ಅಪ್ಪು ಓದಿಸುತ್ತಿದ್ದ ಮಕ್ಕಳ ವಿದ್ಯಾಭ್ಯಾಸದ ಹೊಣೆ ಹೊತ್ತ ತಮಿಳು ನಟ ವಿಶಾಲ್

ಬೆಂಗಳೂರು: ಪುನೀತ್ ರಾಜ್​​ಕುಮಾರ್ ಓದಿಸುತ್ತಿದ್ದ ಮಕ್ಕಳ ವಿದ್ಯಾಭ್ಯಾಸದ ಹೊಣೆ ಹೊರುವೆ ಎಂದು ತಮಿಳು ನಟ ವಿಶಾಲ್​ ಘೋಷಣೆ ಮಾಡಿದ್ದಾರೆ.

ಮುಂದಿನ ವರ್ಷದಿಂದ 1800 ಮಕ್ಕಳ ಜವಾಬ್ದಾರಿ ನನ್ನದು ಎಂದು ಅವರು ತಿಳಿಸಿದ್ದಾರೆ. ಹೃದಯಾಘಾತದಿಂದ ಪುನೀತ್ ರಾಜ್​ಕುಮಾರ್ ಅಕ್ಟೋಬರ್ 29 ರಂದು ನಿಧನರಾಗಿದ್ದರು.ಬೆಂಗಳೂರು: ಪುನೀತ್ ರಾಜ್​​ಕುಮಾರ್ ಓದಿಸುತ್ತಿದ್ದ ಮಕ್ಕಳ ವಿದ್ಯಾಭ್ಯಾಸದ ಹೊಣೆ ಹೊರುವೆ ಎಂದು ತಮಿಳು ನಟ ವಿಶಾಲ್​ ಘೋಷಣೆ ಮಾಡಿದ್ದಾರೆ.

ಮುಂದಿನ ವರ್ಷದಿಂದ 1800 ಮಕ್ಕಳ ಜವಾಬ್ದಾರಿ ನನ್ನದು ಎಂದು ಅವರು ತಿಳಿಸಿದ್ದಾರೆ. ಹೃದಯಾಘಾತದಿಂದ ಪುನೀತ್ ರಾಜ್​ಕುಮಾರ್ ಅಕ್ಟೋಬರ್ 29 ರಂದು ನಿಧನರಾಗಿದ್ದರು.ಈ ಹಿನ್ನೆಲೆಯಲ್ಲಿ ಪುನೀತ್ ಓದಿಸುತ್ತಿದ್ದ ಮಕ್ಕಳ ವಿದ್ಯಾಭ್ಯಾಸದ ಹೊಣೆ ತಾನು ಹೊರುವುದಾಗಿ ತಮಿಳು ನಟ ಹೇಳಿದ್ದಾರೆ.

ಭಾನುವಾರ ರಾತ್ರಿ ನಡೆದ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡುತ್ತಾ ಮೂಲತಃ ಬೆಂಗಳೂರಿನವರಾದ, ತಮಿಳು ನಟ ವಿಶಾಲ್ ಅವರು ಅಪ್ಪು ಮೇಲಿನ ಅಭಿಮಾನದೊಂದಿಗೆ ತಾವು ತೆಗೆದುಕೊಂಡಿರುವ ನಿರ್ಣಯವನ್ನು ಅತ್ಯಂತ ವಿನಮ್ರವಾಗಿ ಪ್ರಕಟಿಸಿದ್ದಾರೆ. ವಿಶಾಲ್​ ಅವರ ಈ ಸಹೃದಯೀ ನಿರ್ಧಾರದ ಬಗ್ಗೆ ಕನ್ನಡಿಗರು ಅಭಿಮಾನದ ಹೊಳೆ ಹರಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವಿಶಾಲ್ ವಿಡಿಯೊ ವೈರಲ್ ಆಗಿದ್ದು, ಇವರ ನಡೆಗೆ ಶಹಬ್ಬಾಸ್ ಎಂದು ಬೆನ್ನು ತಟ್ಟುತ್ತಿದ್ದಾರೆ.

ಸಿನಿಮಾದಲ್ಲಿ ನಾಯಕರಾಗಿರುವ ಜತೆ ಪುನೀತ್ ನಿಜಜೀವನದಲ್ಲಿಯೂ ನಾಯಕರಾಗಿ ಕೆಲಸ ಮಾಡಿಕೊಂಡು ಬಂದವರು. ಅನಾಥರು, ಮಾರಕ ರೋಗಗಳಿಂದ ಬಳಲುತ್ತಿರುವವರ ಸಹಾಯಕ್ಕೆ ಧಾವಿಸುತ್ತಿದ್ದರು. ಕೊರೋನಾ ಸಂಕಷ್ಟ ಸಂದರ್ಭದಲ್ಲಿ ಮುಖ್ಯಮಂತ್ರಿ ಪರಿಹಾರ ನಿಧಿಗೆ 50 ಲಕ್ಷ ರೂ. ನೀಡಿದ್ದರು.

Donate Janashakthi Media

Leave a Reply

Your email address will not be published. Required fields are marked *