ನವದೆಹಲಿ: ನವದೆಹಲಿ ರೈಲ್ವೆ ನಿಲ್ದಾಣದಲ್ಲಿ ಕಾಲ್ತುಳಿತ ಸಂಭವಿಸಿದ ಬೆನ್ನಲೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ ಮತ್ತು ಜನಸಂದಣಿ ನಿರ್ವಹಣೆಗೆ ಸಂಬಂಧಿಸಿದ ನಿಯಮಗಳನ್ನು ಸರಿಯಾಗಿ ಅನುಷ್ಠಾನಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾ ಮಾಡಿದೆ. ದೆಹಲಿ
ಇದನ್ನು ಓದಿ :-ಮೈಸೂರು| ಪೆರೋಲ್ ಮೇಲೆ ಹೊರ ಬಂದಿದ್ದ ಖೈದಿ ಆತ್ಮಹತ್ಯೆ
ದೆಹಲಿ ರೈಲ್ವೆ ನಿಲ್ದಾಣದಲ್ಲಿ ಕಾಲ್ತುಳಿತ ಸಂಭವಿಸಿ ೧೮ ಮಂದಿ ಸಾವನ್ನಪ್ಪಿದ್ದಾರೆ ಎಂದು ರೈಲ್ವೆ ಇಲಾಖೆ ಹೇಳಿದೆ. ಆದರೆ ಪ್ರತ್ಯಕ್ಷದರ್ಶಿಗಳ ಪ್ರಕಾರ ೨೦೦ ಮಂದಿ ಮೃತಪಟ್ಟಿದ್ದಾರೆ. ಹೀಗಾಗಿ ಎಲ್ಲ ರಾಜ್ಯಗಳಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ ಮತ್ತು ಜನಸಂದಣಿ ನಿರ್ವಹಣೆಗೆ ಸಂಬಂಧಿಸಿದ ನಿಯಮಗಳನ್ನು ಸರಿಯಾಗಿ ಅನುಷ್ಠಾನಗೊಳಿಸುವಂತೆ ನಿರ್ದೇಶನ ನೀಡುವಂತೆ ಆನಂದ್ ಕಾನೂನು ನೆರವು ವೇದಿಕೆ ಮನವಿ ಮಾಡಿತ್ತು. ದೆಹಲಿ
ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್ ಅರ್ಜಿದಾರರ ವಾದ ಪುರಸ್ಕರಿಸಲಿಲ್ಲ, 200 ಸಾವುಗಳು ಸಂಭವಿಸಿವೆ ಎಂಬ ಆರೋಪಕ್ಕೆ ಪುರಾವೆ ಏನು ಎಂದು ಪ್ರಶ್ನಿಸಿತು. ಅರ್ಜಿದಾರರ ಪರ ವಕೀಲರ ಸಂಕ್ಷಿಪ್ತ ವಿಚಾರಣೆಯ ನಂತರ ಅರ್ಜಿಯನ್ನು ವಜಾಗೊಳಿಸಿತು. ಬಾಧಿತ ಜನರು ನ್ಯಾಯಾಲಯಕ್ಕೆ ಬರಬೇಕು ಎಂದು ನ್ಯಾಯಾಲಯವು ಅಭಿಪ್ರಾಯಪಟ್ಟಿತು. ದೆಹಲಿ