ಬೆಂಗಳೂರು : ನ್ಯಾಯಾಲಯ ಜೆಡಿಎಸ್ ಸಂಸದ ಸೂರಜ್ ರೇವಣ್ಣಗೆ ಮತ್ತೆ ಎರಡು ದಿನ ಪೊಲೀಸ್ ಕಸ್ಟಡಿ ವಿಸ್ತರಿಸಿ ಆದೇಶಿಸಿದೆ.
ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಸಿಐಡಿ ವಶದಲ್ಲಿರುವ ಎಂಎಲ್ಸಿ ಸೂರಜ್ ರೇವಣ್ಣಗೆ ಮತ್ತೆ ಹೆಚ್ಚಿನ ವಿಚಾರಣೆಗಾಗಿ ಎರಡು ದಿನ ಪೊಲೀಸ್ ಕಸ್ಟಡಿ ವಿಸ್ತರಣೆ ಮಾಡಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.
ಇದನ್ನು ಓದಿ : ಹೊಸ ಕಾನೂನುಗಳ ಜಾರಿಗೆ ಆ್ಯಪ್: ಗೃಹ ಸಚಿವ ಡಾ.ಜಿ.ಪರಮೇಶ್ವರ್
ಇಂದು ಸೂರಜ್ ರೇವಣ್ಣರ ಸಿಐಡಿ ಪೊಲೀಸ್ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಆರೋಪಿಯನ್ನು ಕೋರ್ಟ್ ಗೆ ಹಾಜರುಪಡಿಸಿದ ಪೊಲೀಸರು, ಹೆಚ್ಚಿನ ವಿಚಾರಣೆಗಾಗಿ ಮತ್ತೆ 5 ದಿನ ತಮ್ಮ ಕಸ್ಟಡಿಗೆ ನೀಡುವಂತೆ ಕೋರ್ಟ್ಗೆ ಮನವಿ ಮಾಡಿದ್ದರು. ಆದರೆ 2 ದಿನ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ.
ಜೂ. 23ರಂದು ಸೂರಜ್ ರೇವಣ್ಣ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದ ಸಿಐಡಿ ಪೊಲೀಸರು, 7 ದಿನಗಳ ಕಾಲ ಕಸ್ಟಡಿ ಪಡೆದಿದ್ದರು.
ಇದನ್ನು ನೋಡಿ : ವಚನಾನುಭವ – 02| ದೇಹಾರಕ್ಕೆ ಆಹಾರವೆ ನಿಚ್ಚಣಿಗೆ – ಡಾ. ಮೀನಾಕ್ಷಿ ಬಾಳಿJanashakthi Media