ತಮ್ಮನ್ನು ತಾವೇ ಮಾರಾಟ ಮಾಡಿಕೊಂಡಿದ್ದರಿಂದ ಮಸ್ಕಿಗೆ ಮತ್ತೆ ಚುನಾವಣೆ : ಸಿದ್ದರಾಮಯ್ಯ

ಮಸ್ಕಿ :  ಪ್ರತಾಪಗೌಡ ಪಾಟೀಲ್‌ ಅವರು ಕಾಂಗ್ರೆಸ್‌ ಪಕ್ಷಕ್ಕೆ ದ್ರೋಹ ಮಾಡಿ ಬಿಜೆಪಿ ಸೇರಿದ್ದಾರೆ. ಲಂಚಕ್ಕೆ ಬಲಿಯಾಗಿರುವ ಅವರು ತಮ್ಮನ್ನು ತಾವು ಮಾರಾಟ ಮಾಡಿಕೊಂಡಿದ್ದಾರೆʼʼ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

ಮಸ್ಕಿ ವಿಧಾನಸಭೆ ಉಪ ಚುನಾವಣೆ ಅಂಗವಾಗಿ ಪಟ್ಟಣದ ತೇರ ಬೀದಿಯಲ್ಲಿ ಕಾಂಗ್ರೆಸ್‌ ಪಕ್ಷವು ಹಮ್ಮಿಕೊಂಡಿದ್ದ ಬಹಿರಂಗ ಸಭೆಯಲ್ಲಿ ಮಾತನಾಡಿದರು.

‘ಎರಡು ಸಲ ಕಾಂಗ್ರೆಸ್‌ ನಿಂದ ಶಾಸಕರಾಗಿ ಆಯ್ಕೆಯಾಗಿ ಪಕ್ಷಕ್ಕೆ ದ್ರೋಹ ಮಾಡಿದ ಬಗೆದು ಪ್ರತಾಪಗೌಡ ಪಾಟೀಲ್ ಅವರು ಈಗ ಬಿಜೆಪಿಗೆ ಹೋಗಿದ್ದಾರೆ.

ಇದನ್ನು ಓದಿ : ಬೆಳಗಾವಿ ಲೋಕಸಭಾ ಉಪ ಚುನಾವಣೆ : ನಾಮಪತ್ರ ಸಲ್ಲಿಸಿದ ಸತೀಶ ಜಾರಕಿಹೊಳಿ

ಬಸನಗೌಡ ತುರುವಿಹಾಳ ಪರವಾಗಿ ಗ್ರಾಮ ಗ್ರಾಮಕ್ಕೆ ಬಂದು ಮತಯಾಚನೆ ಮಾಡುವೆ. ಅವರನ್ನು ವಿಧಾನಸಭೆ ಕಳಿಸಲು ಮಸ್ಕಿ ಕ್ಷೇತ್ರದ ಜನತೆ ಈಗಾಗಲೇ ತೀರ್ಮಾನ ಮಾಡಿದ್ದಾರೆ’ ಎಂದು ಸಿದ್ದರಾಮಯ್ಯ ಹೇಳಿದರು.

‘ಕಾಂಗ್ರೆಸ್‌ ಪಕ್ಷ ಅಧಿಕಾರದಲ್ಲಿ ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಮಸ್ಕಿ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಎರಡುವರೆ ಸಾವಿರ ಕೋಟಿ ಅನುದಾನ ಕೊಟ್ಟಿದ್ದೆ. ರಾಜ್ಯದ ಎಲ್ಲಾ ಜಾತಿಗಳ ಬಡವರಿಗೆ 7 ಕೆ.ಜಿ. ಉಚಿತವಾಗಿ ಅಕ್ಕಿ ಕೊಡುವ ಯೋಜನೆ ಮಾಡಲಾಗಿತ್ತು. ಆದರೆ ಯಡಿಯೂರಪ್ಪ ಅಧಿಕಾರಕ್ಕೆ ಬಂದ ನಂತರ 4 ಕೆ.ಜಿ. ಅಕ್ಕಿಯನ್ನು ಕಡಿಮೆ ಮಾಡಿದ್ದಾರೆ.  ಜನರ ಹಣ ಜನರಿಗೆ ಕೊಡಲು ಇವರಪ್ಪನ ಮನೆ ಗಂಟೇನು ಹೋಗ್ತಿತ್ತು. ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ ಬಡವರಿಗೆ 10 ಕೆಜಿ ಅಕ್ಕಿ ಉಚಿತವಾಗಿ ಕೊಡಲಾಗುವುದು’ ಎಂದು ತಿಳಿಸಿದರು.

‘ಯಡಿಯೂರಪ್ಪ 2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಪ್ರಣಾಳಿಕೆ ಘೋಷಣೆ ಮಾಡಿದ್ದ ರೂ. 1 ಲಕ್ಷದವರೆಗಿನ ಸಾಲ ಮನ್ನಾ ಮಾಡುವುದಾಗಿ ತಿಳಿಸಿದ್ದರು. ಆದರೆ,  ಅಧಿಕಾರಕ್ಕೆ ಬಂದ ನಂತರ ಒಂದೇ ಒಂದು ರೂಪಾಯಿ ಸಾಲ ಮನ್ನಾ ಮಾಡಲಿಲ್ಲ. ಇಂಥವರಿಗೆ ನೀವು ಅಧಿಕಾರ ಕೊಡಬೇಕಾ’ ಎಂದು ಜನರನ್ನು ಪ್ರಶ್ನಿಸಿದರು.

ಇದನ್ನು ಓದಿ : ಪೊಲೀಸ್‌ ವಿಚಾರಣೆಗೆ ಹಾಜರಾದ ಶಾಸಕ ರಮೇಶ್‌ ಜಾರಕಿಹೊಳಿ

‘ಪ್ರತಾಪ್ ಗೌಡರಂತಹ ಪಕ್ಷ ದ್ರೋಹಿಗಳಿಗೆ ರಾಜಕೀಯದಲ್ಲಿ ಬೆಳೆಯಲು ಬಿಡಬಾರದು. ತಕ್ಕ ಪಾಠ ಕಲಿಸಬೇಕು. ದುಡ್ಡಿಗೋಸ್ಕರ ಮಾರಿಕೊಳ್ಳುವ ರಾಜಕಾರಣಿಗಳಿಗೆ ಅವಕಾಶ ನೀಡಬೇಡಿ’ ಎಂದು ಹೇಳಿದರು.

‘ಅಗತ್ಯವಸ್ತುಗಳ ಬೆಲೆ, ಇಂಧನ ಬೆಲೆ ಹಾಗೂ ತರಕಾರಿಗಳ ಬೆಲೆಗಳು ಗಗನಕ್ಕೇರಿವೆ. ಇಂತಹ ಸಂದರ್ಭದಲ್ಲಿ ಬಡವರು ಬದುಕಲು ಸಾಧ್ಯವಿಲ್ಲ. ಕಾಂಗ್ರೆಸ್ ಎಲ್ಲ ಜನರ ಪಕ್ಷವಾಗಿದ್ದು, ಬಸನಗೌಡ ಅವರನ್ನು ಆಯ್ಕೆಗೊಳಿಸಿ’ ಎಂದು ಮನವಿ ಮಾಡಿದರು.

ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರುವಿಹಾಳ ಇಂದು ನಾಮಪತ್ರ ಸಲ್ಲಿಸಿದ ನಂತರ ನಡೆದ ಸಾರ್ವಜನಿಕ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕಾರ್ಯಾಧ್ಯಕ್ಷ ಸಲೀಂ ಅಹಮದ್, ಮುಖಂಡರಾದ ಬಸನಗೌಡ ದದ್ದಲ್, ಬೋಸರಾಜ್, ಬಸವನಗೌಡ ಬಾದರ್ಲಿ, ಅಮರೇಗೌಡ ಬಯ್ಯಾಪುರ, ಬಿ.ವಿ. ನಾಯಕ್ ಮತ್ತಿತರರು ಭಾಗವಹಿಸಿದ್ದರು.

Donate Janashakthi Media

Leave a Reply

Your email address will not be published. Required fields are marked *