ಬೆಂಗಳೂರು: ನಗರದ ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯ ಇಬ್ಬರು ಪೊಲೀಸ್ ಸಿಬ್ಬಂದಿಗಳು ಸುಲಿಗೆ ಮಾಡುವ ಉದ್ದೇಶದಿಂದ ವ್ಯಕ್ತಿಯ ಬ್ಯಾಗಿನಲ್ಲಿ ತಾವೇ ಗಾಂಜಾ ಇಟ್ಟ ಪ್ರಸಂಗ ಬೆಳಕಿಗೆ ಬಂದಿದ್ದು, ಇದೀಗ ಇಬ್ಬರು ಪೊಲೀಸರನ್ನು ಅಮಾನತು ಮಾಡಲಾಗಿದೆ.
ಕಳೆದ ವಾರ ನಡೆದಿದ್ದ ಈ ಘಟನೆಯ ತನಿಖೆ ನಡೆಸಿದ ಪೊಲೀಸ್ ಇಲಾಖೆ ಆರೋಪಿತ ಇಬ್ಬರನ್ನು ಅಮಾನತುಗೊಳಿಸಿದೆ. ಇಬ್ಬರ ವಿರುದ್ಧಶಿಸ್ತುಕ್ರಮ ಜರುಗಿಸಿರುವುದನ್ನು ಡಿಸಿಪಿ ಸಿ.ಕೆ.ಬಾಬಾ ದೃಢಪಡಿಸಿದ್ದಾರೆ.
ಇದನ್ನು ಓದಿ: ಕಾಂಜಾವಾಲ ಅಪಘಾತ ಪ್ರಕರಣ: ಅಂದು ಕರ್ತವ್ಯದಲ್ಲಿದ್ದ 11 ಪೊಲೀಸರು ಅಮಾನತು
‘ಈ ಪ್ರಕರಣದ ವಿಚಾರಣೆಯು ಮುಕ್ತಾಯಗೊಂಡಿದ್ದು, ವಿಚಾರಣಾಧಿಕಾರಿ ನೀಡಿದ ವರದಿ ಆಧಾರದ ಮೇಲೆ ಶಿಸ್ತುಕ್ರಮ ಜರುಗಿಸಲಾಗಿದೆ. ಕರ್ತವ್ಯಲೋಪ ಎಸಗಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ’ ಎಂದು ಡಿಸಿಪಿ ಸಿ.ಕೆ. ಬಾಬಾ ಹೇಳಿದ್ದಾರೆ.
ಕಳೆದ ವಾರ ವೈಭಲ್ ಪಾಟೀಲ್ ಎಂಬವರು ಘಟನೆಗೆ ಸಂಬಂಧಿಸಿದಂತೆ ಸರಣಿ ಟ್ವೀಟ್ ಮಾಡಿ ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್ ಠಾಣೆಯ ಇಬ್ಬರು ಪೊಲೀಸ್ ಸಿಬ್ಬಂದಿಗಳ ಕಿರುಕುಳಕ್ಕೆ ಒಳಗಾಗಿದ್ದ ನೋವನ್ನು ತೋಡಿಕೊಂಡರು. ಎಚ್‌ಎಸ್‌ಆರ್ ಲೇಔಟ್ನಲ್ಲಿ ರಾಪಿಡೋ ದ್ವಿಚಕ್ರ ವಾಹನದಲ್ಲಿ ಚಲಿಸುತ್ತಿದ್ದ ವೇಳೆ ಓರ್ವ ಪೊಲೀಸ್ ತಡೆದು ವಿಚಾರಣೆ ನಡೆಸಿದರು. ತಪಾಸಣೆ ಕೈಗೊಂಡು ಸುಲಿಗೆ ಮುಂದಾದರು ನನ್ನ ಬಳಿ ಇದ್ದ ₹ 2,500 ಕಿತ್ತುಕೊಂಡರು. ಮನೆ ತಲುಪಲು ಕನಿಷ್ಠ ₹ 100 ಕೊಡಿ ಎಂದರೂ ಕೇಳಲಿಲ್ಲ ಬರೆದು ಟ್ವೀಟ್ ಮಾಡಿದ್ದರು.
ಇದನ್ನು ಓದಿ: ಚಿಕ್ಕಮಗಳೂರು: ಚಿನ್ನದ ವರ್ತಕನನ್ನು ಬೆದರಿಸಿ ಪೊಲೀಸರಿಂದಲೇ ದರೋಡೆ! ನಾಲ್ವರು ಅಮಾನತು
ಅನಗತ್ಯವಾಗಿ ನನ್ನನ್ನು ಮಾದಕ ವಸ್ತು ಕಾಯ್ದೆ ಪ್ರಕರಣಕ್ಕೆ ಸಿಲುಕಿಸಲಾಗುತ್ತಿದೆ ಎಂದು ಅವರು ದೂರಿದ್ದರು. ಅಲ್ಲದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನವರಿ 13ರಂದು ಬಂಡೇಪಾಳ್ಯ ಪೊಲೀಸ್ ಠಾಣೆಯಲ್ಲಿ ನನ್ನ ಹೇಳಿಕೆ ದಾಖಲಿಸಿದೆ. ಇಬ್ಬರು ಪೊಲೀಸರನ್ನು ಗುರುತಿಸಿದರು. ನನ್ನ ಲಿಖಿತ ಮತ್ತು ಮೌಖಿಕ ಹೇಳಿಕೆಯನ್ನು ನೀಡಿದ್ದೇನೆ ಎಂದಿದ್ದರು.
ಇಲ್ಲಿ ಕ್ಲಿಕ್ ಮಾಡಿ : ಜನಶಕ್ತಿ ಮೀಡಿಯಾ ವಾಟ್ಸ್‌ಪ್ ಗುಂಪು ಸೇರಲು ಈ ಲಿಂಕ್ ಕ್ಲಿಕ್ ಮಾಡಿ