ಮಂಗಳೂರು: ನಗರದ ಹೊರವಲಯದಲ್ಲಿರುವ ಮಸೀದಿ ಮೇಲಿರುವ ಕಲ್ಲು ತೂರಾಟ ನಡೆಸಿರುವ ಘಟನೆ ಜಿಲ್ಲೆಯ ಸುರತ್ಕಲ್ ಬಳಿಯ ಕಾಟಿಪಳ್ಳ 3ನೇ ಬ್ಲಾಕಿನ ಬದ್ರಿಯಾ ಮಸೀದಿಯಲ್ಲಿ ನಡೆದಿದೆ.
ಮಂಗಳೂರು ಹೊರವಲಯದ ಕಾಟಿಪಳ್ಳ 3ನೇ ಬ್ಲಾಕಿನ ಬದ್ರಿಯಾ ಮಸೀದಿ ಮೇಲೆ ದುಷ್ಕರ್ಮಿಗಳ ತಂಡವೊಂದು ಕಲ್ಲು ತೂರಾಟ ನಡೆಸಿದೆ. ಬೈಕ್‌ನಲ್ಲಿ ಆಗಮಿಸಿ ಕಲ್ಲು ತೂರಾಟ ಮಾಡಿದ್ದಾರೆ. ಕಲ್ಲಿನ ಹೊಡೆತಕ್ಕೆ ಮಸೀದಿಯ ಗಾಜು ಒಡೆದು ಚೂರಾಗಿದೆ. ತಡರಾತ್ರಿ 2 ಬೈಕ್‌ಗಳಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ.
#WATCH | Karnataka: Yatish N, SP of Dakshina Kannada says, "Today, on the eve of Eid-e-Milad festival, we have made adequate arrangements around the district and there was a call for a protest in Bantwal town on BC Road, for which we have made adequate arrangements. We are… pic.twitter.com/tNMLQsGRKj
— ANI (@ANI) September 16, 2024
ಮಸೀದಿಗೆ ಕಲ್ಲೆಸೆದ ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಸುರತ್ಕಲ್ ಆಶ್ರಯ ಕಾಲನಿ ನಿವಾಸಿ ಭರತ್, ಕಟ್ಲ ಆಶ್ರಯ ಕಾಲನಿ ನಿವಾಸಿ ಚೆನ್ನಪ್ಪ, ಹಳೆಯಂಗಡಿ ಚೇಳಾಯರು ಖಂಡಿಗೆ ಪಾಡಿ ನಿವಾಸಿ ನಿತಿನ್, ಈಶ್ವರ ನಗರ ನಿವಾಸಿ ಮನು ಮತ್ತು ಮುಂಚೂರು ನಿವಾಸಿ ಸುಜಿತ್ ಎಂಬವರು ಬಂಧಿತ ಆರೋಪಿಗಳೆಂದು ತಿಳಿದುಬಂದಿದೆ..
ಆರೋಪಿಗಳ ಪೈಕಿ ಭರತ್ ಎಂಬಾತನ ವಿರುದ್ಧ ಹೊಡೆದಾಟಕ್ಕೆ ಸಂಬಂಧಿಸಿ 307 ಪ್ರಕರಣ ದಾಖಲಾಗಿದ್ದು, ಆತನ ವಿರುದ್ಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ರೌಡಿ ಶೀಟ್ ತೆರೆಯಲಾಗಿತ್ತು.