ಬೆಂಗಳೂರಿನ ರಸ್ತೆಗುಂಡಿಗಳನ್ನು ಮುಚ್ಚಲು ಟಾಸ್ಕ್‌ಪೋರ್ಸ್‌ ರಚನೆ

ಬೆಂಗಳೂರು: ಮಳೆಗಾಲ ಬಂತೆಂದರೆ ಬೆಂಗಳೂರಿನಲ್ಲಿ ಪ್ರಯಾಣಿಕರು, ಸವಾರರು ಅಲ್ಲದೇ ಪಾದಚಾರಿಗಳು ಬಹುತೇಕವಾಗಿ ಒಮ್ಮೊಮ್ಮೆ ಗಂಭೀರ ಪರಿಸ್ಥಿತಿಯನ್ನು ತಂದೊಡ್ಡುವಂತಹ ಸಮಸ್ಯೆ ಅದು ಸರ್ಕಾರಕ್ಕೂ ತಲೆನೋವಾಗುವಂತಹ ಸಮಸ್ಯೆಯೆಂದರೆ, ರಸ್ತೆಗಳಲ್ಲಿನ ಗುಂಡಿಗಳು. ಕೆಲವು ದಿನಗಳ ಹಿಂದೆ ಸಿಎಂ ಸಿದ್ದರಾಮಯ್ಯ ಜೊತೆ ಡಿಸಿಎಂ ಆಗಿರುವ ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್‌, ಸಿಟಿ ರೌಂಡ್ಸ್‌ ಮಾಡಿದಾಗ ಬೆಂಗಳೂರಿನ ರಸ್ತೆಗಳಲ್ಲಿರುವ ಗುಂಡಿಗಳ ಬಗ್ಗೆ ಸಾಕಷ್ಟು ದೂರುಗಳು ಕೇಳಿಬಂದಿದ್ದವು. ಹೀಗಾಗಿ ಬೆಂಗಳೂರಿನ ಗುಂಡಿಗಳನ್ನು ಮುಚ್ಚಲು ಮುಂದಾಗಿರುವ ಸರ್ಕಾರ ರಸ್ತೆಗಳನ್ನು ಮುಚ್ಚಲು ಟಾಸ್ಕ್‌ಪೋರ್ಸ್‌ ರಚನೆ ಮಾಡಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ 12,878 ಕಿ.ಮೀ ಉದ್ದದ ರಸ್ತೆಯಲ್ಲಿ ಇದರಲ್ಲಿ ಆರ್ಟಿರಿಯಲ್‌ ಮತ್ತು ಸಬ್‌ ಆರ್ಟಿರಿಯಲ್‌ ರಸ್ತಗೆಗಳು 1,3444.84 ಕಿ.ಮೀ ಉದ್ದವಿದೆ. ಈ ರಸ್ತೆಗಳನ್ನು ರಸ್ತೆ ಮೂಲಭೂತ ಸೌಕರ್ಯ ಶಾಖೆಯಿಂದ ನಿರ್ವಹಣೆ ಮಾಡಲಾಗುತ್ತಿದೆ. ವಾರ್ಡ್‌ ರಸ್ತೆಗಳು 11,5333.16 ಉದ್ದವಿದೆ. ಈ ರಸ್ತೆಗಳನ್ನು ವಲಯಮಟ್ಟದಲ್ಲಿ ನಿರ್ವಹಣೆ ಮಾಡಲಾಗುತ್ತಿದೆ.

ಇದನ್ನೂ ಓದಿ: ಕೈದಿಯಿಂದ ಜೈಲಿನ ವಾರ್ಡನ್‌ ಮೇಲೆ ಮಾರಣಾಂತಿಕ ಹಲ್ಲೆ

ಬಿದ್ದಿರುವ ರಸ್ತೆ ಗುಂಡಿಗಳನ್ನು ಮತ್ತು ನಿಗಧಿತ ಅವಧಿಯಲ್ಲಿ ನಿರ್ವಹಣೆ ಮಾಡಲು ವಲಯ ಮಟ್ಟದಲ್ಲಿ “ವಲಯವಾರು ಟಾಸ್ಕ್‌ ಪೋರ್ಸ್”‌ ರಚನೆ ಮಾಡುವುದು ಸೂಕ್ತವೆಂದು ತೀರ್ಮಾನಿಸಲಾಘಿದೆ. ಸದರಿ ಟಾಸ್ಕ್ಪೋರ್ಸ್‌ ಅನ್ನು ವಲಯ ಮಟ್ಟದ ವಲಯ ಆಯುಕ್ತರವರ ನೇತೃತ್ವದಲ್ಲಿ ರಚನೆ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಈ ಟಾಸ್ಕ್‌ ಪೋರ್ಸ್‌ಗೆ ವಲಯ ಆಯುಕ್ತರು ಅಧ್ಯಕ್ಷರಾಗಿದ್ದು, ವಲಯ ಜಂಟಿ ಆಯುಕ್ತರು, ವಲಯ ಮುಖ್ಯ ಅಭಿಯಂತರರು, ವಲಯ ಸಹಾಯಕ ಸಂಚಾರ ಪೊಲೀಸ್‌ ಆಯುಕ್ತರು, ವಲಯದ ರಸ್ತೆ ಮೂಲಭೂತ ಸೌಕರ್ಯ ವಿಭಾಗದ ಕಾರ್ಯಪಾಲಕ ಅಭಿಯಂತರರರು, ವಲಯ ವ್ಯಾಪ್ತಿಗೆ ಬರುವ ಸಂಬಂಧಪಟ್ಟ ವಿಭಾಗದ ಕಾರ್ಯಪಾಲಕ ಅಭಿಯಂತರರು ಸದಸ್ಯರಾಗಿರುತ್ತಾರೆ.

ಇನ್ನು ವಲಯ ಆಯುಕ್ತರ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಹಾಯಕ ಉಪನಿಯಂತ್ರಕ (ಹಣಕಾಸು_ ಸದಸ್ಯರ ಕಾರ್ಯದರ್ಶಿ ಸೇರಿದಂತೆ ಆಯಾ ವಲಯ ವ್ಯಾಪ್ತಿಯಲ್ಲಿ ಬರುವ ಆಯುಕ್ತರನ್ನೊಳಗೊಂಡ ಟಾಸ್ಕ್‌ ಪೋರ್ಸ್‌ ಸಮಿತಿಯನ್ನು ರಚಿಸಲಾಗಿದೆ ಎಂದು ಬಿಬಿಎಂಪಿ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.

ಬಿಬಿಎಂಪಿ ಆಯುಕ್ತ ತುಷಾರ್‌ ಗಿರಿನಾಥ್‌, ರಸ್ತೆ ಗುಂಡಿಮುಚ್ಚುವುದು, ರಾಜಕಾಲುವೆ ಸ್ವಚ್ಛತೆಗೆ ಆದ್ಯತೆ ನೀಡಲಾಘುವುದು, ನಗರದ ಆರ್ಟಿಯಲ್‌ , ಸಬ್‌ ಆರ್ಟಿರಿಯಲ್‌ ಹಾಗೂ ವಾರ್ಡ್‌ ರಸ್ತೆಗಳಲ್ಲಿ ಈಗಾಗಲೇ ರಸ್ತೆಗುಂಡಿಗಳನ್ನು ಮುಚ್ಚುವ ಕಾರ್ಯ ಪ್ರಗತಿಯಲ್ಲಿದೆ ಎಂದರು.

ಬೆಂಗಳೂರು ನಗರದ ಪ್ರಥಮ, ದ್ವಿತೀಯ ರಾಜಕಾಲುವೆಗಳಲ್ಲಿ ಸಕ್ರಿಯವಾಗಿ ಹೂಳೆತ್ತುವ ಕೆಲಸ ನಡೆಯಬೇಕು, ರಾಜಕಾಲುವೆಗೆ ತ್ಯಾಜ್ಯ ಬಿಸಾಡದಂತೆ ಸೂಕ್ತ ಕ್ರಮವಹಿಸಬೇಕು. ಎಲ್ಲಾ ಕಡೆ ಸ್ವಚ್ಛತೆಗೆ ಆದ್ಯತೆ ನೀಡಿ, ಎಲ್ಲಿಯೂ ನೀರು ನಿಲ್ಲದಂತೆ ಸರಾಗವಾಗಿ ಹರಿದುಹೋಗುವಂತೆ ಮಾಡಬೇಕೆಂದು ಸಂಬಂಧಪಟ್ಟವರಿಗೆ ಸೂಚಿಸಿದ್ದಾರೆ.

ಇದನ್ನೂ ನೋಡಿ: ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್ ದಾಖಲಿಸಿದ್ದ ಮಹಿಳೆ ಸಾವು: ಸಾವಿನ ಸುತ್ತ ಅನುಮಾನದ ಹುತ್ತ

Donate Janashakthi Media

Leave a Reply

Your email address will not be published. Required fields are marked *