ಚಂಡೀಗಢ: ಪಹಲ್ಗಾಮ್ ಘಟನೆಯ ಹಿನ್ನೆಲೆಯಲ್ಲಿ ಮುಸ್ಲಿಮರು ಮತ್ತು ಕಾಶ್ಮೀರಿಗಳನ್ನು ಗುರಿಯಾಗಿಸಿಕೊಂಡು ದ್ವೇಷ ಹರಡುವುದು ಸರಿಯಲ್ಲ ಎಂದು ಮೇ 1ರಂದು ವಿನಯ್ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಹಿಮಾಂಶಿ ನರ್ವಾಲ್, ಹೇಳಿದ್ದಾರೆ.
ಏ. 22ರಂದು ಜಮ್ಮು ಕಾಶ್ಮೀರ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಹಿಮಾಂಶಿ ಪತಿ, ನೌಕಾಪಡೆಯ ಲೆಫ್ಟಿನೆಂಟ್ ವಿನಯ್ ನರ್ವಾಲ್ (27) ಕೂಡ ಮೃತಪಟ್ಟಿದ್ದರು.
ಇದನ್ನೂ ಓದಿ: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ 14.50 ಇಳಿಕೆ
“ಇಡೀ ದೇಶವೇ ಅವರಿಗಾಗಿ ಪ್ರಾರ್ಥಿಸಬೇಕು” ಎಂದು ಮನವಿ ಮಾಡಿದ್ದೂ, ಅವರು ಯಾವುದೇ ಒಂದು ಧರ್ಮದ ವಿರುದ್ದ ದ್ವೇಷ ಕಾರದಂತೆ ಮನವಿ ಮಾಡಿದ್ದಾರೆ.
“ಪಹಲ್ಗಾಮ್ ದಾಳಿಯ ಹಿನ್ನೆಲೆಯಲ್ಲಿ ಮುಸ್ಲಿಮರು ಅಥವಾ ಕಾಶ್ಮೀರಿಗಳ ವಿರುದ್ಧ ದ್ವೇಷ ಕಾರುವುದು ಸರಿಯಲ್ಲ. ನಮಗೆ ಶಾಂತಿ ಮಾತ್ರ ಬೇಕು. ಜತೆಗೆ ನಮಗೆ ನ್ಯಾಯ ಸಿಗಬೇಕು” ಎಂದು ಆಗ್ರಹಿಸಿದ್ದಾರೆ.
ಇದನ್ನೂ ನೋಡಿ: ಧಾರ್ಮಿಕತೆ ಮೀರಿದ ನಾಯಕತ್ವ ಈ ದೇಶಕ್ಕೆ ಬೇಕು – ಬರಗೂರು ರಾಮಚಂದ್ರಪ್ಪ Janashakthi Media