ತೇಜಸ್ವಿ ಸೂರ್ಯ ಧ್ವೇಷ ಭಾಷಣಕ್ಕೆ ತೀವ್ರ ವಿರೋಧ : ಕಾರ್ಯಕ್ರಮ ರದ್ದು

ಹೊಸದಿಲ್ಲಿ: ಬೆಂಗಳೂರು ದಕ್ಷಿಣ ಸಂಸದ ಹಾಗೂ ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ ಆಸ್ಟ್ರೇಲಿಯಾದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮುಸ್ಲಿಮರ ವಿರುದ್ಧ ದ್ವೇಷಭಾಷಣ ಮಾಡಿರುವ ವೀಡಿಯೊ ಸಾಮಾಜಿಕ ತಾಣದಾದ್ಯಂತ ಆಕ್ರೋಶಕ್ಕೀಡಾಗಿದೆ.

ಸಂಸದ ತೇಜಸ್ವಿ ಸೂರ್ಯ ಅಲ್ಲಿನ ಒಳಾಂಗಣ ಕಾರ್ಯಕ್ರಮವೊಂದರಲ್ಲಿ ಇಸ್ಲಾಂ ಮತ್ತು ಮುಸ್ಲಿಮರ ಕುರಿತು ದ್ವೇಷದ ಮಾತುಗಳನ್ನಾಡುವ ವೀಡಿಯೊ ಟ್ವಿಟರ್‌ ನಲ್ಲಿ ವೈರಲ್‌ ಆಗಿತ್ತು.

ಎಐವೈಡಿ ವೆಬ್‌ಸೈಟ್ ಪ್ರಕಾರ ಈ ಕಾರ್ಯಕ್ರಮವು ಭಾರತ ಮತ್ತು ಆಸ್ಟ್ರೇಲಿಯಾದ ಯುವಕರ ನಡುವಿನ ಸಂವಾದದ ವೇದಿಕೆಯಾಗಿದೆ. ಪ್ರತಿ ವರ್ಷ ಭಾರತ ಮತ್ತು ಆಸ್ಟ್ರೇಲಿಯಾದಲ್ಲಿ ಸಮ್ಮೇಳನವನ್ನು ಆಯೋಜಿಸಲಾಗುತ್ತಿದೆ. ಇದರಲ್ಲಿ ಎರಡೂ ದೇಶಗಳಿಂದ ಆಯ್ದ 15 ಯುವಕರು ಪಾಲ್ಗೊಳ್ಳುತ್ತಾರೆ. ತಮ್ಮ ತಮ್ಮ ಕ್ಷೇತ್ರಗಳಲ್ಲಿ ಸಾಧನೆಗೈದಿರುವ ಯುವಕರು ಪರಸ್ಪರ ಸಂವಾದ ನಡೆಸಿ ವಿಚಾರ ವಿನಿಮಯ ಮಾಡಿಕೊಳ್ಳುತ್ತಾರೆ”

ಪ್ರತಿ ವರ್ಷ ಮೇ 31ರಿಂದ ಜೂನ್ 3 ರವರೆಗೆ ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ ಸಮಾವೇಶವನ್ನು ಆಯೋಜಿಸಲಾಗುತ್ತದೆ ಇದರಲ್ಲಿ ಭಾರತದಿಂದ ಆಯ್ಕೆಯಾದ 15 ಜನರಲ್ಲಿ ತೇಜಸ್ವಿ ಸೂರ್ಯ ಕೂಡ ಇದ್ದರು. ಅವರು ಸೋಮವಾರ ಸಿಡ್ನಿಯ ಸ್ವಿನ್‌ಬರ್ನ್ ಯೂನಿವರ್ಸಿಟಿ ಆಫ್ ಟೆಕ್ನಾಲಜಿಯಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಲಿದ್ದರು ಎಂದು ‘The Newz India’ ವೆಬ್‌ಸೈಟ್‌ ವರದಿ ಮಾಡಿದೆ.

ತೇಜಸ್ವಿ ಸೂರ್ಯ ಅವರು ಕಾರ್ಯಕ್ರಮಕ್ಕೆ ಬರಬಾರದೆಂದು ಆಗ್ರಹಿಸಿ ಹಲವು ಸಂಘಟನೆಗಳು ಮತ್ತು ಶೈಕ್ಷಣಿಕ ಕ್ಷೇತ್ರದ ತಜ್ಞರು ವಿಶ್ವವಿದ್ಯಾಲಯಕ್ಕೆ ಪತ್ರ ಬರೆದು ಪ್ರತಿಭಟನೆ ನಡೆಸಿದ್ದರು. ಕೆಲವು ಸಂಘಟನೆಗಳು ವಿಶ್ವವಿದ್ಯಾನಿಲಯಕ್ಕೆ ಪ್ರತಿಭಟನೆಯ ನೋಟಿಸ್ ಸಹ ಕಳುಹಿಸಿದ್ದವು. ಈ ನೋಟಿಸ್‌ಗೆ ಪ್ರತಿಕ್ರಿಯೆಯಾಗಿ, ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ ಎಂದು ವಿಶ್ವವಿದ್ಯಾಲಯವು ಪ್ರತಿಭಟನಾಕಾರರಿಗೆ ಇಮೇಲ್ ಮೂಲಕ ತಿಳಿಸಿದೆ.

Donate Janashakthi Media

Leave a Reply

Your email address will not be published. Required fields are marked *