ಹಾಲಕ್ಕಿ ಹಾಡುಗಳ ಕೋಗಿಲೆ, ಪದ್ಮಶ್ರೀ ಪುರಸ್ಕೃತ ಸುಕ್ರಿ ಬೊಮ್ಮಗೌಡ ನಿಧನ

ಅಂಕೋಲಾ :ಹಾಲಕ್ಕಿ ಹಾಡುಗಳ ಕೋಗಿಲೆ ಎಂದೆ ಪ್ರಸಿದ್ಧಿ ಪಡೆದಿದ್ದ ಹಾಗೂ ಪದ್ಮಶ್ರೀ ಪುರಸ್ಕೃತ ಸುಕ್ರಿ ಬೊಮ್ಮಗೌಡ ಅವರು ಇಂದು ನಿಧಾನರಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಬಡಿಗೇರಿಯ ತಮ್ಮ ನಿವಾಸದಲ್ಲಿ ಸುಕ್ರಿ ಬೊಮ್ಮಗೌಡ (91) ಅವರು ವಯೋಸಹಜ ಕಾಯಿಲೆಯಿಂದ ಇಂದು ನಿಧನರಾಗಿದ್ದಾರೆ. ಹಾಲಕ್ಕಿ

ಕೆಲವು ದಿನದ ಹಿಂದೆ ಉಸಿರಾಟ ಸಮಸ್ಯೆಯಿಂದ ಉಡುಪಿಯಲ್ಲಿ ಚಿಕಿತ್ಸೆ ಪಡೆದು ಬಂದಿದ್ದರು. ಆದರೆ ಇಂದು ಮುಂಜಾನೆ 4 ಗಂಟೆ ಸಮಯಕ್ಕೆ ಅಂಕೋಲದ ಬಡಿಗೇರಿಯ ಅವರ ನಿವಾಸದಲ್ಲಿ ನಿಧನರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಹಾಲಕ್ಕಿ ಜಾನಾಂಗ ಜಾನಪದ ಕೋಗಿಲೆ ಎಂದೇ ಪ್ರಸಿದ್ದಿ ಪಡೆದಿದ್ದ ಸುಕ್ರಿ ಬೊಮ್ಮಗೌಡ ಅವರು, ಹಾಲಕ್ಕಿ ಜಾನಪದ ಹಾಡುಗಳ ಜೊತೆ ಮದ್ಯ ನಿಷೇಧ ಹೋರಾಟ ಸೇರಿದಂತೆ ಹಲವು ಹೋರಾಟದಲ್ಲಿ ಭಾಗಿಯಾಗಿದ್ದರು. ಅಂಕೋಲದ ಬಡಿಗೇರಿ ಗ್ರಾಮವನ್ನು ಮದ್ಯ ಮುಕ್ತ ಗ್ರಾಮವನ್ನಾಗಿ ಮಾಡಿದ್ದರು.

ಇದನ್ನೂ ಓದಿ : ಉತ್ತರ ಕನ್ನಡ: ವೃಕ್ಷಮಾತೆ, ಪದ್ಮಶ್ರೀ ಪುರಸ್ಕೃತೆ ತುಳಸಿ ಗೌಡ ನಿಧನ ಹಾಲಕ್ಕಿ

ಉತ್ತರಕನ್ನಡ ಜಿಲ್ಲೆಯ ಅಂಕೋಲಾದ ಹಾಲಕ್ಕಿ ಒಕ್ಕಲಿಗ ಜನಾಂಗಕ್ಕೆ ಸೇರಿದ ಸುಕ್ರಿ ಬೊಮ್ಮಗೌಡ ಅವರು ಸುಪ್ರಸಿದ್ಧ ಜಾನಪದ ಗಾಯಕಿಯಾಗಿದ್ದರು. ಸುಮಾರು 5 ಸಾವಿರ ಹಾಲಕ್ಕಿ ಹಾಡುಗಳು ಕಂಠಪಾಟವಾಗಿದ್ದವು. ಅವರು ಜಾನಪದ ಕಲೆಗೆ ನೀಡಿದ ಕೊಡುಗೆಗಳಿಗಾಗಿ ಮತ್ತು ಸಾಂಪ್ರದಾಯಿಕ ಬುಡಕಟ್ಟು ಸಂಗೀತವನ್ನು ಸಂರಕ್ಷಿಸುವ ಕಾರ್ಯಕ್ಕಾಗಿ ಹಲವು ಪ್ರಶಸ್ತಿಗಳನ್ನು ಸಂಪಾದಿಸಿದ್ದಾರೆ.

ಸುಕ್ರಿ ಬೊಮ್ಮಗೌಡ ಅವರಿಗೆ ಸುಕ್ರಜ್ಜಿ ಎಂದು ಹಾಲಕ್ಕಿ ಕೋಗಿಲೆ ಜಾನಪದ ಕೋಗಿಲೆ ಎಂದು ಕೆರಯುತ್ತಾರೆ. ಸಾಕ್ಷರತಾ ಆಂದೋಲನ, ಸಾರಾಯಿ ನಿಷೇಧ ಆಂದೋಲನ, ಉಳುವವನೇ ಹೊಲದೊಡೆಯ, ಪರಿಶಿಷ್ಟ ಜಾತಿ ಗುರುತಿಸುವಿಕೆಯಂತಹ ಚಳವಳಿಗಳಿಗಾಗಿ ಖುದ್ದು ಭಾಗವಹಿಸಿ ಹೋರಾಡಿದ್ದಾರೆ.

ಜನಪದ ಹಾಗೂ ಸಾಮಾಜಿಕ ಸೇವಾ ಕ್ಷೇತ್ರಕ್ಕೆ ಸುಕ್ರಿ ಬೊಮ್ಮ ಗೌಡ ನೀಡಿರುವ ಕೊಡುಗೆ ಗುರುತಿಸಿ, 2017ರಲ್ಲಿ ಭಾರತ ಸರ್ಕಾರವು ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು. ಇನ್ನು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ನಾಡೋಜ ಸೇರಿದಂತೆ ದೇಶ ಹಾಗೂ ರಾಜ್ಯದ ಹಲವು ಪ್ರತಿಷ್ಠಿತ ಪ್ರಶಸ್ತಿ ಸುಕ್ರಿ ಬೊಮ್ಮ ಗೌಡ ಅವರನ್ನು ಅರಸಿಕೊಂಡು ಬಂದಿವೆ. ಹಾಲಕ್ಕಿ

Donate Janashakthi Media

Leave a Reply

Your email address will not be published. Required fields are marked *