ತಡೆಹಿಡಿಯಲಾಗಿದ್ದ ಕಾಮಗಾರಿಗಳಿಗೆ ತರಾತುರಿಯಲ್ಲಿ ಅನುಮೋದನೆ ಸಾಧ್ಯತೆ?

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬಹುದು ಎಂಬ ಅಂಶಗಳ ಹಿನ್ನೆಲೆಯಲ್ಲಿ ಹಾಗೂ ಯಾವ ಸಂದರ್ಭದಲ್ಲಿಯಾದರೂ ಬಿಜೆಪಿ ಹೈಕಮಾಂಡ್‌ನಿಂದ ರಾಜೀನಾಮೆಗೆ ಸೂಚನೆ ಬರಬಹುದು ಎಂದು ರಾಜ್ಯ ಸರಕಾರವು ವಿವಿಧ ಕಾರಣಗಳಿಗಾಗಿ ತಡೆಯಿಡಿಯಲ್ಪಟ್ಟ ₹1,172 ಕೋಟಿ ಮೊತ್ತದ ಯೋಜನೆಗೆ ಬಿ.ಎಸ್.ಯಡಿಯೂರಪ್ಪ ಅವರಿಂದಲೇ ಅನುಮೋದನೆ ದೊರೆಯಬಹುದು ಎಂಬದು ಎಂಬ ವಿಚಾರ ಕೇಳಿ ಬರುತ್ತಿವೆ.

ಬೆಂಗಳೂರು ನಗರದಲ್ಲಿ ಹಿಂದಿನ ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಆರಂಭಿಸಿದ್ದ ವೈಟ್‌ ಟಾಪಿಂಗ್ ಕಾಮಗಾರಿಯಲ್ಲಿ ಭಾರಿ ಅಕ್ರಮ ನಡೆದಿದೆ ಎಂದು ಯೋಜನೆಯನ್ನು ತಡೆಹಿಡಿದಿದ್ದ ಕಾಮಗಾರಿಗಳಿಗೆ ಮತ್ತೆ ಮೂರನೇ ಹಂತದ ಕೆಲಸಗಳಿಗೆ ಅನುಮೋದನೆ ನೀಡಲು ಸಿದ್ಧತೆ ನಡೆದಿದೆ ಎನ್ನಾಗಿದೆ.

ಇದನ್ನು ಓದಿ: ತವರು ಜಿಲ್ಲೆಗೆ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರಿಂದ 1800 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳಿಗೆ ಚಾಲನೆ

‘ಮುಖ್ಯಮಂತ್ರಿ ನವ ಬೆಂಗಳೂರು’ ಯೋಜನೆಯಡಿ ಒಟ್ಟು 159 ರಸ್ತೆಗಳನ್ನು ವೈಟ್‌ ಟಾಪಿಂಗ್ ಮಾಡಲು ಕಾಂಗ್ರೆಸ್ ಸರಕಾರ ಉದ್ದೇಶಿಸಿತ್ತು. ಅವುಗಳಲ್ಲಿ ಮೊದಲ ಹಂತಕ್ಕೆ ₹201.79 ಕೋಟಿ ಹಾಗೂ ಎರಡನೇ ಹಂತದ ಕಾಮಗಾರಿಗಳಿಗಾಗಿ ₹ 442.99 ಕೋಟಿ ಅನುದಾನ ನೀಡಿತ್ತು. ಎರಡೂ ಹಂತದ ಕಾಮಗಾರಿಗಳು ಈಗ ಬಹುತೇಕ ಪೂರ್ಣಗೊಂಡಿವೆ. ಮೂರನೇ ಹಂತದ ಕಾಮಗಾರಿಗೂ ಹಿಂದಿನ ಸರ್ಕಾರವೇ ಅನುಮೋದನೆ ನೀಡಿ ಅನುದಾನ ನಿಗದಿ ಮಾಡಿತ್ತು.

ಮೊದಲ ಹಾಗೂ ಎರಡನೇ ಹಂತದ ಕಾಮಗಾರಿಯಲ್ಲಿ ಅಕ್ರಮ ನಡೆದಿದೆ ಎಂದು ಬಿಜೆಪಿ ಮುಖಂಡ ಎನ್.ಆರ್. ರಮೇಶ್‌ ಮುಖ್ಯಮಂತ್ರಿಗೆ ದೂರು ಸಲ್ಲಿಸಿದ್ದರು. ಅದರ ಆಧಾರದಲ್ಲಿ ಕಾಮಗಾರಿಗಳನ್ನು ಸ್ಥಗಿತಗೊಳಿಸಿ ತನಿಖೆಗೆ ಆದೇಶಿಸಿದ್ದರು. ಕ್ಯಾಪ್ಟನ್‌ ಆರ್‌.ಆರ್‌.ದೊಡ್ಡಿಹಾಳ್‌ ನೇತೃತ್ವದಲ್ಲಿ ತಜ್ಞರ ಸಮಿತಿ ನೇಮಿಸಿ ವರದಿಯನ್ನು ಸರಕಾರ ಪಡೆದುಕೊಂಡಿದೆ.

‘ಹಿಂದಿನ ಸರ್ಕಾರಗಳು ಪ್ರತಿ ಕಿ.ಮೀ. ಕಾಮಗಾರಿಗೆ ₹14 ಕೋಟಿಯಷ್ಟು ವೆಚ್ಚ ಮಾಡಿದ್ದವು. ’ಒಂದು ಕಿ.ಮೀ ವೈಟ್‌ ಟಾಪಿಂಗ್ ಕಾಮಗಾರಿಯನ್ನು ₹4 ಕೋಟಿ ವೆಚ್ಚದಲ್ಲಿ ಮುಗಿಸಿ ತೋರಿಸುತ್ತೇವೆ’ ಎಂದು ಯಡಿಯೂರಪ್ಪ ಅವರು 2019ರ ಸೆಪ್ಟೆಂಬರ್‌ನಲ್ಲಿ ನಡೆಸಿದ್ದ ನಗರ ಪ್ರದಕ್ಷಿಣೆ ವೇಳೆ ಸವಾಲು ಹಾಕಿದ್ದರು. ಆದರೆ, ಅದು ಕಾರ್ಯಗತ ಆಗಿರಲಿಲ್ಲ.

‘ಮೂರನೇ ಹಂತದ ಕಾಮಗಾರಿಗೆ ನಿಗದಿ ಮಾಡಿದ ಅನುದಾನವನ್ನು ಬೇರೆ ಕೆಲಸಗಳಿಗೆ ಬಳಕೆ ಮಾಡಿಕೊಂಡಿದೆ. ಈಗ ಅನುದಾನದ ಲಭ್ಯತೆಯೇ ಇಲ್ಲದಿದ್ದರೂ ಆರು ಪ್ಯಾಕೇಜ್‌ಗಳಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲು ಅನುಮೋದನೆ ನೀಡಲು ತಯಾರಿ ನಡೆಸಲಾಗಿದೆ. ಈ ಉದ್ದೇಶದಿಂದಲೇ ಮುಖ್ಯಮಂತ್ರಿ ಅವರು ದಿಢೀರ್‌ ಎಂದು ನೆನ್ನೆ ಬೆಂಗಳೂರು ನಗರ ಪ್ರದಕ್ಷಿಣೆ ನಡೆಸಿದ್ದಾರೆ’ ಎಂಬ ವಿಚಾರಗಳು ತಿಳಿದು ಬಂದಿದೆ.

‘ಸಾರ್ವಜನಿಕರಿಂದ ಬೇಡಿಕೆ ಇದೆ ಎಂಬ ಕಾರಣ ನೀಡಿ ಈ ಹಿಂದೆ ತಾವೇ ವಿರೋಧಿಸಿದ್ದ ಯೋಜನೆಗೆ ಕೊನೆಯ ನಾಲ್ಕು ದಿನಗಳಲ್ಲಿ ಅನುಮೋದನೆ ನೀಡಲು ಸಿದ್ಧತೆ ಪೂರ್ಣಗೊಂಡಿದೆ. ಈ ಔದಾರ್ಯವನ್ನು ಮುಖ್ಯಮಂತ್ರಿ ಯಾವ ಕಾರಣಕ್ಕೆ ತೋರಿಸುತ್ತಿದ್ದಾರೆ ಎಂಬುದೂ ರಹಸ್ಯವೇನಲ್ಲ’ ಎಂದು ಹೆಸರು ಹೇಳಲು ಬಯಸದ ಬಿಬಿಎಂಪಿ ಅಧಿಕಾರಿಯೊಬ್ಬರು ಮಾಧ್ಯಮಗಳಿಗೆ ತಿಳಿಸಿದರು.

ದುರುದ್ದೇಶದಿಂದ ಬೇಕಂತಲೇ ಕಾಮಗಾರಿ ಸ್ಥಗಿತ

ಈ ಬಗ್ಗೆ ಕಾಂಗ್ರೆಸ್‌ ಶಾಸಕ ರಾಮಲಿಂಗರೆಡ್ಡಿ ಅವರು ‘ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಆರಂಭಿಸಿದ ವೈಟ್‌ ಟಾಪಿಂಗ್ ಕಾಮಗಾರಿ ಒಳ್ಳೆಯ ಉದ್ದೇಶದಿಂದ ಕೂಡಿತ್ತು ಎಂಬುದನ್ನು ಈಗ ಬಿಜೆಪಿ ಒಪ್ಪಿಕೊಂಡಂತೆ ಆಗಿದೆʼ ಎಂದಿದ್ದಾರೆ.

‘ರಸ್ತೆಗಳನ್ನು ವೈಟ್‌ ಟಾಪಿಂಗ್ ವಿಧಾನದಲ್ಲಿ ನಿರ್ಮಿಸಿದರೆ ಕನಿಷ್ಠ 25 ವರ್ಷ ಬಾಳಿಕೆ ಬರುತ್ತದೆ. ಮುಖ್ಯ ರಸ್ತೆ, ರಿಂಗ್ ರಸ್ತೆಗಳೆಲ್ಲವೂ ವೈಟ್‌ ಟಾಪಿಂಗ್ ಆದರೆ ಒಳ್ಳೆಯದು. ಅದಕ್ಕಾಗಿ ನಮ್ಮ ಅವಧಿಯಲ್ಲಿ ಆರಂಭಿಸಲಾಗಿತ್ತು’ ಎಂದರು.

‘ರಾಜಕೀಯ ದುರುದ್ದೇಶದಿಂದ ಆರೋಪ ಮಾಡಿದ್ದ ಬಿಜೆಪಿಯವರು, ಸರ್ಕಾರ ಬದಲಾದ ಬಳಿಕ ಕಾಮಗಾರಿ ತಡೆ ಹಿಡಿದಿದ್ದರು. ದೊಡ್ಡಿಹಾಳ್ ಸಮಿತಿ ಅಕ್ರಮ ನಡೆದಿಲ್ಲ ಎಂದು ವರದಿ ನೀಡಿತು. ಸತ್ಯಾಂಶ ಅರ್ಥವಾದ ಬಳಿಕ ಮುಖ್ಯಮಂತ್ರಿ ಅವರೇ 3ನೇ ಹಂತದ ಕಾಮಗಾರಿಗೆ ಅನುಮೋದನೆ ನೀಡಲು ಹೊರಟಿದ್ದಾರೆ. ಸತ್ಯ ಅರ್ಥವಾಗಿರುವುದು ಸಂತಸದ ವಿಷಯ’ ಎಂದರು.

ಬಿಬಿಎಂಪಿ ಮಾಜಿ ಸದಸ್ಯ ಎಂ. ಶಿವರಾಜು ʻಒಳ್ಳೆಯ ಉದ್ದೇಶದ ಕಾಮಗಾರಿ ಎಂಬುದು ಗೊತ್ತಿದ್ದರೂ ದುರುದ್ದೇಶದಿಂದ ಬಿಜೆಪಿ ಸರ್ಕಾರ ಅನುದಾನ ತಡೆ ಹಿಡಿದಿತ್ತು. ವೈಟ್‌ ಟಾಪಿಂಗ್ 3ನೇ ಹಂತದ ಕಾಮಗಾರಿಗೆ ಕಾಂಗ್ರೆಸ್ ಅವಧಿಯಲ್ಲೇ ಅನುದಾನ ನೀಡಲಾಗಿತ್ತು. ಅಕ್ರಮ ನಡೆದಿಲ್ಲ ಎಂಬುದು ಗೊತ್ತಿದ್ದರೂ ಕಾಂಗ್ರೆಸ್ ಮೇಲೆ ಆರೋಪ ಹೊರಿಸಲು ಮುಂದಾಗಿದ್ದರುʼ ಎಂದು ಹೇಳಿದರು.

Donate Janashakthi Media

Leave a Reply

Your email address will not be published. Required fields are marked *