ನವದೆಹಲಿ: ಭಾರತ ಕ್ರಿಕೆಟ್ ತಂಡ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೂರನೇ ಪಂದ್ಯದಲ್ಲಿ ಇತಿಹಾಸವನ್ನು ಸೃಷ್ಟಿಸಿದೆ. 147 ವರ್ಷಗಳ ಹಿಂದಿನ ಆಟದ ಇತಿಹಾಸದಲ್ಲಿ ಹಿಂದೆಂದೂ ಮಾಡದ ಬೃಹತ್ ಶ್ರೀ ಸಾಧನೆಯನ್ನು ಮಾಡಿದೆ. ವಿರಾಟ್ ಕೊಹ್ಲಿ ಅದ್ಭುತ ಸಿಕ್ಸರ್ ಮೂಲಕ ವಿಶಿಷ್ಟ ಮೈಲಿಗಲ್ಲನ್ನು ಪೂರ್ಣಗೊಳಿಸಿದೆ. ವಿಶ್ವ
ಕೊಹ್ಲಿ ಭರ್ಜರಿ ಸಿಕ್ಸ್ ಬಾರಿಸುವ ಮೂಲಕ ಟೀಂ ಇಂಡಿಯಾ ಹೊಸ ಇತಿಹಾಸ ನಿರ್ಮಿಸುವಂತೆ ಮಾಡಿದರು. ಈ ಮೂಲಕ ಒಂದು ಕ್ಯಾಲೆಂಡರ್ ವರ್ಷದಲ್ಲಿ 100 ಸಿಕ್ಕರ್ಗಳನ್ನು ಬಾರಿಸಿದ ವಿಶ್ವದ ಮೊದಲ ತಂಡ ಎಂಬ ವಿಶ್ವ ದಾಖಲೆಯನ್ನು ಟೀಂ ಇಂಡಿಯಾ ನಿರ್ಮಿಸಿದೆ.
ಸಿಕ್ಸ್ ಮೂಲಕ ಐತಿಹಾಸಿಕ ದಾಖಲೆ:
ಹೌದು, ಭಾರತ ತಂಡ ಬೆಂಗಳೂರಿನಲ್ಲಿ ನಡೆಯುತ್ತಿರುವ ಕಿವೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ವಿಶೇಷ ಹಾಗೂ ಐತಿಹಾಸಿಕ ದಾಖಲೆ ನಿರ್ಮಿಸಿದ. ಎರಡು ಬಾರಿಯ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ (WTC) ಫೈನಲಿಸ್ಟ್ ಭಾರತ ತಂಡ ಹೊಸ ಇತಿಹಾಸ ನಿರ್ಮಿಸಿದ್ದು, ಕ್ಯಾಲೆಂಡರ್ ವರ್ಷದಲ್ಲಿ 100 ಸಿಕ್ಕರ್ಗಳನ್ನು ಬಾರಿಸಿದ ವಿಶ್ವದ ಮೊದಲ ತಂಡ ಎಂಬ ಸಾಧನೆ ಮಾಡಿದೆ.
ಇದನ್ನೂ ಓದಿ: ಕಾರ್ಪೊರೇಟ್ ಜಗತ್ತನ್ನು ಬೆಚ್ಚಿಬೀಳಿಸಿದ 37 ದಿನಗಳು ಸ್ಯಾಮ್ ಸಂಗ್ ಇಂಡಿಯಾ ಕಾರ್ಮಿಕರ ಐತಿಹಾಸಿಕ ಹೋರಾಟಕ್ಕೆ ಜಯ
ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳು
ಭಾರತ – 2024 – 102 ಸಿಕ್ಸ್
ಇಂಗ್ಲೆಂಡ್ – 2022- 89 ಸಿಕ್ಸ್
ಭಾರತ – 2021 – 87 ಸಿಕ್ಸ್ ಮ್ಯೂಜಿಲೆಂಡ್ – 2014 – 81 ಸಿಕ್ಸ್
ಮ್ಯೂಜಿಲೆಂಡ್ – 2013 – 71 ಸಿಕ್ಸ್
ಬೆಂಗಳೂರು ಟೆಸ್ಟ್‌ನ ಎರಡನೇ ಇನ್ನಿಂಗ್ಸ್‌ನಲ್ಲಿ ಇದುವರೆಗೆ, ಭಾರತ ಐದು ಸಿಕ್ಸರ್‌ಗಳನ್ನು ಹೊಡೆದಿದೆ, ರೋಹಿತ್ ಮತ್ತು ವಿರಾಟ್ ಅವರ ತಲಾ ಒಂದು ಮತ್ತು ಸರ್ಫರಾಜ್ ಖಾನ್ ಅವರ ಮೂರು ಸಿಕ್ಸರ್ ಸಿಡಿಸಿದ್ದಾರೆ.
ಟೆಸ್ಟ್ ಮುಗಿದ ನಂತರ 2024 ರಲ್ಲಿ ಇನ್ನೂ ಆರು ಪಂದ್ಯಗಳು ಉಳಿದಿರುವುದರಿಂದ ಭಾರತವು ತಮ್ಮ ವಿಶ್ವ ದಾಖಲೆಯನ್ನು ಗಮನಾರ್ಹವಾಗಿ ಹೆಚ್ಚಿಸುವ ಅವಕಾಶವನ್ನು ಹೊಂದಿದೆ. ಈ ಸರಣಿಯಲ್ಲಿ ಇನ್ನೂ ಎರಡು ಪಂದ್ಯಗಳು ಮತ್ತು ಆಸ್ಟ್ರೇಲಿಯಾ ವಿರುದ್ಧ ನಾಲ್ಕು ಪಂದ್ಯಗಳನ್ನು ಭಾರತ ಆಡಲಿದೆ.
ಶತಕ ಸಿಡಿಸಿ ಅಬ್ಬರಿಸಿದ ಸರ್ಫರಾಜ್
ಸರ್ಫರಾಜ್ ಖಾನ್ ತಮ್ಮ ಬ್ಯಾಟಿಂಗ್ ಮೂಲಕ ಎಲ್ಲರ ಮನ ಗೆದ್ದಿದ್ದಾರೆ. ಮೊದಲ ಇನ್ನಿಂಗ್ಸ್‌ನಲ್ಲಿ ಖಾತೆ ತೆರೆಯಲು ಸಾಧ್ಯವಾಗದ ಸರ್ಫರಾಜ್ ಖಾನ್, ಎರಡನೇ ಇನ್ನಿಂಗ್ಸ್‌ನಲ್ಲಿ ಭರ್ಜರಿ ಬ್ಯಾಟಿಂಗ್ ಮಾಡಿದ್ದಾರೆ. ಭಾರತ ಪರ ಸರ್ಫರಾಜ್ ಟೆಸ್ಟ್ ಕ್ರಿಕೆಟ್‌ನಲ್ಲಿ ಮೊದಲ ಶತಕ ದಾಖಲಿಸಿದ್ದಾರೆ.
ಅವರ ಶತಕದ ನೆರವಿನಿಂದ ಭಾರತ ತಂಡ ಮ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್‌ನಲ್ಲಿ ಬಲಿಷ್ಯ ಪುನರಾಗಮನ ಮಾಡಿದೆ. ಸರ್ಫರಾಜ್ ಖಾನ್ ಅತ್ಯಂತ ವೇಗವಾಗಿ ಬ್ಯಾಟಿಂಗ್ ಮಾಡಿದ್ದಾರೆ. ಕೇವಲ 110 ಎಸೆತಗಳಲ್ಲಿ ಶತಕ ಪೂರೈಸಿದ್ದಾರೆ. ಈ ಅವಧಿಯಲ್ಲಿ ಈ ಸ್ಟಾರ್ ಬ್ಯಾಟ್ಸ್‌ಮನ್ 12 ಬೌಂಡರಿ ಮತ್ತು 4 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.
ಇದನ್ನೂ ನೋಡಿ: ಬೆಂಗಳೂರು ಮಳೆ: ಮಾನ್ಯತಾ ಟೆಕ್ ಪಾರ್ಕ್ ರಸ್ತೆ ಜಲಾವೃತ Janashakthi Media