2015 ಡ್ರಗ್ಸ್‌ ಪ್ರಕರಣ: ಕಾಂಗ್ರೆಸ್‌ ಶಾಸಕ ಸುಖಪಾಲ್‌ ಸಿಂಗ್ ಖೈರಾ ಬಂಧನ

ಚಂಡೀಗಢ: ಕಾಂಗ್ರೆಸ್‌ ಶಾಸಕ ಸುಖಪಾಲ್‌ ಸಿಂಗ್ ಖೈರಾ ಅವರನ್ನು 2015ರ ಡ್ರಗ್ಸ್‌ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಪಂಜಾಬ್ ರಾಜ್ಯ ಪೊಲೀಸರು ಗುರುವಾರ ಬೆಳ್ಳಿಗ್ಗೆ ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನಾರ್ಕೊಟಿಕ್ಸ್‌ ಡ್ರಗ್ಸ್‌ ಆ್ಯಂಡ್‌ ಸೈಕೋಟ್ರಾಪಿಕ್‌ ಸಬ್‌ಸ್ಟನ್ಸಸ್‌ ಆ್ಯಕ್ಟ್‌ ಅಡಿಯಲ್ಲಿ ಸುಖಪಾಲ್‌ ಖೈರಾ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಅವರನ್ನು ಫಜಿಲ್ಕಾದಲ್ಲಿರುವ ಜಲಾಲಬಾದ್‌ಗೆ ಕರೆದೊಯ್ಯಲಾಗುತ್ತಿದೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸುಖಪಾಲ್‌ ಖೈರಾ ಅವರು  ಬಂಧನಕ್ಕೂ ಮೊದಲು ಪೊಲೀಸರ ಜೊತೆ ವಾಗ್ವಾದ ನಡೆಸಿದ್ದಾರೆ. ಹಾಗೆಯೇ, ಬಂಧನದ ಘಟನೆಯನ್ನು ಫೇಸ್‌ಬುಕ್‌ ಲೈವ್ ಮೂಲಕ ಜನರಿಗೆ ತೋರಿಸಿದ್ದಾರೆ. ಡ್ರಗ್ಸ್‌ ಪ್ರಕರಣ

ಅಕ್ರಮವಾಗಿ ಮಾದಕವಸ್ತು ಸಾಗಣೆ ಪ್ರಕರಣದಲ್ಲಿ ಸುಖಪಾಲ್‌ ಖೈರಾ ಸಿಲುಕಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ರಸ್ತೆಯಲ್ಲಿ ಅತ್ಯಾಚಾರ ಸಂತ್ರಸ್ತೆ ನರಳಾಟ: ಬಿಜೆಪಿ ವಿರುದ್ಧ ಪ್ರಿಯಾಂಕಾ ಗಾಂಧಿ ಕಿಡಿ

ಸುಖಪಾಲ್‌ ಸಿಂಗ್‌ ಖೈರಾ ಅವರನ್ನು 2021ರಲ್ಲೂ ಬಂಧನಕ್ಕೊಳಪಡಿಸಲಾಗಿತ್ತು. ಅಕ್ರಮವಾಗಿ ಮಾದಕವಸ್ತು ಸಾಗಣೆ, ಮಾದಕವಸ್ತು ದಂಧೆ, ಅಕ್ರಮವಾಗಿ ಹಣ ವರ್ಗಾವಣೆ ಸೇರಿ ಹಲವು ಪ್ರಕರಣಗಳಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸುಖಪಾಲ್‌ ಸಿಂಗ್‌ ಅವರನ್ನು ಬಂಧಿಸಿ ವಿಚಾರಣೆ ನಡೆಸಿದ್ದರು.

ವಿಡಿಯೋ ನೋಡಿ:ಬಳ್ಳಿ ಮಾತ್ರವಲ್ಲ ಬೇರುಗಳನ್ನು ಕೂಡಾ ನಾಶ ಪಡಿಸಬೇಕು: ಚೈತ್ರ ಕುಂದಾಪುರ ವಂಚನೆ ಹಗರಣದ ಬಗ್ಗೆ ಹೋರಾಟಗಾರರ ಆಗ್ರಹ

Donate Janashakthi Media

Leave a Reply

Your email address will not be published. Required fields are marked *