ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ ಆಹ್ವಾನಕ್ಕೆ ವಿರೋಧ; ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್‌

ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಗೆ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸೆಪ್ಟೆಂಬರ್‌ 19ರಂದು ವಜಾಗೊಳಿಸಿ ಸುಪ್ರೀಂ ಕೋರ್ಟ್‌ ಆದೇಶ ಹೊರಡಿಸಿದೆ.

ಇದೇ ಸೆಪ್ಟೆಂಬರ್.‌22ರಂದು ದಸರಾ ಉದ್ಘಾಟನೆ ನಡೆಯಲಿದ್ದು, ಆದ್ದರಿಂದ ತುರ್ತು ಅರ್ಜಿ ವಿಚಾರಣೆ ನಡೆಸಬೇಕೆಂದು ಸಿಜೆಐ ಗವಾಯಿ ಮುಂದೆ ಮನವಿ ಮಾಡಲಾಗಿತ್ತು.

ಇದನ್ನೂ ಓದಿ: ಶರಾವತಿ ಪಂಪ್ಡ್ ಸ್ಟೋರೇಜ್ ವಿದ್ಯುತ್ ಯೋಜನೆಗೆ ಸಿಪಿಐ(ಎಂ) ಉತ್ತರ ಕನ್ನಡ ಜಿಲ್ಲಾ ಸಮಿತಿ ವಿರೋಧ

ಈ ಹಿನ್ನೆಲೆಯಲ್ಲಿಂದು ಬಾನು ಮುಷ್ತಾಕ್‌ ಆಯ್ಕೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿ ಸುಪ್ರೀಂಕೋರ್ಟ್‌ ಆದೇಶ ಹೊರಡಿಸಿದೆ.

ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ ಆಯ್ಕೆ ವಿರೋಧಿಸಿ ಮಾಜಿ ಸಂಸದ ಪ್ರತಾಪ್‌ ಸಿಂಹ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ಇತ್ತೀಚೆಗೆ ವಜಾ ಮಾಡಿತ್ತು. ಸರ್ಕಾರದ ನಿರ್ಧಾರ ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿತ್ತು.

ಆದರೀಗ ಸುಪ್ರೀಂ ಕೋರ್ಟ್‌ನಲ್ಲೂ ಅರ್ಜಿ ವಜಾಗೊಂಡಿದ್ದು, ಬಾನು ಮುಷ್ತಾಕ್‌ ಅವರೇ ದಸರಾ ಉದ್ಘಾಟನೆ ಮಾಡೋದು ಫಿಕ್ಸ್‌ ಆಗಿದೆ.

ಇದನ್ನೂ ನೋಡಿ: ಕಾನೂನು ಅರಿವು | ಮಕ್ಕಳ ಕಸ್ಟಡಿ ಮತ್ತು ಪಾಲನೆ ಕಾನೂನುಗಳು | ಜನಶಕ್ತಿ ಮೀಡಿಯಾ, ಧ್ವನಿ ಲೀಗಲ್ ಟ್ರಸ್ಟ್

Donate Janashakthi Media

Leave a Reply

Your email address will not be published. Required fields are marked *