ಅತ್ಯಾಚಾರ ಸಂತ್ರಸ್ತೆಯರಿಗೆ ‘ಎರಡು ಬೆರಳಿನ ಪರೀಕ್ಷೆ’ ನಡೆಸದಿರಿ: ಕೇಂದ್ರ-ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ಸೂಚನೆ

ನವದೆಹಲಿ: ಅತ್ಯಾಚಾರ ಅಥವಾ ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಸಂತ್ರಸ್ತರನ್ನು ಎರಡು ಬೆರಳಿನ ಪರೀಕ್ಷೆ ನಡೆಸುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್‌ ವಿಭಾಗೀಯ ಪೀಠ ಇಂತಹ ಪರೀಕ್ಷೆ ನಡೆಸದಂತೆ ಕೇಂದ್ರ ಮತ್ತು ರಾಜ್ಯಗಳಿಗೆ ಸೂಚನೆ ನೀಡಿದೆ.

ಇಂದಿಗೂ ಇಂತಹ ಪರೀಕ್ಷೆಗಳನ್ನು ನಡೆಯುತ್ತಿರುವುದಕ್ಕೆ ಬೇಸರ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಮತ್ತು ಹಿಮಾ ಕೊಹ್ಲಿ ನೇತೃತ್ವದ ನ್ಯಾಯಪೀಠ ಸಂತ್ರಸ್ತೆಯ ಲೈಂಗಿಕ ಹಿನ್ನೆಲೆ ಅಥವಾ ಇತಿಹಾಸ ಸಾಕ್ಷ್ಯವು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಲ್ಲ. ಆದರೆ ಇಂದಿಗೂ ಸಹ ಎರಡು ಬೆರಳಿನ ಪರೀಕ್ಷೆ ನಡೆಸಲ್ಪಡುತ್ತಿರುವುದು ವಿಷಾದನೀಯವಾಗಿದೆ. ಈ ಪರೀಕ್ಷೆಯು ಯಾವುದೇ ವೈಜ್ಞಾನಿಕ ಆಧಾರವನ್ನು ಹೊಂದಿಲ್ಲ, ಯೋನಿ ಸಡಿಲತೆಯನ್ನು ಪರೀಕ್ಷಿಸುವ ವಿಧಾನವು ಮಹಿಳೆಯರನ್ನು ಪುನಃ ಬಲಿಪಶುಗೊಳಿಸುತ್ತದೆ ಮತ್ತು ಮರು ಆಘಾತಗೊಳಿಸುತ್ತದೆ. ಲೈಂಗಿಕವಾಗಿ ಸಕ್ರಿಯವಾಗಿರುವ ಮಹಿಳೆಯನ್ನು ಅತ್ಯಾಚಾರ ಮಾಡಲಾಗುವುದಿಲ್ಲ ಎಂದು ಹೇಳಲಾಗುವುದಿಲ್ಲ ಎಂದು ಪೀಠ ಹೇಳಿದೆ.

ಇದರೊಂದಿಗೆ, ಅಂತಹ ಪರೀಕ್ಷೆಯನ್ನು ನಡೆಸುವ ಯಾವುದೇ ವ್ಯಕ್ತಿಯು ದುರ್ನಡತೆಯ ಅಪರಾಧಿಯಾಗುತ್ತಾನೆ, ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರದಿಂದ ಬದುಕುಳಿದವರನ್ನು ಎರಡು ಬೆರಳಿನ ಪರೀಕ್ಷೆಗೆ ಒಳಪಡಿಸುವುದಿಲ್ಲ ಎಂದು ಖಚಿತಪಡಿಸಿಕೊಳ್ಳಲು ಕೇಂದ್ರ ಆರೋಗ್ಯ ವ್ಯವಹಾರಗಳ ಸಚಿವಾಲಯಕ್ಕೆ ಕೋರ್ಟ್ ನಿರ್ದೇಶಿಸಿದೆ.

ಇದರ ಕುರಿತು ಕಾರ್ಯಾಗಾರಗಳನ್ನು ಹಮ್ಮಿಕೊಳ್ಳಬೇಕು ಮತ್ತು ಆದೇಶವನ್ನು ಎಲ್ಲಾ ರಾಜ್ಯದ ಪೊಲೀಸ್ ಮಹಾನಿರ್ದೇಶಕರಿಗೆ ತಿಳಿಸುವಂತೆ ಪೀಠವು ಸಚಿವಾಲಯವನ್ನು ಕೇಳಿದೆ.

ಅತ್ಯಾಚಾರ ಮತ್ತು ಕೊಲೆ ಆರೋಪಿಯನ್ನು ಖುಲಾಸೆಗೊಳಿಸಿದ ಜಾರ್ಖಂಡ್ ಹೈಕೋರ್ಟ್‌ನ ತೀರ್ಪನ್ನು ಪೀಠವು ರದ್ದುಗೊಳಿಸಿದ್ದು, ಅವರನ್ನು ಅಪರಾಧಿ ಎಂದು ಪರಿಗಣಿಸುವ ವಿಚಾರಣಾ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿದಿದೆ.

Donate Janashakthi Media

Leave a Reply

Your email address will not be published. Required fields are marked *