ಸುಪ್ರೀಂ ಕೋರ್ಟ್‌: ಸೆ.12ರಂದು ಪೌರತ್ವ ತಿದ್ದಪಡಿ ಕಾಯಿದೆ ಸಂಬಂಧಿಸಿದ ಅರ್ಜಿಗಳ ವಿಚಾರಣೆ

ನವದೆಹಲಿ: ವಿವಾದಿತ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ)-2019ರ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಸೆಪ್ಟಂಬರ್‌ 12ರಂದು ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂ ಕೋರ್ಟ್‌ ತಿಳಿಸಿದೆ.

ಪೌರತ್ವ ತಿದ್ದುಪಡಿ ಕಾಯಿದೆಯ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ 140ಕ್ಕೂ ಹೆಚ್ಚಿನ ಅರ್ಜಿಗಳು ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಕೆಯಾಗಿವೆ. ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಯು ಯು ಲಲಿತ್ ಮತ್ತು ನ್ಯಾ. ಎಸ್ ರವೀಂದ್ರ ಭಟ್ ಅವರನ್ನೊಳಗೊಂಡ ಪೀಠ ಅರ್ಜಿಗಳನ್ನು ವಿಚಾರಣೆಯನ್ನು ಸೆಪ್ಟಂಬರ್ 12ರಂದು ಆಲಿಸಲಿದೆ. ಎನ್ನಲಾಗಿದೆ.

ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರವು ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೊಳಿಸಿತು. ಇದರ ವಿರುದ್ಧ ದೇಶವ್ಯಾಪಿ ಪ್ರತಿಭಟನೆಗಳು ನಡೆದಿದ್ದವು. ಇದರ ನಡುವೆ, 2020ರ ಜನವರಿಯಲ್ಲಿ ಕಾಯಿದೆಯ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಸರ್ವೋಚ್ಚ ನ್ಯಾಯಾಲಯಕ್ಕೆ ಹಲವು ಅರ್ಜಿಗಳು ಸಲ್ಲಿಕೆಯಾಗಿದ್ದವು.

ಆಗಿನ ಆಗಿನ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಎಸ್‌.ಎ. ಬೋಬ್ಡೆ ನೇತೃತ್ವದ ಪೀಠವು ಪೌರತ್ವ ತಿದ್ದುಪಡಿ ಕಾಯಿದೆಗೆ ತಡೆ ನೀಡದೆ ಅರ್ಜಿಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿತ್ತು. ಪ್ರಕರಣವನ್ನು ಸಾಂವಿಧಾನಿಕ ಪೀಠ ವಿಚಾರಣೆ ನಡೆಸಬಹುದು ಎಂದು ನ್ಯಾಯಾಲಯ ನಂತರ ಸುಳಿವು ನೀಡಿತ್ತು, ಆದರೆ ಆ ನಿಟ್ಟಿನಲ್ಲಿ ಯಾವುದೇ ಆದೇಶ ನೀಡಿರಲಿಲ್ಲ.

ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೊಳಿಸುವ ಮೊದಲು ಅಸ್ತಿತ್ವದಲ್ಲಿದ್ದ ಯಾವುದೇ ಹಕ್ಕಗಳನ್ನು ಅಡ್ಡಿಪಡಿಸುವುದಿಲ್ಲ ಎಂದು ಕೇಂದ್ರ ಸರಕಾರವು ತನ್ನ ಅಫಿಡವಿಟ್‌ನಲ್ಲಿ ಹೇಳಿತ್ತು. ಸಿಎಎ ಯಾವುದೇ ಭಾರತೀಯ ನಾಗರಿಕರ ಕಾನೂನು, ಪ್ರಜಾಸತ್ತಾತ್ಮಕ ಅಥವಾ ಜಾತ್ಯತೀತ ಹಕ್ಕುಗಳ ಮೇಲೆ ಪರಿಣಾಮ ಬೀರಲು ಬಯಸುವುದಿಲ್ಲ ಎಂದು ವಾದಿಸಲಾಯಿತು.

ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ಸೇರಿದಂತೆ ಭಾರತದ ನೆರೆಯ ಮುಸ್ಲಿಂ ಬಹುಸಂಖ್ಯಾತ ರಾಷ್ಟ್ರಗಳಲ್ಲಿ ಮುಸ್ಲಿಮೇತರ ಅಲ್ಪಸಂಖ್ಯಾತರಿಗೆ ಪೌರತ್ವ ನೀಡಲು-ಸಿಎಎ ಪ್ರಯತ್ನಿಸುತ್ತದೆ. ಡಿಸೆಂಬರ್ 31, 2014 ರಂದು ಅಥವಾ ಮೊದಲು ಭಾರತವನ್ನು ಪ್ರವೇಶಿಸಿದವರು ಭಾರತದ ನಾಗರಿಕರಾಗಲು ಅರ್ಹರು ಎಂದು ಕಾಯಿದೆ ಹೇಳುತ್ತದೆ.

Donate Janashakthi Media

Leave a Reply

Your email address will not be published. Required fields are marked *