ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆ ನಡೆಸಲು ಸುಪ್ರೀಂ ಕೋರ್ಟ್ ಸೂಚನೆ

ವದೆಹಲಿ: ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆ ನಡೆಸಲು ರಾಜ್ಯ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದ್ದು, ಕಾಂಗ್ರೆಸ್ ಶಾಸಕ ಕೆವೈ ನಂಜೇಗೌಡ ರನ್ನು ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಅಕ್ಟೋಬರ್‌ 14ರಂದು ತಡೆಯಾಜ್ಞೆ ನೀಡಿದೆ.

ಮತಗಳ ಮರುಎಣಿಕೆ ನಡೆಸಿ ಫಲಿತಾಂಶವನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸುವಂತೆ ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಇದರೊಂದಿಗೆ ಕಾಂಗ್ರೆಸ್ ಶಾಸಕ ಕೆವೈ ನಂಜೇಗೌಡಗೆ ರಿಲೀಫ್ ದೊರೆತಂತಾಗಿದೆ.

ಇದನ್ನೂ ಓದಿ: ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

ಶಾಸಕ ಕೆವೈ ನಂಜೇಗೌಡ ಆಯ್ಕೆ ಅಸಿಂಧು ಎಂದು ಸೆಪ್ಟೆಂಬರ್ 16 ರಂದು ತೀರ್ಪು ಪ್ರಕಟಿಸಿದ್ದ ಕರ್ನಾಟಕ ಹೈಕೋರ್ಟ್, ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸಲು ಒಂದು ತಿಂಗಳ ಕಾಲಾವಕಾಶ ನೀಡಿತ್ತು. ಅಲ್ಲದೆ, ಮೇಲ್ಮನವಿ ಸಲ್ಲಿಸುವ ವರೆಗೆ ಆದೇಶವನ್ನು ತಟಸ್ಥವಾಗಿ ಇರಿಸುವಂತೆ ನಿರ್ದೇಶನ ನೀಡಿತ್ತು.

ಇದನ್ನೂ ನೋಡಿ: ಧರ್ಮಸ್ಥಳ ಕೊಲೆ ಪ್ರಕರಣ | ‘ನ್ಯಾಯಕ್ಕಾಗಿ ಜನಾಗ್ರಹ’ Janashakthi Media

Donate Janashakthi Media

Leave a Reply

Your email address will not be published. Required fields are marked *