ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂಧೆ ನೇಮಕ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ: ಜುಲೈ 11ಕ್ಕೆ ವಿಚಾರಣೆ

ನವದೆಹಲಿ: ಮಹಾರಾಷ್ಟ್ರ ರಾಜ್ಯದ ಮುಖ್ಯಮಂತ್ರಿಯಾಗಿ ಶಿವಸೇನೆ ಬಂಡಾಯ ಶಾಸಕ ಏಕನಾಥ್ ಶಿಂಧೆ ಮತ್ತು ಉಪಮುಖ್ಯಮಂತ್ರಿಯಾಗಿ ಬಿಜೆಪಿಯ ದೇವೇಂದ್ರ ಫಡ್ನವಿಸ್ ಪ್ರಮಾಣವಚನ ಸ್ವೀಕರಿಸಿದ್ದು, ಇದನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಬಣ ಸುಪ್ರೀಂ ಕೋರ್ಟ್‌ನಲ್ಲಿ ಮತ್ತೊಂದು ಅರ್ಜಿಯನ್ನು ಸಲ್ಲಿಸಿದೆ.

ರಾಜ್ಯದಲ್ಲಿ ಸರ್ಕಾರ ರಚನೆಗೆ ಏಕನಾಥ್ ಶಿಂಧೆ ಅವರಿಗೆ ಆಹ್ವಾನ ನೀಡಿದ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರ ನಿರ್ಧಾರವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿದೆ. ಉದ್ಧವ್‌ ಠಾಕ್ರೆ ಬಣದ ಸುಭಾಷ್ ದೇಸಾಯಿ ಅರ್ಜಿ ಸಲ್ಲಿಸಿದ್ದಾರೆ.

ರಜೆ ಪೀಠದ ನ್ಯಾಯಮೂರ್ತಿಗಳಾದ ಇಂದಿರಾ ಬ್ಯಾನರ್ಜಿ ಹಾಗೂ ಜೆಕೆ ಮಹೇಶ್ವರಿ ಅವರಿದ್ದ ಪೀಠಕ್ಕೆ ಸುಭಾಷ್‌ ದೇಸಾಯಿ ಪರವಾಗಿ ಹಿರಿಯ ಅಡ್ವೊಕೇಟ್ ದೇವದತ್ ಕಾಮತ್ ವಾದ ಮಂಡಿಸಿದರು. ನ್ಯಾಯಪೀಠ ಅರ್ಜಿಯ ವಿಚಾರಣೆಯನ್ನು ಜುಲೈ 11 ರಂದು ನಡೆಸಲು ಒಪ್ಪಿಗೆ ಸೂಚಿಸಿದೆ.

ಶಿವಸೇನೆಯ 16 ಬಂಡಾಯ ಶಾಸಕರನ್ನು ಅನರ್ಹಗೊಳಿಸಿ ಹಿಂದಿನ ವಿಧಾನಸಭೆಯ ಉಪ ಸಭಾಧ್ಯಕ್ಷ ಆದೇಶ ಹೊರಡಿಸಿದ್ದರು. ಈ ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಗೆ ಬಾಕಿ ಇರುವಾಗ, ರಾಜ್ಯಪಾಲರು, ಜೂನ್‌ 30ರಂದು ಶಿಂಧೆ ಬಣ ಹಾಗೂ ಬಿಜೆಪಿ ಪಕ್ಷಕ್ಕೆ ವಿಶ್ವಾಸಮತ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ಆಹ್ವಾನಿಸಿದ್ದು ಅಪರಾಧವಾಗಿದೆ ಎಂದು ಪ್ರಶ್ನಿಸಲಾಗಿದೆ.

ಹೊಸ ವಿಧಾನಸಭಾಧ್ಯಕ್ಷ ಆಯ್ಕೆ ಸೇರಿದಂತೆ ಜುಲೈ 3-4 ರಂದು ನಡೆದ ವಿಧಾನಸಭಾ ಪ್ರಕ್ರಿಯೆಗಳನ್ನೂ ಸಹ ಉದ್ಧವ್‌ ಠಾಕ್ರೆ ಬಣ ಪ್ರಶ್ನಿಸಿದೆ.

Donate Janashakthi Media

Leave a Reply

Your email address will not be published. Required fields are marked *