ಸ್ವಾತಂತ್ರೋತ್ಸವದ ಅಂಗವಾಗಿ ಶೇಕಡ 50 ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ೨೦೨೧ರ ಆಗಸ್ಟ್ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇಕಡ 50%ರಷ್ಟು ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುತ್ತಿದೆ. ಪುಸ್ತಕ ಪ್ರಿಯರು ಈ ಅವಕಾಶ ಬಳಸಿಕೊಳ್ಳಲು ಕೋರಿದೆ. ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ  ಈ ರಿಯಾಯಿತಿ ಸೌಲಭ್ಯ ದೊರೆಯಲಿದೆ.

ಅಲ್ಲದೆ ಕನ್ನಡ ಪುಸ್ತಕ ಪ್ರಾಧಿಕಾರದ  ವೆಬ್‌ಸೈಟ್‌  http://kannadapustakapradhikara.com/books/ ದಲ್ಲಿ (ನಮ್ಮ ಪುಸ್ತಕಗಳು ವಿಭಾಗದಲ್ಲಿ) ಕೂಡ ಶೇಕಡ 50% ರಿಯಾಯಿತಿ ಲಭ್ಯವಿದೆ. ಆನ್ ಲೈನ್ ಮೂಲಕ ಹಣ ಪಾವತಿಸಿ  ಪುಸ್ತಕಗಳನ್ನು ಅಂಚೆ ಮೂಲಕ ಪಡೆಯಬಹುದಾಗಿದೆ.

ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ, ಎಲ್ಲಾ ಪ್ರಕಾರದ ಸಾಹಿತ್ಯ ಕೃತಿಗಳನ್ನು ಈವರೆಗೆ ಪ್ರಕಟಿಸುತ್ತಾ ಬಂದಿದೆ. ಇವುಗಳಲ್ಲಿ ವ್ಯಕ್ತಿ ಚಿತ್ರಗಳು, ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ, ಪ್ರಾಚೀನ ಕನ್ನಡ ಸಾಹಿತ್ಯ, ಜಾನಪದ, ಪರಿಸರ, ಕೃಷಿ ಹೀಗೆ ಹಲವು ಹತ್ತು ಪ್ರಕಾರಗಳಲ್ಲಿ ಸಾಹಿತ್ಯ ಕೃತಿಗಳನ್ನು ಸುಮಾರು 446 ಶೀರ್ಷಿಕೆಗಳನ್ನು ಮುದ್ರಿಸಿ ಪ್ರಕಟಿಸಿದೆ. ಅತ್ಯಂತ ಮೌಲಿಕವಾದ, ಪ್ರಾಜ್ಞರಿಂದ ರಚಿತವಾದ ಈ ಕೃತಿಗಳನ್ನು ಜನಸಾಮಾನ್ಯರಿಗೆ ಸುಲಭ ಬೆಲೆಯಲ್ಲಿ ತಲುಪಿಸಬೇಕೆಂಬ ಉದ್ದೇಶ ಕನ್ನಡ ಪುಸ್ತಕ ಪ್ರಾಧಿಕಾರದ ಆಶಯವಾಗಿದೆ.

Donate Janashakthi Media

Leave a Reply

Your email address will not be published. Required fields are marked *