ಗುಜರಾತ್: ಸೂರತ್‌ನಲ್ಲಿ ರಾಸಾಯನಿಕ ಘಟಕದಲ್ಲಿ ಸಂಭವಿಸಿದ ಸ್ಪೋಟದಲ್ಲಿ ಏಳು ಮಂದಿ ಮೃತಪಟ್ಟಿದ್ದು, 24 ಕಾರ್ಮಿಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾಸಾಯನಿಕ ಉತ್ಪಾದನಾ ಘಟಕ ಬೆಂಕಿ ಹೊತ್ತಿಕೊಂಡ ಒಂದು ದಿನ ನಂತರ ನಾಪತ್ತೆಯಾಗಿದ್ದ ಏಳು ಜನ ಕಾರ್ಮಿಕರ ಮೃತದೇಹಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: ಗುಜರಾತ್| ರಾಸಾಯನಿಕ ಘಟಕದಲ್ಲಿ ಸ್ಫೋಟ: 24 ಕಾರ್ಮಿಕರಿಗೆ ಗಾಯ
ಸಚಿನ್ ಜಿಐಡಿಸಿ ಕೈಗಾರಿಕಾ ಪ್ರದೇಶದಲ್ಲಿರುವ ಕೆಮಿಕಲ್ ಫ್ಯಾಕ್ಟರಿಯಲ್ಲಿ ಮಂಗಳವಾರ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಅದರಲ್ಲಿ ಶೇಖರಿಸಲಾಗಿದ್ದ ದಹಿಸುವ ರಾಸಾಯನಿಕಗಳ ಸೋರಿಕೆಯಿಂದಾಗಿ ದೊಡ್ಡ ಟ್ಯಾಂಕ್‌ನಲ್ಲಿ ಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಘಟನೆಯಲ್ಲಿ ಕನಿಷ್ಠ 24 ಕಾರ್ಮಿಕರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಸುಮಾರು 15 ಅಗ್ನಿ ಶಾಮಕ ವಾಹನಗಳು ಒಂಭತ್ತು ತಾಸುಗಳ ಕಾಲ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.
ವಿಡಿಯೋ ನೋಡಿ: ವಿಶ್ವಕಪ್ ಮೇಲೆ ಕಾಲಿಟ್ಟಾಗ ಚುರ್ ಎಂದ ಹೃದಯ ದಲಿತರಿಗೆ ಮೂತ್ರ ಕುಡಿಸಿದಾಗ ಯಾಕೆ ಮಿಡಿಯಲಿಲ್ಲ? #worldcup2023