ದಾವಣಗೆರೆ: ಬೇಡ ಜಂಗಮ ಎಂದು ನಕಲಿ ಪರಿಶಿಷ್ಟ ಜಾತಿ(ಎಸ್‌ಸಿ) ಪ್ರಮಾಣ ಪತ್ರ ಪಡೆದಿದ್ದಾರೆ ಎಂದು ಆರೋಪಿಸಿ ಎಂ.ಪಿ. ದ್ವಾರಕೇಶ್ವರಯ್ಯ ವಿರುದ್ಧ ಪ್ರತಿಭಟನೆ ನಡೆಸಿದ ದಲಿತ ಮುಖಂಡರು ಅವರನ್ನು ಮುತ್ತಿಗೆ ಹಾಕಿದ್ದರು.
ಹೂವಿನಮಡು ಅಂಜನಪ್ಪ. ಹೆಗ್ಗೆರೆ ರಂಗಪ್ಪ ಸೇರಿ 13 ಜನ ದಲಿತ ಮುಖಂಡರ ವಿರುದ್ಧ ದ್ವಾರಕೇಶ್ವರಯ್ಯ ಪ್ರಕರಣವನ್ನು ದಾಖಲಿಸಿದ್ದಾರೆ. ನಗರದ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ದ್ವಾರಕೇಶ್ವರಯ್ಯ ದೂರು ದಾಖಲಿಸಿದ್ದು, ಮಾರ್ಚ್ 28ರಂದು ದಾವಣಗೆರೆ ಪ್ರೆಸ್ ಕ್ಲಬ್ ಎದುರು ನಡೆದ ಘಟನೆ ಹಿನ್ನೆಲೆಯಲ್ಲಿ ಕೇಸು ದಾಖಲು ಮಾಡಲಾಗಿದೆ.
ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಸಹೋದರ ಎಂ.ಪಿ. ದ್ವಾರಕೇಶ್ವರಯ್ಯ ಹೋರಾಟಗಾರರ ಮೇಲೆಯೇ ಆರೋಪ ಮಾಡುತ್ತಿದ್ದಾರೆ. ಅಲ್ಲದೆ, ಕೆಲ ದಿನಗಳ ಹಿಂದೆ ಪತ್ರಿಕಾಗೋಷ್ಠಿಯನ್ನು ನಡೆಸಿದ ಕಾನೂನು ಬದ್ಧವಾಗಿಯೇ ʻಬೇಡ ಜಂಗಮʼ ಪ್ರಮಾಣ ಪತ್ರ ಪಡೆದುಕೊಂಡಿರುವುದಾಗಿ ಸಮರ್ಥಿಸಿಕೊಂಡಿದ್ದರು.
ಇದನ್ನು ಓದಿ: ವಿಧಾನಮಂಡಲ ಅಧಿವೇಶನ: ಬಿಜೆಪಿ ಶಾಸಕ ರೇಣುಕಾಚಾರ್ಯ ಪುತ್ರಿಗೆ ನಕಲಿ ಜಾತಿ ಪ್ರಮಾಣ ಪತ್ರದ ವಿಚಾರ ಚರ್ಚೆ
ರೇಣುಕಾಚಾರ್ಯ ವಿರುದ್ಧ ಹೋರಾಟಕ್ಕೆ ಸಜ್ಜಾದ ದಲಿತ ಸಂಘಟನೆಗಳು ರೇಣುಕಾಚಾರ್ಯ ಕುಟುಂಬ ಈಗಾಗಲೇ ಹಿಂದು ಲಿಂಗಾಯತ ಇದ್ದವರು ಬೇಡಜಂಗಮ ಎಸ್ಸಿ ಜಾತಿ ಪ್ರಮಾಣ ಪತ್ರ ಪಡೆದಿದ್ದಾರೆ. ಈ ವಿಚಾರ ಪ್ರಶ್ನೆ ಮಾಡಿದಕ್ಕೆ ರೇಣುಕಾಚಾರ್ಯ ಸಹೋದರ ನಮ್ಮ ಮೇಲೆ ದೂರು ದಾಖಲಿಸಿದ್ದಾರೆ. ರೇಣುಕಾಚಾರ್ಯ ಅವರನ್ನ ತಕ್ಷಣ ಗಡಿಪಾರು ಮಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಇಲ್ಲವಾದಲ್ಲಿ ರಾಜ್ಯಾದ್ಯಂತ ಹೋರಾಟ ಆರಂಭಿಸುವುದಾಗಿ ದಲಿತರ ಸಂಘಟನೆಗಳ ಒಕ್ಕೂಟದಿಂದ ಎಚ್ಚರಿಕೆ ನೀಡಿದ್ದಾರೆ.
ಪ್ರತಿಭಟನೆ ಆರಂಭಕ್ಕೂ ಮುನ್ನ ದಾವಣಗೆರೆ ನಗರದ ಹದಡಿ ರಸ್ತೆಯಲ್ಲಿ ಇರುವ ಅಂಬೇಡ್ಕರ್ ಪ್ರತಿಮೆಗೆ ಹಾಲಿನ ಅಭಿಷೇಕ ಮಾಡಲಾಗಿದೆ. ತಕ್ಷಣವೇ ರೇಣುಕಾಚಾರ್ಯ ಕುಟುಂಬ ಬೇಡ ಜಂಗಮ ಹೆಸರಿನಲ್ಲಿ ಪಡೆದ ಎಸ್ಸಿ ಪ್ರಮಾಣ ಪತ್ರ ವಾಪಸ್ಸು ಪಡೆಯಬೇಕು ಎಂದು ಆಗ್ರಹಿಸಿದ್ದಾರೆ. ಅವರನ್ನ ಗಡಿ ಪಾರು ಮಾಡಬೇಕು. ಹಾಗೆ ಬಿಟ್ಟರೇ ಅಧಿಕಾರ ಬಳಿಸಿ ಮತ್ತೆ ದಬ್ಬಾಳಿಕೆ ಮಾಡುವ ಸಾದ್ಯತೆ ಇದೆ ಎಂದು ದಲಿತ ಮುಖಂಡರು ಆರೋಪಿಸಿದ್ದಾರೆ.