ಯುಎಪಿಎ ಪ್ರಕರಣ: ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ನ್ಯೂಸ್‌ ಕ್ಲಿಕ್‌ ಸಂಸ್ಥಾಪಕ

ನವದೆಹಲಿ: ದಿಲ್ಲಿ ಪೋಲೀಸ್‍ನ ಎಫ್‍ಐಆರ್‌ಗೆ ಗುರಿಯಾಗಿರುವ ‘ನ್ಯೂಸ್‍ಕ್ಲಿಕ್‍’ ನ ಸಂಸ್ಥಾಪಕ ಪ್ರಬೀರ್‌ ಪುರ್ಕಾಯಸ್ಥ ಹಾಗೂ ಆ ಸಂಸ್ಥೆಯ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಅಮಿತ್‌ ಚಕ್ರವರ್ತಿ ಅವರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾರೆ. 

ಬಂಧನವನ್ನು ಪ್ರಶ್ನಿಸಿ ಪ್ರಬೀರ್ ಪುರ್ಕಾಯಸ್ಥ ಅವರು ಹೈಕೋರ್ಟ್‌ ಮೊರೆ ಹೋಗಿದ್ದ ವೇಳೆ ಕಟ್ಟುನಿಟ್ಟಾದ ಭಯೋತ್ಪಾದನಾ-ವಿರೋಧಿ ಕಾನೂನು ಯುಎಪಿಎಯಡಿ ಬಂಧನದ ಸಮಯದಲ್ಲಿ ಬಂಧನದ ಬಗ್ಗೆ ಪೊಲೀಸರು ಲಿಖಿತ ಆಧಾರಗಳನ್ನು ಒದಗಿಸುವ ಅಗತ್ಯವಿಲ್ಲ ಎಂದು ದೆಹಲಿ ಹೈಕೋರ್ಟ್ ಹೇಳಿತ್ತು.

ಇದನ್ನೂ ಓದಿ: 11 ಲಕ್ಷ ಗಾಝಾ ನಿವಾಸಿಗಳ ಸ್ಥಳಾಂತರಕ್ಕೆ ಇಸ್ರೇಲ್‌ ಆದೇಶ: ವಿಶ್ವಸಂಸ್ಥೆ ವಿರೋಧ

ಅಮೆರಿಕದ ಟೆಕ್ ಉದ್ಯಮಿ ಮೊಗಲ್ ನೆವಿಲ್ಲೆ ರಾಯ್ ಸಿಂಘಮ್ ಅವರಿಂದ ನ್ಯೂಸ್‌ ಕ್ಲಿಕ್ ಹಣ ಪಡೆದಿದೆ ಎಂದು ನ್ಯೂಯಾರ್ಕ್ ಟೈಮ್ಸ್ ಪತ್ರಿಕೆ ವರದಿ ಮಾಡಿತ್ತು. ರಾಯ್ ಸಿಂಘಮ್ ಅವರು ಚೀನಾ ಪರವಾಗಿ ಪ್ರಚಾರ ಮಾಡುವ ಸಂಸ್ಥೆಗಳನ್ನು ನಡೆಸುತ್ತಿದ್ದಾರೆ ಎಂದು ನ್ಯೂಯಾರ್ಕ್‌ ಟೈಮ್ಸ್‌ ವರದಿ ಆರೋಪಿಸಿತ್ತು. ಇದರ ನಂತರ ನ್ಯೂಸ್‌ಕ್ಲಿಕ್ ವಿರುದ್ಧ ಆಗಸ್ಟ್‌ನಲ್ಲಿ ಯುಎಪಿಎ ಪ್ರಕರಣವನ್ನು ದಾಖಲಿಸಲಾಗಿತ್ತು.

ವಿಡಿಯೋ ನೋಡಿ: ವಿಷವಟ್ಟಿ ಸುಡುವಲ್ಲಿ ಪುಸ್ತಕ ಬಿಡುಗಡೆ ಸಮಾರಂಭ ಪುಸ್ತಕ ಕುರಿತು ದಲಿತ ನಾಯಕ ಮಾವಳ್ಳಿ ಶಂಕರ್‌ ಮಾತುಗಳು

Donate Janashakthi Media

Leave a Reply

Your email address will not be published. Required fields are marked *