ಕಲಬುರಗಿ| ಮನೆಗೆ ನುಗ್ಗಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಶಿಕ್ಷಕ ಬಂಧನ

ಕಲಬುರಗಿ: ಮನೆಗೆ ನುಗ್ಗಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಘಟನೆ ಆಳಂದ ತಾಲ್ಲೂಕಿನ ಗ್ರಾಮವೊಂದರಲ್ಲಿ ನಡೆದಿದ್ದೂ, ಇದೀಗ ಅತಿಥಿ ಶಿಕ್ಷಕರೊಬ್ಬರನ್ನು ಮಾದನಹಿಪ್ಪರಗಾ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಅತಿಥಿ ಶಿಕ್ಷಕ ಶಿವರಾಜ ಹಣಮಂತ (32) ಬಂಧಿತ ಶಿಕ್ಷಕ.

8ನೇ ತರಗತಿ ಓದುತ್ತಿದ್ದ 14 ವರ್ಷದ ಬಾಲಕಿ ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತೆ. ಶಿಕ್ಷಕನ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕಿಯ ತಾಯಿ ಯುಗಾದಿ ಹಬ್ಬಕ್ಕೆ ಮೂವರು ಮಕ್ಕಳನ್ನು ಕರೆದುಕೊಂಡು ತವರು ಮನೆಗೆ ಹೋಗಿದ್ದರು. ಪರೀಕ್ಷೆಯ ಕಾರಣಕ್ಕೆ ಸಂತ್ರಸ್ತೆ ಬಾಲಕಿ ಮನೆಯಲ್ಲಿಯೇ ಉಳಿದಿದ್ದಳು.

ಇದನ್ನೂ ಓದಿ: ವಾಹನದಲ್ಲಿ ಹೋಗುತ್ತಿದ್ದ ಯುವತಿಗೆ ಲೈಂಗಿಕ ಕಿರುಕುಳ

ಅದೇ ಗ್ರಾಮದಲ್ಲಿನ ಅಜ್ಜಿಯ ಮನೆಗೆ ಹೋಗಿದ್ದ ಬಾಲಕಿ, ಸಂಜೆ ವಾಪಸ್ ಬಂದು ಮನೆಯಲ್ಲಿ ಸ್ನೇಹಿತರ ಜತೆಗೆ ಟಿ.ವಿ. ನೋಡುತ್ತಿದ್ದಳು. ಆಕೆಯನ್ನು ಹಿಂಬಾಲಿಸಿಕೊಂಡು ಬಂದ ಶಿವರಾಜ, ಮನೆಗೆ ನುಗ್ಗಿದನು. ಇದರಿಂದ ಬಾಲಕಿಯ ಸ್ನೇಹಿತರು ಹೆದರಿ ಹೊರಗೆ ಓಡಿಹೋದರು ಎಂದು ಹೇಳಿದ್ದಾರೆ.

ಬಾಲಕಿಯು ಮನೆಯಲ್ಲಿ ತಾಯಿ-ತಂದೆ ಇಲ್ಲ ಯಾಕೆ ಬಂದಿದ್ದು ಎಂದು ಶಿಕ್ಷಕನಿಗೆ ಕೇಳಿದಳು. ನಾನು ನಿನ್ನ ಪ್ರೀತಿಸುತ್ತೇನೆ ಎಂದು ಪುಸುಲಾಯಿಸಿ ಮತ್ತು ಹೆದರಿಸಿ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಪರಾರಿಯಾದನು.

ಪ್ರಜ್ಞೆ ತಪ್ಪಿ ಬಿದ್ದಿದ್ದ ಬಾಲಕಿಯನ್ನು ಪೋಷಕರು ಕಲಬುರಗಿ ನಗರದ ಜಿಮ್ಸ್‌ಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದರು. ಎಚ್ಚರವಾದಾಗ ನಡೆದ ಕೃತ್ಯವನ್ನು ಪೋಷಕರಿಗೆ ತಿಳಿಸಿದ್ದಾಳೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ನೋಡಿ: ವಚನಾನುಭವ – 24 |ಹೆಣ್ಣು ಹೆಣ್ಣಾದಡೆ ಗಂಡಿನ ಸೂತಕ Janashakthi Media

Donate Janashakthi Media

Leave a Reply

Your email address will not be published. Required fields are marked *