ಹೊಸದಿಲ್ಲಿ: ಸಲಿಂಗ ವಿವಾಹಕ್ಕೆ ಕಾನೂನಿನ ಮಾನ್ಯತೆ ನೀಡಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ 21 ಅರ್ಜಿಗಳನ್ನು ಸಾಂವಿಧಾನಿಕ ಪೀಠ ವಜಾಗೊಳಿಸಿದೆ. ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ನೀಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.
ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ನೇತೃತ್ವದ ಸಾಂವಿಧಾನಿಕ ಪೀಠದಲ್ಲಿ ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಎಸ್.ರವೀಂದ್ರ ಭಟ್,ಹಿಮಾ ಕೊಹ್ಲಿ ಪಿ.ಎಸ್. ನರಸಿಂಹ ಅವರಿದ್ದ ಪೀಠಕ್ಕೆ ಸಲ್ಲಿಕೆಯಾಗಿದ್ದ ವಿವಿಧ ಅರ್ಜಿಗಳ ಕುರಿತು 10 ದಿನಗಳ ಕಾಲ ವಿಚಾರಣೆ ನಡೆದಿದ್ದ ಪೀಠವು, ಮೇ 11ರಂದು ರ್ತೀಪು ಕಾಯ್ದಿರಿಸಿತ್ತು. ಈ ಕುರಿತಂತೆ ಮಂಗಳವಾರ ರ್ತೀಪು ಪ್ರಕಟಸಿತು.
ಇದನ್ನೂ ಓದಿ: ಸಲಿಂಗ ಮದುವೆಗೆ ಮಾನ್ಯತೆ ಕುರಿತು ವಿಚಾರಣೆ ಸಂವಿಧಾನ ಪೀಠಕ್ಕೆ ವಹಿಸಿ ಸುಪ್ರೀಂ
ತೀರ್ಪು ಪ್ರಕಟಿಸಿದ ಮುಖ್ಯ ನ್ಯಾಯಮೂರ್ತಿ ಡಿ. ವೈ. ಚಂದ್ರಚೂಡ್ ನ್ಯಾಯಾಲಯವು ಕಾನೂನುಗಳನ್ನು ಮಾಡುವುದಿಲ್ಲ. ಬದಲಿಗೆ ಅವುಗಳನ್ನು ವ್ಯಾಖ್ಯಾನಿಸುತ್ತದೆ. ಕೇವಲ ಸಂಸತ್ತು ಮಾತ್ರ ವಿಶೇಷ ವಿವಾಹ ಕಾಯ್ದೆಯಲ್ಲಿ ಬದಲಾವಣೆ ತರಬಹುದು ಆದರೆ ಈ ಅಸಹಜ ಸಮುದಾಯ ತಮ್ಮ ಬದುಕು ಸಾಗಿಸುವಲ್ಲಿ ಯಾವುದೇ ತಾರತಮ್ಯ ಆಗದಂತೆ ನೋಡಿಕೊಳ್ಳಬೇಕಾದ ಜವಾಬ್ದಾರಿ ಕೇಂದ್ರ, ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳದ್ದು ಎಂದು ಸೂಚಿಸಿದರು.
ವ್ಯಕ್ತಿಯ ಲಿಂಗವು ಅವರ ಲೈಂಗಿಕತೆಗೆ ಸಮನಾದುದಲ್ಲ. ಒಬ್ಬರ ಜೀವ ಸಂಗಾತಿಯನ್ನು ಆಯ್ಕೆ ಮಾಡುವ ವಿಷಯವು ಸಂವಿಧಾನದ 21ನೇ ವಿಧಿಯಡಿ ಒಬ್ಬರ ಬದುಕು ಮತ್ತು ಸ್ವಾತಂತ್ರ್ಯದ ಹಕ್ಕಿಗೆ ಸಂಬಂಧಿಸಿದ್ದಾಗಿದೆ. ಅದರಲ್ಲಿ ತಮ್ಮ ಬಾಳ ಸಂಗಾತಿಯ ಆಯ್ಕೆ ಮತ್ತು ಅದನ್ನು ದೃಢಪಡಿಸುವುದೂ ಒಳಗೊಂಡಿದೆ. ಇದನ್ನು ಗುರುತಿಸುವುದೂ ತಾರತಮ್ಯವೇ ಸರಿ ಎಂದು ಮುಖ್ಯ ನ್ಯಾಯಮೂರ್ತಿ ಅಭಿಪ್ರಯಾಪಟ್ಟಿದ್ದಾರೆ.
ವಿಶೇಷ ವಿವಾಹ ಕಾಯ್ದೆ ವಿಷಯವನ್ನು ಸಂಸತ್ತು ನಿರ್ಧರಿಸಬೇಕು. ವಿಶೇಷ ವಿವಾಹ ಕಾಯ್ದೆಯ ಸೆಕ್ಷನ್ 4ನ್ನು ಕಳೆದುಕೊಳ್ಳಬೇಕಾಗುವ ಅಪಾಯವೂ ಇದೆ. ದೇಶವನ್ನು ಸ್ವಾತಂತ್ರ್ಯ ಪೂರ್ವ ಯುಗಕ್ಕೆ ಕೊಂಡೊಯ್ಯಲಿದೆ ಉತ್ತರಾಧಿಕಾರ ಕಾಯ್ದೆಯನ್ನು ಒಮ್ಮೆ ಗಮನಿಸಿದರೆ ಈ ಪ್ರಕರಣವು ಶಾಸಕಾಂಗ ಕ್ಷೇತ್ರ ವ್ಯಾಪ್ತಿಗೆ ಸೇರುತ್ತದೆ. ಎಂಬುದು ಸ್ಪಷ್ಟ ಎಂದಿದ್ದಾರೆ.
ವಿಡಿಯೋ ನೋಡಿ: ಇನ್ಷೆಂಟಿವ್ ಆಸೆಗೆ ಬಿದ್ದು ಬೇಕಾ ಬಿಟ್ಟಿಯಾಗಿ ಉಚಿತ ಟಿಕೆಟ್ ಹರಿದು ಬೀಸಾಕಿದ ನಿರ್ವಾಹಕ Janashakthi Media