ಪತಂಜಲಿ| ದಾರಿತಪ್ಪಿಸುವ ಜಾಹೀರಾತು ಪ್ರಕರಣದಲ್ಲಿ ರಾಮ್‌ದೇವ್‌ಗೆ ಸಮನ್ಸ್ ಜಾರಿ

ನವದೆಹಲಿ : ಕಳೆದ ವರ್ಷ ನವೆಂಬರ್‌ನಲ್ಲಿ ನ್ಯಾಯಾಲಯಕ್ಕೆ ಭರವಸೆ ನೀಡಿದ್ದರೂ ಸಹ, ಔಷಧಗಳು ಮತ್ತು ಮಾಂತ್ರಿಕ ಪರಿಹಾರಗಳ ಉಲ್ಲಂಘನೆ (ಆಕ್ಷೇಪಾರ್ಹ ಜಾಹೀರಾತುಗಳು) ಕಾಯಿದೆ, 1954 ಉಲ್ಲಂಘಿಸಿ ತಪ್ಪುದಾರಿಗೆಳೆಯುವ ಜಾಹೀರಾತುಗಳನ್ನು ಪ್ರಕಟಿಸಿದ್ದಕ್ಕಾಗಿ ಪತಂಜಲಿ ಆಯುರ್ವೇದ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಖುದ್ದು ಹಾಜರಾಗುವಂತೆ ಸ್ವಯಂ ಘೋಷಿತ ಯೋಗ ಗುರು ಬಾಬಾ ರಾಮ್‌ದೇವ್ ಅವರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ಸೂಚಿಸಿದೆ.

ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ ಮತ್ತು ಅಹ್ಸಾನುದ್ದೀನ್ ಅಮಾನುಲ್ಲಾ ಅವರನ್ನೊಳಗೊಂಡ ನ್ಯಾಯಪೀಠ, ಈ ಹಿಂದೆ ನೀಡಲಾದ ನೋಟಿಸ್ ಗೆ ಪ್ರತಿಕ್ರಿಯೆ ನೀಡದ ಕಂಪನಿ ಮತ್ತು ಬಾಲಕೃಷ್ಣ ಅವರ ನಡೆಯನ್ನು ತೀವ್ರವಾಗಿ ಖಂಡಿಸಿತು.

ನ್ಯಾಯಾಲಯಕ್ಕೆ ನೀಡಿದ ಭರವಸೆಯನ್ನು ಮೇಲ್ನೋಟಕ್ಕೆ ಉಲ್ಲಂಘಿಸಿದ್ದಕ್ಕಾಗಿ ಅವರ ವಿರುದ್ಧ ಏಕೆ ನ್ಯಾಯಾಂಗ ನಿಂದನೆ ಮೊಕದ್ದಮೆ ಪ್ರಾರಂಭಿಸಬಾರದು ಎಂಬುದಕ್ಕೆ ಪ್ರತಿಕ್ರಿಯೆ ನೀಡುವಂತೆ ಅವರಿಗೆ ಸೂಚನೆ ನೀಡಿತ್ತು. ರಾಮ್‌ದೇವ್ ಅವರ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕ್ರಿಯೆಗಳನ್ನು ಏಕೆ ಪ್ರಾರಂಭಿಸಬಾರದು ಎಂಬ ಕಾರಣವನ್ನು ತಿಳಿಸಲು ನ್ಯಾಯಪೀಠ ನೋಟಿಸ್ ಜಾರಿಗೊಳಿಸಿತು.

ಇದನ್ನೂ ಓದಿಪತಂಜಲಿ ಜಾಹೀರಾತುಗಳ ಮೇಲೆ ನಿಷೇಧ; ಬಾಬಾ ರಾಮ್‌ದೇವ್ ವಿರುದ್ಧ ಸುಪ್ರೀಂ ವಾಗ್ದಾಳಿ

ಪತಂಜಲಿ ಆಯುರ್ವೇದ ವ್ಯವಸ್ಥಾಪಕ ನಿರ್ದೇಶಕ ಆಚಾರ್ಯ ಬಾಲಕೃಷ್ಣ ಅವರಿಗೆ ಏಪ್ರಿಲ್ 2 ರಂದು ಮುಂದಿನ ವಿಚಾರಣೆಗೆ ಬಾಬಾ ರಾಮ್‌ದೇವ್ ಅವರೊಂದಿಗೆ ನ್ಯಾಯಾಲಯಕ್ಕೆ ಹಾಜರಾಗುವಂತೆ ಪೀಠವು ಸೂಚಿಸಿದೆ.

ಫೆಬ್ರವರಿ 27 ರಂದು ಬಾಲಕೃಷ್ಣ ಅವರಿಗೆ ನೀಡಿದ್ದ ಶೋಕಾಸ್ ನೋಟಿಸ್‌ಗೆ ಪ್ರತಿಕ್ರಿಯೆ ಸಲ್ಲಿಸದ ಹಿನ್ನೆಲೆಯಲ್ಲಿ ನ್ಯಾಯಾಲಯವು ಬಾಲಕೃಷ್ಣ ಅವರ ಹಾಜರಾತಿಗೆ ಆದೇಶ ನೀಡಿತು. ಪತಂಜಲಿ ಪರ ವಾದ ಮಂಡಿಸಿದ ಹಿರಿಯ ವಕೀಲ ಮುಲ್ಕುಲ್ ರೋಹಟಗಿ ಅವರು ಉತ್ತರ ನೀಡದ ಕಾರಣ ನೀಡಿದ ವಿವರಣೆಯನ್ನು ಪೀಠ ತಳ್ಳಿಹಾಕಿತು.

ನವೆಂಬರ್ 21, 2023 ರಂದು ನ್ಯಾಯಾಲಯವು ನಿಷೇಧಿಸಿದ ಪತಂಜಲಿ ಜಾಹೀರಾತುಗಳನ್ನು ಅನುಮೋದಿಸಿದ್ದರಿಂದ ಬಾಬಾ ರಾಮ್‌ದೇವ್ ಅವರು ಈ ಪ್ರಕರಣದಲ್ಲಿ ವಿಚಾರಣೆ ನಡೆಸಬೇಕೆಂದು ಪೀಠವು ಸೂಚಿಸಿತು.

ರಾಮ್‌ದೇವ್ ಅವರು ಲಸಿಕೆ ಅಭಿಯಾನ ಮತ್ತು ಆಧುನಿಕ ಔಷಧಗಳ ವಿರುದ್ಧ ಅಪಪ್ರಚಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ.

 

Donate Janashakthi Media

Leave a Reply

Your email address will not be published. Required fields are marked *