ಬಾಂಬೆ ಹೈಕೋರ್ಟ್ ಆದೇಶಕ್ಕೆ ತಡೆ ನೀಡಬೇಕು ಎಂದು ಮಹಾರಾಷ್ಟ್ರ ಸರಕಾರ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್

ಹೊಸದಿಲ್ಲಿ: ಮಾರ್ಚ್ 5ರಂದು ದಿಲ್ಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ಜಿ.ಎನ್.ಸಾಯಿಬಾಬಾ ಹಾಗೂ ಇನ್ನಿತರ ಐದು ಮಂದಿಯನ್ನು  ಖುಲಾಸೆಗೊಳಿಸಬೇಕು ಎಂಬ ಬಾಂಬೆ ಹೈಕೋರ್ಟ್ ಆದೇಶಕ್ಕೆ ತಡೆ ನೀಡಬೇಕು ಎಂದು ಮಹಾರಾಷ್ಟ್ರ ಸರಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ  ವಜಾಗೊಳಿಸಿದೆ. ಸುಪ್ರೀಂ ಕೋರ್ಟ್

ಅವರಿಗೆ ಮಾವೋವಾದಿಗಳೊಂದಿಗೆ ಸಂಪರ್ಕವಿದೆ ಎಂದು ಆರೋಪಿಸಿ ಅವರನ್ನು ಯುಎಪಿಎ ಕಾಯ್ದೆಯಡಿ ಸೆರೆವಾಸದಲ್ಲಿಡಲಾಗಿತ್ತು.

ಇದನ್ನು ಓದಿ : ಕೇಂದ್ರ ಚುನಾವಣಾ ಆಯುಕ್ತ ಅರುಣ್ ಗೋಯಲ್ ರಾಜಿನಾಮೆ

ಸಾಯಿಬಾಬಾ ಮತ್ತಿತರರನ್ನು ಖುಲಾಸೆಗೊಳಿಸಲು ಮೇಲ್ನೋಟದ ಸಾಕ್ಷ್ಯಾಧಾರಗಳು ಸೂಕ್ತವಾಗಿವೆ ಎಂಬುದನ್ನು ನ್ಯಾಯಾಲಯ ಗಮನಕ್ಕೆ ತೆಗೆದುಕೊಂಡಿತು ಎಂದು PTI ಸುದ್ದಿ ಸಂಸ್ಥೆ ವರದಿ ಮಾಡಿದೆ.

ಕಳೆದ ವಾರ, ಬಾಂಬೆ ಹೈಕೋರ್ಟ್ ನ ನಾಗಪುರ ನ್ಯಾಯಪೀಠವು ಸಾಯಿಬಾಬಾ ಹಾಗೂ ಇನ್ನಿತರ ಐದು ಮಂದಿಯನ್ನು ಖುಲಾಸೆಗೊಳಿಸಿತ್ತಲ್ಲದೆ, ತಮ್ಮನ್ನು ದೋಷಿ ಎಂದು ತೀರ್ಪು ನೀಡಿದ 2017ರ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲೂ ಅವರಿಗೆ ಅವಕಾಶ ಒದಗಿಸಿತ್ತು.

https://www.youtube.com/watch?v=81886J9e-is
Donate Janashakthi Media

Leave a Reply

Your email address will not be published. Required fields are marked *