ಆದೇಶ ಕಾಯ್ದಿರಿಸಿದ 3 ತಿಂಗಳೊಳಗೆ ತೀರ್ಪು ಪ್ರಕಟಿಸಿ: ಹೈಕೋರ್ಟ್‌ಗಳಿಗೆ ಸುಪ್ರೀಂ ಕೋರ್ಟ್ ನಿರ್ದೇಶನ

ನವದೆಹಲಿ :  ದೇಶದ ಎಲ್ಲಾ ಹೈಕೋರ್ಟ್‌ಗಳು ತೀರ್ಪು ಕಾಯ್ದಿರಿಸಿದ ಬಳಿಕ ಗರಿಷ್ಠ ಮೂರು ತಿಂಗಳೊಳಗೆ ತೀರ್ಪು ಪ್ರಕಟಿಸಬೇಕು ಎಂದು ಸುಪ್ರೀಂ ಕೋರ್ಟ್ ಮಹತ್ವದ ನಿರ್ದೇಶನ ನೀಡಿದೆ. ತೀರ್ಪು ಪ್ರಕಟಿಸುವಲ್ಲಿ ಆಗುವ ವಿಳಂಬವು ಅರ್ಜಿದಾರರಿಗೆ ಅಪೂರಣೀಯ ಹಾನಿ ಉಂಟುಮಾಡುತ್ತದೆ ಎಂದು ಹೇಳಿರುವ ಸುಪ್ರೀಂ ಕೋರ್ಟ್, ನ್ಯಾಯ ವಿತರಣಾ ವ್ಯವಸ್ಥೆಯಲ್ಲಿ ವೇಗ ಮತ್ತು ಪಾರದರ್ಶಕತೆ ಅಗತ್ಯ ಎಂದು ಒತ್ತಿಹೇಳಿದೆ. ಆದೇಶ

ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಹಾಗೂ ನ್ಯಾಯಮೂರ್ತಿ ಜಾಯ್‌ಮಲ್ಯ ಬಾಗ್ಚಿ ಅವರಿದ್ದ ಪೀಠವು, ವಿಶೇಷವಾಗಿ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ತ್ವರಿತ ನಿರ್ಧಾರ ಅಗತ್ಯ ಎಂದು ತಿಳಿಸಿದೆ. ಜಾಮೀನು ಅರ್ಜಿಗಳ ಮೇಲಿನ ಆದೇಶವನ್ನು ಸಾಧ್ಯವಾದಷ್ಟು ಅದೇ ದಿನ ಪ್ರಕಟಿಸಬೇಕು; ಕಾಯ್ದಿರಿಸಿದರೆ ಮುಂದಿನ ದಿನವೇ ಪ್ರಕಟಿಸಿ ವೆಬ್‌ಸೈಟ್‌ಗೆ ಅಪ್‌ಲೋಡ್ ಮಾಡಬೇಕು ಎಂದು ಸೂಚಿಸಿದೆ.

ಇದನ್ನೂ ಓದಿ : NEET ಶುಲ್ಕ ಮರುಪಾವತಿ: ಬ್ಯಾಂಕ್‌ ವಿವರ ಸಲ್ಲಿಕೆಗೆ ಜೂನ್‌ 22ರವರೆಗೆ ಗಡುವು ವಿಸ್ತರಣೆ

ಇದಲ್ಲದೆ, ಜಾಮೀನು ಅಥವಾ ಶಿಕ್ಷೆ ಅಮಾನತು ಆದೇಶಗಳನ್ನು ತಕ್ಷಣವೇ ಜೈಲು ಅಧಿಕಾರಿಗಳಿಗೆ ರವಾನಿಸಬೇಕು ಮತ್ತು ಬಂಧಿತ ವ್ಯಕ್ತಿಯನ್ನು ಅದೇ ದಿನ ಅಥವಾ ಮುಂದಿನ ದಿನ ಬಿಡುಗಡೆ ಮಾಡುವಂತೆ ನ್ಯಾಯಾಲಯ ಸೂಚಿಸಿದೆ. ತೀರ್ಪು ಕಾಯ್ದಿರಿಸಿದ ನಾಲ್ಕು ತಿಂಗಳಾದರೂ ಪ್ರಕಟವಾಗದಿದ್ದರೆ ಸಂಬಂಧಿತ ಪಕ್ಷಗಳು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯನ್ನು ಸಂಪರ್ಕಿಸಿ ಪ್ರಕರಣವನ್ನು ಮತ್ತೊಂದು ಪೀಠಕ್ಕೆ ವರ್ಗಾಯಿಸುವಂತೆ ಮನವಿ ಮಾಡಬಹುದೆಂದೂ ಸುಪ್ರೀಂ ಕೋರ್ಟ್ ಹೇಳಿದೆ.

ಸಂವಿಧಾನದ ವಿಧಿ 142ರ ಅಡಿಯಲ್ಲಿ ಈ ಮಾರ್ಗಸೂಚಿಗಳನ್ನು ಹೊರಡಿಸಿರುವ ಸುಪ್ರೀಂ ಕೋರ್ಟ್, ಇವು ಯಾವುದೇ ನಿರ್ದಿಷ್ಟ ನ್ಯಾಯಮೂರ್ತಿ ಅಥವಾ ಹೈಕೋರ್ಟ್‌ ವಿರುದ್ಧದ ಟೀಕೆಗಳಲ್ಲ; ನ್ಯಾಯಾಂಗದ ಮೇಲಿನ ಸಾರ್ವಜನಿಕ ನಂಬಿಕೆ ಬಲಪಡಿಸುವ ಉದ್ದೇಶದಿಂದ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದೆ.

ಇದನ್ನೂ ನೋಡಿ : ಯುವಜನರನ್ನು “ಕಾಕ್ರೋಚ್” ಎಂದವರ ವಿರುದ್ಧ ಡಿಜಿಟಲ್‌ ಚಳವಳಿ! – ಕಾಕ್ರೋಚ್ ಜನತಾ ಪಾರ್ಟಿ Janashakthi Media

Donate Janashakthi Media

Leave a Reply

Your email address will not be published. Required fields are marked *