ನವದೆಹಲಿ: ತಮಿಳುನಾಡು ಸರ್ಕಾರ ನಿತ್ಯ 24 ಸಾವಿರ ಕ್ಯೂಸೆಕ್ ಕಾವೇರಿ ನೀರನ್ನು ಬಿಡುಗಡೆ ಮಾಡುವಂತೆ ಆದೇಶಿಸಬೇಕೆಂದು ಕೋರಿ ಸಲ್ಲಿಸಿದ್ದ ಮನವಿಯನ್ನು ಶುಕ್ರವಾರ ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯ ಭಾಟಿ ಸೋಮವಾರ ಪ್ರಾಧಿಕಾರದ ಸಭೆಯನ್ನು ನಿಗದಿಪಡಿಸಲಾಗಿದೆ ಎಂದು ತಿಳಿಸಿದ ನಂತರ ನ್ಯಾಯಮೂರ್ತಿ ಬಿ.ಆರ್ ಗವಾಯಿ ನೇತೃತ್ವದ ತ್ರಿಸದಸ್ಯ ಪೀಠವು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದಿಂದ (ಸಿಡಬ್ಲ್ಯುಎಂಎ) ಕರ್ನಾಟಕ ಬಿಡುಗಡೆ ಮಾಡಿದ ನೀರಿನ ಪ್ರಮಾಣದ ಬಗ್ಗೆ ವರದಿ ಕೇಳಿದೆ. ನಾವು ಈ ವಿಚಾರದಲ್ಲಿ ಪರಿಣತಿಯನ್ನು ಹೊಂದಿಲ್ಲ ಮುಂದಿನ ಹದಿನೈದು ದಿನಗಳ ಕಾಲ ನೀರು ಹರಿಸುವುದನ್ನು ನಿರ್ಧರಿಸಲು ಸೋಮವಾರ ಪ್ರಾಧಿಕಾರ ಸಭೆ ನಡೆಸುತ್ತಿದೆ ಎಂದು ಹೆಚ್ಚುವರಿ ಸಾಲಸಿಟರ್ ಜನರಲ್ ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ:ಜಲ ವಿವಾದ ಪ್ರಧಾನಿ ಮೋದಿ ಬಳಿಗೆ ಸರ್ವಪಕ್ಷ ನಿಯೋಗ: ಸಿಎಂ ಸಿದ್ದರಾಮಯ್ಯ
ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಪಿ.ಕೆ ಮಿಶ್ರಾ ಅವರನ್ನೊಳಗೊಂಡ ಪೀಠವು ನೀರು ಬಿಡಲು ನೀಡಿರುವ ನಿರ್ದೇಶಗಳನ್ನು ಪಾಲಿಸಲಾಗಿದೆಯೇ ಅಥವಾ ಇಲ್ಲವೇ ಎಂಬುದರ ಕುರಿತು ಪ್ರಾಧಿಕಾರ ತನ್ನ ವರದಿಯನ್ನು ಸಲ್ಲಿಸುವುದು ಸೂಕ್ತ ಎಂದು ಹೇಳಿದೆ.
ತಮಿಳುನಾಡು ಸರ್ಕಾರ ಈ ವರ್ಷ ನೀರಿಗೆ ಸಂಕಷ್ಟವಿಲ್ಲ,ಹಾಗಾಗಿ ಪ್ರತಿದಿನ 24 ಸಾವಿರ ಕ್ಯೂಸೆಕ್ ಕಾವೇರಿ ನೀರನ್ನು ಬಿಡುಗಡೆ ಮಾಡಬೇಕು ಎಂದು ಕೇಳುತ್ತಿರುವುದು ಸರಿಯಲ್ಲ ಎಂದು ಕರ್ನಾಟಕ ಸರ್ಕಾರ ಹೇಳಿದೆ.