ಚಿತ್ತಾಪುರ ಕ್ಷೇತ್ರದಲ್ಲಿ ಅಕ್ರಮ: ಪ್ರಿಯಾಂಕ್ ಖರ್ಗೆಗೆ ಸುಪ್ರೀಂ ಕೋರ್ಟ್‌ ನೋಟಿಸ್

ನವದೆಹಲಿ: ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಚುನಾವಣಾ ಆಯೋಗಕ್ಕೆ 2023ರ ಚುನಾವಣೆಯಲ್ಲಿ ಚಿತ್ತಾಪುರ ಕ್ಷೇತ್ರದಲ್ಲಿ ಅಕ್ರಮ ನಡೆಸಲಾಗಿದೆ ಎಂಬ ಆರೋಪದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಡಿಸೆಂಬರ್‌ 8ರಂದು ನೋಟಿಸ್ ಜಾರಿ ಮಾಡಿದೆ. ಚಿತ್ತಾಪುರ

ಇದನ್ನೂ ಓದಿ: ಬೆಂಗಳೂರಿನಲ್ಲಿ ಸುರಂಗ ರಸ್ತೆ ಯೋಜನೆ ಸಾರಿಗೆ ದಟ್ಟಣೆಗೆ ಉತ್ತರವೇ?

ಸುಳ್ಳು ಜಾತಿ ಪ್ರಮಾಣಪತ್ರ ಹಾಗೂ ಶೈಕ್ಷಣಿಕ ದಾಖಲೆಗಳನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಿರುವುದಲ್ಲದೇ, ಉಚಿತ ಗ್ಯಾರಂಟಿಗಳ ಮೂಲಕ ಮತದಾರರಿಗೆ ಆಮಿಷವೊಡ್ಡಿ ವಿಧಾನ ಸಭೆ ಚುನಾವಣೆಯಲ್ಲಿ ಗೆದ್ದಿರುವ ಪ್ರಿಯಾಂಕ್ ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

ಪ್ರಿಯಾಂಕ್ ಅವರು  ಪರಿಶಿಷ್ಟ ಜಾತಿ ಪ್ರಮಾಣಪತ್ರದ ಬದಲು ಗ್ರಾಮ ಪಂಚಾಯಿತಿ ಚುನಾವಣೆಗೆ ಸಲ್ಲಿಸಲಾಗುವ ಜಾತಿ ಮತ್ತು ಆದಾಯ ಪ್ರಮಾಣಪತ್ರ ಸಲ್ಲಿಸಿದ್ದಾರೆ. ಅದೂ 2021ರ ಪ್ರಮಾಣ ಪತ್ರವಾಗಿದೆ. ಶೈಕ್ಷಣಿಕ ಅರ್ಹತೆಗೆ ಸಂಬಂಧಿಸಿದಂತೆಯೂ ಅಸಮರ್ಪಕ ಮತ್ತು ನಕಲಿ ದಾಖಲೆಗಳನ್ನು ಸಲ್ಲಿಸಿದ್ದಾರೆ.

ಇದಲ್ಲದೆ, ಕಾಂಗ್ರೆಸ್‌ನಿಂದ ಗ್ಯಾರಂಟಿ ಕಾರ್ಡ್ ಯೋಜನೆಗಳ ಮೂಲಕ ಮತದಾರರಿಗೆ ಆಮಿಷ ಒಡ್ಡಿದ್ದು, ಇದು ಲಂಚ ಹಾಗೂ ಭ್ರಷ್ಟಾಚಾರಕ್ಕೆ ಸಮ ಎಂದೂ ದೂರಿದ್ದಾರೆ.

ಇದನ್ನೂ ನೋಡಿ: ದಲಿತರ ಹಣ ಗ್ಯಾರಂಟಿ ಯೋಜನೆಗೆ ಬಳಕೆ ಮಾಡಬೇಡಿ – ರಾಜಗೋಪಾಲ್. ಡಿ.ಎಸ್ Janashakthi Media

Donate Janashakthi Media

Leave a Reply

Your email address will not be published. Required fields are marked *