ನವದೆಹಲಿ: ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹೊರಡಿಸಿರುವ ಆದೇಶದಂತೆಯೇ ಸುಪ್ರೀಂ ಕೋರ್ಟ್‌ನ ತ್ರಿಸದಸ್ಯ ಪೀಠವು ಗುರುವಾರ ರಾಜ್ಯಕ್ಕೆ ನಿದೇರ್ಶನ ನೀಡಿದೆ.
ಪ್ರತಿದಿನ 5 ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸಬೇಕು ಎಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹೊರಡಿಸಿರುವ ಆದೇಶಕ್ಕೆ ತಡೆಯಾಜ್ಞೆ ನೀಡಬೇಕು ಎಂಬ ರಾಜ್ಯದ ಮನವಿಯನ್ನು ಸುಪ್ರೀಂ ಕೋರ್ಟ್ ಮಾನ್ಯ ಮಾಡಲಿಲ್ಲ. ಜತೆಗೆ ಉಭಯ ರಾಜ್ಯಗಳ ರೈತರು ತಮ್ಮ ವಾದವನ್ನೂ ಆಲಿಸಲು ಕೋರಿದ್ದ ಅರ್ಜಿಯನ್ನು ಪುರಸ್ಕರಿಸಲೂ ಪೀಠ ನಿರಾಕರಿಸಿತು.
ಆ ನಂತರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹಾಗೂ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಗಳನ್ನು ನಡೆಸಿ ಸೂಕ್ತ ತೀರ್ಮಾನ ತೆಗೆದುಕೊಳ್ಳಬೇಕು ಎಂದೂ ಸೂಚಿಸಿತು. ಸುಪ್ರೀಂ ಕೋರ್ಟ್‌ನ ಈ ನಿರ್ದೇಶನದಂತೆ ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ ನಿತ್ಯ 5 ಸಾವಿರ ಕ್ಯೂಸೆಕ್ ನೀರುನ್ನು ಕರ್ನಾಟಕ ಹರಿಸಬೇಕಿದೆ.
ಇದನ್ನೂ ಓದಿ:ಹರಿದು ಹೋಗಿದೆ ಕೌದಿ ಹೊಲಿಯುವವರ ಬದುಕು
ತಮಿಳುನಾಡಿಗೆ ಸೆ.13ರಿಂದ ಮುಂದಿನ 15ದಿನಗಳ ವರೆಗೆ 5 ಸಾವಿರ ಕ್ಯೂಸೆಕ್ ನೀರು ಹರಿಸಬೇಕು ಎಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶಿಸಿತ್ತು. ಇದಕ್ಕೆ ತಡೆ ನೀಡುವಂತೆ ರಾಜ್ಯ ಸುಪ್ರೀಂ ಕೋರ್ಟ್‌ನಲ್ಲಿ ಮನವಿ ಸಲ್ಲಿಸಿತ್ತು.
ವಿಡಿಯೋ ನೋಡಿ:ದೇವದಾಸಿ ಪದ್ದತಿ ಹುಟ್ಟಿದ್ದು ಸನಾತನ ಧರ್ಮದಿಂದ – ಬಿ. ಮಾಳಮ್ಮ Janashakthi Media