ರಾಯಚೂರು: ಸಿಡಿಲು ಬಡಿದ ಪರಿಣಾಮ ಟೀನ್ ಶೆಡ್ ಮನೆಯಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಜಿಲ್ಲೆಯ ಮಾನ್ವಿ ಪಟ್ಟಣದ ಸೋನಿಯಾ ಗಾಂಧಿ ಕಾಲೋನಿಯಲ್ಲಿ ನಡೆದಿದ್ದೂ, ಈ ಪರಿಣಾಮ ಅಂಬರೀಶ್ ಎಂಬವರ ಟೀನ್ ಶೆಡ್ ಮನೆ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ರಾಯಚೂರು
ಅಂಬರೀಶ್ ಮತ್ತು ಅವರ ಕುಟುಂಬವು ಹಣ್ಣು ಮತ್ತು ಪೊರಕೆ ವ್ಯಾಪಾರ ಮಾಡುತ್ತಿದ್ದರು.
ಮುಂದಿನ ತಿಂಗಳು ಅಂಬರೀಶ್‌ರ ಸಹೋದರಿಯ ಮದುವೆ ನಿಶ್ಚಯವಾಗಿತ್ತು. ಈ ಕಾರಣಕ್ಕಾಗಿ ಮನೆಯಲ್ಲಿ ಇಟ್ಟಿದ್ದ 20 ಗ್ರಾಂ ಚಿನ್ನಾಭರಣ ಹಾಗೂ ₹4.5 ಲಕ್ಷ ನಗದು ಬೆಂಕಿಯಲ್ಲಿ ಸುಟ್ಟುಹೋಗಿದೆ ಎಂದು ಆರೋಪಿಸಲಾಗಿದೆ.
ಇದನ್ನೂ ಓದಿ: ಅಪಘಾತದಲ್ಲಿ ಕಾಲು ಕಳೆದು ಕೊಂಡ ಸಿಬ್ಬಂದಿಗೆ ರೂ. 25.00 ಲಕ್ಷ ರೂ ಪರಿಹಾರ
ನಿನ್ನೆ ಸಂಜೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಸಂಭವಿಸಿದೆ. ಸದ್ಯ ಅಂಬರೀಶ್ ಕುಟುಂಬವು ಸೂರು ಇಲ್ಲದೇ ಪರದಾಡುತ್ತಿದೆ. ಈ ಘಟನೆ ಮಾನ್ವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2025ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ರಾಜಕೀಯ, ಸಿನಿಮಾ, ಕ್ರೀಡೆ ಸೇರಿದಂತೆ ಎಲ್ಲ ವಿಭಾಗದ ಸುದ್ದಿಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ, ಡಿಪ್ಲೋಮಾ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಆಸಕ್ತಿಯಿದೆ.
ಇದನ್ನೂ ನೋಡಿ: ನಿಶಿಕಾಂತ್ ದುಬೆ, ಧನ್ಕರ್ ಅವರ ಸುಪ್ರೀಂಕೋರ್ಟ್ ವಿರುದ್ಧ ಮಾತುಗಳು ನ್ಯಾಯಾಂಗ ನಿಂದನೆಯಲ್ಲವೇ? Janashakthi Media