ ನೀಡಿದ್ದು, ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ. ವಿಧಾನಪರಿಷತ್ ನಲ್ಲಿ ಅಂಗೀಕಾರಗೊಳ್ಳದ ವಿವಾದಿತ ಗೋ ಹತ್ಯೆ ನಿಷೇಧ ಸುಗ್ರೀವಾಜ್ಞೆ ಮೂಲಕ ಅಂಗೀಕಾರವಾಗಿದ್ದು, ಈ ಸಂಬಂಧ ಇದೀಗ ಸರ್ಕಾರ ಜಾನುವಾರು ಸಂರಕ್ಷಣೆ ಮತ್ತು ಹತ್ಯೆ ಪ್ರತಿಬಂಧಕ ಕಾಯ್ದೆಯನ್ನು ಅಧಿಕೃತ ಕಾಯ್ದೆ ರಾಜ್ಯದಲ್ಲಿ ಜಾರಿಗೆ ಬಂದಿದೆ ಎಂದು ಹೇಳಿದೆ.
ಇದನ್ನು ಓದಿ : ಸುಗ್ರೀವಾಜ್ಞೆ ಮೂಲಕ ಗೋಹತ್ಯೆ ನಿಷೇಧ ಕಾಯ್ದೆ ಜಾರಿ
ಬಿಜೆಪಿ ಸರಕಾರವು ಸುಗ್ರೀವಾಜ್ಞೆ ಮೂಲಕ ಗೋಹತ್ಯಾ ನಿಷೇಧ ಕಾಯ್ದೆಯನ್ನು ಜಾರಿಗೊಳಿಸಿದ್ದು, ಇದು ಆಹಾರ ಹಕ್ಕಿನ ಮೇಲಿನ ದಾಳಿ ಎಂದು ಪ್ರಗತಿಪರ ಸಂಘಟನೆಗಳ ಮುಖಂಡರು ಆರೋಪಿಸಿದ್ದಾರೆ. “ನಮ್ಮ ಆಹಾರ ನಮ್ಮ ಆಯ್ಕೆ” ಆದರೆ ಗೋ ಮಾಂಸ ತಿನ್ನುವುದು ಬಿಜೆಪಿ ಹಿಂದುತ್ವ ಅಜೆಂಡದಲ್ಲಿ ವಿರೋಧವಾಗಿದೆ. ಹಾಗಾಗಿ ಗೋಹತ್ಯಾ ನಿಷೇಧ ವಿರೋಧದ ನಡುವೆಯೋ ಸುಗ್ರೀವಾಜ್ಞೆಯ ಮೂಲಕ ಜಾರಿಗೊಳಿಸಿರುವುದು ಅಧಿಕಾರದ ದುರುಪಯೋಗ ಎಂದು ಅನೇಕರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನು ಓದಿ : ಗೋಹತ್ಯೆ ನಿಷೇಧದ ಮೂಲಕ ಆಹಾರ ಹಕ್ಕಿನ ಮೇಲೆ ದಾಳಿ, ಹಲವರ ಆಕ್ರೊಶ
But Yavag Barutte Gohatyhe Kaayde Nishedha Soon Bandre Olliyadagutte