ನವದೆಹಲಿ: ಸುನೀತಾ ಕೇಜ್ರಿವಾಲ್ ಮಹತ್ವದ ಜವಾಬ್ದಾರಿ ವಹಿಸಿಕೊಂಡಿದ್ದು, ಆಮ್ ಆದ್ಮಿ ಪಕ್ಷದ ಪರವಾಗಿ ಸುನೀತಾ ಗುಜರಾತ್ನಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ.
ಆಪ್ ಗುಜರಾತ್ ನ ಸ್ಟಾರ್ ಪ್ರಚಾರಕರ ಪಟ್ಟಿ ಇಂದು ಬಿಡುಗಡೆಯಾಗಲಿದೆ. ಈ ಪಟ್ಟಿಯಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪತ್ನಿ ಹೆಸರು ಇರಲಿದೆ ಎಂದು ತಿಳಿದುಬಂದಿದೆ. ಕೇಜ್ರಿವಾಲ್ ಜೈಲಿನಿಂದ ಎಎಪಿ ಶಾಸಕರಿಗೆ ಸಂದೇಶ ಕಳುಹಿದ್ದು, ಜನಪರ ಕೆಲಸ ಮಾಡುವಂತೆ ಮುಖ್ಯಮಂತ್ರಿಗಳು ಶಾಸಕರಿಗೆ ಮನವಿ ಮಾಡಿದ್ದಾರೆಂದು ತಿಳಿದುಬಂದಿದೆ.
26 ಕ್ಷೇತ್ರಗಳಿರುವ ಗುಜರಾತ್ನಲ್ಲಿ ಎಎಪಿ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ. ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿರುವ ಎಎಪಿ ಭರೂಚ್ ಹಾಗೂ ಭಾವನಗರ್ ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದೆ. ಈ ಕ್ಷೇತ್ರಗಳಲ್ಲಿ ಎಎಪಿ ಅಭ್ಯರ್ಥಿಗಳ ಪರ ಸುನೀತಾ ಪ್ರಚಾರ ನಡೆಸಲಿದ್ದಾರೆ. ಉಳಿದ 24 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸ್ಪರ್ಧಿಸಲಿದೆ. ಎಎಪಿ ಭರೂಚ್ನಿಂದ ಚೈತರ್ ವಾಸವ ಹಾಗೂ ಭಾವನಗರ್ನಿಂದ ಉಮೇಶ್ ಮಕ್ವಾನರ್ನ್ನ ಕಣಕ್ಕಿಳಿಸಿದೆ.
ಕೇಜ್ರಿವಾಲ್ ಜೊತೆ ಮಾತನಾಡಿದ ನಂತರ ಸುನಿತಾ ಸುದ್ದಿ ಗೋಷ್ಠಿ ನಡೆಸಿದ್ದು, ಜನರಿಗೆ ಯಾವುದೇ ತೊಂದರೆ ಆಗಬಾರದು ಎಂದು ಸಿಎಂ ಹೇಳಿದ್ದಾರೆ. ಪ್ರತಿಯೊಬ್ಬ ಶಾಸಕರು ಪ್ರತಿನಿತ್ಯ ಆಯಾ ಪ್ರದೇಶಗಳಿಗೆ ಭೇಟಿ ನೀಡಬೇಕು. ಸ್ಥಳದಲ್ಲೇ ಜನರನ್ನು ಕೇಳಿ ಸಮಸ್ಯೆ ಬಗೆಹರಿಸಬೇಕೆಂದು ಸೂಚನೆ ನೀಡಿದ್ದಾರೆ. ದೆಹಲಿಯ ಎರಡು ಕೋಟಿ ಜನರನ್ನು ಸಿಎಂ ತಮ್ಮ ಕುಟುಂಬ ಎಂದು ಪರಿಗಣಿಸುತ್ತಾರೆ. ಆರೋಗ್ಯ ಸರಿಯಿಲ್ಲದಿದ್ದರೂ ಸಾರ್ವಜನಿಕ ಸಮಸ್ಯೆಗಳತ್ತ ಹೆಚ್ಚಿನ ಗಮನ ಹರಿಸುತ್ತಿದ್ದಾರೆ. ಜನರಿಗೆ ಯಾವುದೇ ಸಮಸ್ಯೆಯಾಗದಂತೆ ಶಾಸಕರು ಶ್ರಮಿಸಬೇಕು ಎಂದು ತಿಳಿಸಿದ್ದಾರೆ ಎಂದರು.
ಇದನ್ನೂ ಓದಿ: ಎಎಪಿ ನಾಯಕರು ಸುನೀತಾ ಕೇಜ್ರಿವಾಲ್ ಅವರನ್ನು ಭೇಟಿ ಮಾಡಿದರು
ಅಬಕಾರಿ ನೀತಿ ಸಂಬಂಧಿತ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮುಖ್ಯಮಂತ್ರಿ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯವು ಮಾರ್ಚ್ 21 ರಂದು ಬಂಧಿಸಿತ್ತು. ಪ್ರಸ್ತುತ ತಿಹಾರ್‌ನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.
ಇದನ್ನೂ ನೋಡಿ: ರಾಮ ನವಮಿ ವಿಶೇಷ : ರಾಮಯ್ಯ ಬಾರಯ್ಯ ಮೋದಿಯ ಕೇಳಯ್ಯ Janashakthi Media