ಬೆಳ್ತಂಗ: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಹಲವು ಮಹಿಳೆಯರ ಅತ್ಯಾಚಾರ, ಕೊಲೆ ಆರೋಪದ ಬಗ್ಗೆ ತನಿಖೆ ನಡೆಸುತ್ತಿರುವ ಎಸ್‌ಐಟಿ, ಅಕ್ಟೋಬರ್ 27ರಂದು ಮೂವರು ಸಾಮಾಜಿಕ ಹೋರಾಟಗಾರರಾದ ಮಹೇಶ್ ಶೆಟ್ಟಿ ತಿಮರೋಡಿ, ಟಿ ಜಯಂತ್ ಮತ್ತು ಗಿರೀಶ್ ಮಟ್ಟಣ್ಣವರ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದ್ದೂ, ಒಂದು ವೇಳೆ ವಿಚಾರಣೆಗೆ ಹಾಜರಾಗದಿದ್ದಲ್ಲಿ ಬಂಧಿಸಬೇಕಾಗುತ್ತದೆ ಎಂದು ನೋಟಿಸ್ ನಲ್ಲಿ ಉಲ್ಲೇಖಿಸಿರುವುದಾಗಿ ಮೂಲಗಳು ಹೇಳಿವೆ.
ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಅಕ್ಟೋಬರ್ 27 ರಂದು ಸೋಮವಾರ 10 :30 ಕ್ಕೆ ವಿಚಾರಣೆಗೆ ಹಾಜರಾಗಲು ಸೌಜನ್ಯ ಪರ ಹೋರಾಟದ ನೇತೃತ್ವ ವಹಿಸಿರುವ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ಜಯಂತ್ ಟಿ, ವಿಠಲ್ ಗೌಡ ಎಂಬವರಿಗೆ ಅಕ್ಟೋಬರ್ 24 ರಂದು ನೋಟಿಸ್ ಜಾರಿ ಮಾಡಲಾಗಿದೆ. ಅಕ್ಟೋಬರ್ 27ರಂದು ವಿಚಾರಣೆಗೆ ಹಾಜರಾಗದಿದ್ದಲ್ಲಿ BNS 35(3) ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ನೋಟೀಸ್ ನಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ: ಶಾಲೆಯಲ್ಲಿ ಇಂಕ್ ಸುರಿದಿದ್ದಕ್ಕೆ ಥಳಿತ; ಬಾಲಕಿ ಐಸಿಯುಗೆ ದಾಖಲು: ಮುಖ್ಯ ಶಿಕ್ಷಕಿ ಅಮಾನತು
ಸಾಕ್ಷಿ ದೂರು ದಾರನಾಗಿ ಬಂದ ಚಿನ್ನಯ್ಯ ತಂದಿದ್ದ ಬುರುಡೆಗೆ ಸಂಬಂಧಿಸಿದಂತೆ ಇವರ ವಿಚಾರಣೆ ನಡೆಸಿದ್ದ ಎಸ್‌ಐಟಿ ಅಧಿಕಾರಿಗಳು ಇದೀಗ ಮತ್ತೆ ಹಾಜರಾಗಲು ತಿಳಿಸಿದ್ದಾರೆ.
ಅಕ್ಟೋಬರ್ 27ರಂದು ಸೌಜನ್ಯ ಪರ ಹೋರಾಟಗಾರರು ಬೆಳ್ತಂಗಡಿ ತಹಶೀಲ್ದಾರರಿಗೆ ಮನವಿ ಸಲ್ಲಿಸುವ ಕಾರ್ಯಕ್ರಮ ಇಟ್ಟುಕೊಂಡಿದ್ದು ಇದೇ ದಿನ ಇವರಿಗೆ ಹಾಜರಾಗುವಂತೆ ನೋಟೀಸ್ ನೀಡಿರುವುದು ಕುತೂಹಲ ಮೂಡಿಸಿದೆ.
ಇದನ್ನೂ ನೋಡಿ: ನಿರಂಜನ | ಶತಮಾನದ ಮರುಓದು” – ಅಕ್ಟೋಬರ್ 31 ಸಮಾರೋಪ ಕಾರ್ಯಕ್ರಮ Janashakthi Media
