ನವದೆಹಲಿ: ನ್ಯಾಯಮೂರ್ತಿ ನೇಮಕಾತಿ, ಕೊಲಿಜಿಯಂ ಸಮಿತಿ ವಿಚಾರವಾಗಿ ಕಳೆದ ಕೆಲವು ದಿನಗಳಿಂದ ಚರ್ಚೆಯಾಗುತ್ತಿರುವ ನಡುವೆಯೇ ಇದೀಗ ಸುಪ್ರೀಂ ಕೋರ್ಟ್ ಪೀಠಕ್ಕೆ ಐವರು ನ್ಯಾಯಮೂರ್ತಿಗಳ ನೇಮಕಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ ಎಂದು ವರದಿಯಾಗಿದೆ.
ಸುಪ್ರೀಂ ಕೋರ್ಟಿಗೆ ಹೊಸ ನ್ಯಾಯಮೂರ್ತಿಗಳ ನೇಮಕಾತಿ ವಿಚಾರದಲ್ಲಿ ಕೇಂದ್ರ ಸರ್ಕಾರ ನಿರಂತರವಾಗಿ ಹಸ್ತಕ್ಷೇಪ ಮಾಡುತ್ತಿದ್ದು, ನ್ಯಾಯಾಂಗದ ಸ್ವತಂತ್ರ ಕಾರ್ಯನಿರ್ವಹಣೆ ವಿಚಾರದಲ್ಲಿ ವಾಕ್ಸಮರಕ್ಕೆ ಇಳಿದಿದೆ.
ಕಾರ್ಯಾಂಗ ಮತ್ತು ನ್ಯಾಯಾಂಗದ ನಡುವಿನ ಸುದೀರ್ಘ ಗುದ್ದಾಟದ ನಡುವೆಯೇ ಸುಪ್ರೀಂ ಕೋರ್ಟ್‌ಗೆ ಐವರು ನ್ಯಾಯಾಧೀಶರ ಹೆಸರನ್ನು ಕೇಂದ್ರವು ಸೂಚಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸುಪ್ರೀಂ ಕೋರ್ಟ್‌ನಿಂದ ಕಠಿಣ ಪ್ರಶ್ನೆಗಳನ್ನು ಎದುರಿಸುತ್ತಿರುವ ಕೇಂದ್ರವು ಒಂದು ದಿನದ ಹಿಂದೆ ಐವರು ಹೈಕೋರ್ಟ್ ನ್ಯಾಯಮೂರ್ತಿಗಳ ಉನ್ನತಿಗೆ ಕೊಲಿಜಿಯಂ ಎಂದು ಕರೆಯಲ್ಪಡುವ ನ್ಯಾಯಾಧೀಶರ ಸಮಿತಿಯ ಶಿಫಾರಸುಗಳನ್ನು ಫೆಬ್ರವರಿ 03ರ ಒಳಗಾಗಿ ಪ್ರಕಟಿಸಲಾಗುವುದು ಎಂದು ಭರವಸೆ ನೀಡಿತ್ತು.
ನ್ಯಾಯಮೂರ್ತಿಗಳಾದ ಎಸ್ ಕೆ ಕೌಲ್ ಮತ್ತು ಎ ಎಸ್ ಓಕಾ ಅವರ ಪೀಠವು ಹೈಕೋರ್ಟ್ ನ್ಯಾಯಾಧೀಶರ ವರ್ಗಾವಣೆಗೆ ಶಿಫಾರಸುಗಳನ್ನು ಬಿಡುಗಡೆ ಮಾಡುವುದು ವಿಳಂಬವಾಗುತ್ತಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದೆ. ಇದನ್ನು “ಅತ್ಯಂತ ಗಂಭೀರ ಸಮಸ್ಯೆ” ಎಂದು ಕರೆದು ಈ ವಿಷಯದಲ್ಲಿ ಯಾವುದೇ ವಿಳಂಬವು ಆಡಳಿತಾತ್ಮಕ ಮತ್ತು ನ್ಯಾಯಾಂಗ ಎರಡಕ್ಕೂ ಕಾರಣವಾಗಬಹುದು ಎಂದು ಎಚ್ಚರಿಸಿತು.
ಎರಡು ಅರ್ಜಿಗಳ ವಿಚಾರಣೆಯ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಕೊಲಿಜಿಯಂನ ಶಿಫಾರಸುಗಳ ಸ್ಥಿತಿಗತಿಯ ಬಗ್ಗೆ ಕೇಳಿದಾಗ, ಅಟಾರ್ನಿ ಜನರಲ್ ಆರ್ ವೆಂಕಟರಮಣಿ ಅವರು ಐದು ನ್ಯಾಯಾಧೀಶರ ನೇಮಕಾತಿಯ ಹೆಸರನ್ನು ಅನ್ನು ಶೀಘ್ರದಲ್ಲೇ ಹೊರಡಿಸುವ ನಿರೀಕ್ಷೆಯಿದೆ ಎಂದು ಹೇಳಿದರು.
ಇಲ್ಲಿ ಕ್ಲಿಕ್ ಮಾಡಿ : ಜನಶಕ್ತಿ ಮೀಡಿಯಾ ವಾಟ್ಸ್‌ಪ್ ಗುಂಪು ಸೇರಲು ಈ ಲಿಂಕ್ ಕ್ಲಿಕ್ ಮಾಡಿ