ಬಿಜೆಪಿ ನಾಯಕಿ ತೇಜಸ್ವಿನಿಗೌಡ ಕಾಂಗ್ರೆಸ್‌ಗೆ ಸೇರ್ಪಡೆ

ಬೆಂಗಳೂರು : ವಿಧಾನ ಪರಿಷತ್ತಿನ ಮಾಜಿ ಸದಸ್ಯೆ ತೇಜಸ್ವಿನಿಗೌಡ ದೆಹಲಿಯಲ್ಲಿಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ದೆಹಲಿ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ ಜಯರಾಂ ಸಮ್ಮುಖದಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಯಾದರು. ಮೊನ್ನೆಯಷ್ಟೇ ತೇಜಸ್ವಿನಗೌಡ ಮೇಲ್ಮನೆ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ವಿಧಾನಸಭಾಪತಿ ಸಭಾಪತಿ ಬಸವರಾಜ ಹೊರಟ್ಟಿ ರಾಜೀನಾಮೆಯನ್ನು ಅಂಗೀಕರಿಸಿದ್ದರು.

ತೇಜಸ್ವಿನಿ ಅವರು ಮೈಸೂರು -ಕೊಡಗು ಲೋಕಸಭಾ ಕ್ಷೇತ್ರ ಬಿಜೆಪಿ ಟಿಕೆಟ್ ಆಕ್ಷಾಕ್ಷಿಯಾಗಿದ್ದರು. ಟಿಕೆಟ್ ಕೈ ತಪ್ಪಿದ್ದರಿಂದ ಬಿಜೆಪಿ ತೊರೆದು ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ.

ಇದನ್ನು ಓದಿ : ಅಬಕಾರಿ ನೀತಿ ಪ್ರಕರಣದಲ್ಲಿ ವಿಚಾರಣೆಗಾಗಿ ದೆಹಲಿ ಸಚಿವ ಕೈಲಾಶ್ ಗಹ್ಲೋಟ್ ಅವರಿಗೆ ಇಡಿ ಸಮನ್ಸ್

ತೇಜಸ್ವಿನಿ ಗೌಡ ಕಾಂಗ್ರೆಸ್‌ಗೆ ಸೇರಿ ಮತ್ತೊಮ್ಮೆ ವಿಧಾನ ಪರಿಷತ್‌ ಸದಸ್ಯೆ ಆಗುವ ಸಾಧ್ಯತೆ ಇದೆ. ಅಥವಾ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವುದರಿಂದ ಅಲ್ಲಿ ಅವರು ಗೆಲುವು ಸಾಧಿಸಿದರೆ ಚನ್ನಪಟ್ಟಣ ಶಾಸಕ ಸ್ಥಾನವನ್ನು ಬಿಟ್ಟುಕೊಡಬೇಕಾಗುತ್ತದೆ. ಅಲ್ಲಿ ನಡೆಯುವ ಉಪಚುನಾವಣೆಯಲ್ಲಿ ತೇಜಸ್ವಿನಿ ಗೌಡಗೆ ಕಾಂಗ್ರೆಸ್‌ ಟಿಕೆಟ್‌ ನೀಡಬಹುದು ಎನ್ನಲಾಗಿದೆ. ಮೈತ್ರಿ ಮಾಡಿಕೊಂಡಿರುವುದರಿಂದ ಸಿಪಿ ಯೋಗೇಶ್ವರ್‌ ಅವರು ಬಿಜೆಪಿ – ಜೆಡಿಎಸ್‌ ಮೈತ್ರಿ ಅಭ್ಯರ್ಥಿಯಾಗಿ ಚನ್ನಪಟ್ಟಣದಲ್ಲಿ ಸ್ಪರ್ಧಿಸುವ ಸಾಧ್ಯತೆ ಇದೆ. ಅವರ ಎದುರು ತೇಜಸ್ವಿನಿ ಗೌಡ ಅವರನ್ನು ಕಣಕ್ಕಿಳಿಸುವ ಯೋಚನೆಯೂ ಇದೆ.

ಪತ್ರಕರ್ತೆಯಾಗಿದ್ದ ತೇಜಸ್ವಿನಿ ಗೌಡ 2004ರಲ್ಲಿ ಕಾಂಗ್ರೆಸ್‌ ಸೇರಿದ್ದರು. ಅದೇ ಲೋಕಸಭಾ ಚುನಾವಣೆಯಲ್ಲಿ ಕನಕಪುರದಿಂದ ಸ್ಪರ್ಧಿಸಿದ್ದ ಅವರು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರ ವಿರುದ್ಧ ಗೆಲುವು ಸಾಧಿಸಿದ್ದರು. ಕ್ಷೇತ್ರ ಪುನರ್‌ವಿಂಗಡಣೆ ಬಳಿಕ ಬೆಂಗಳೂರು ಗ್ರಾಮಾಂತರದಿಂದ ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ತೇಜಸ್ವಿನಿ ಗೌಡ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಎದುರು ಸೋಲು ಅನುಭವಿಸಿದ್ದರು. ಅದಾದ ಬಳಿಕ 2014ರಲ್ಲಿ ಬಿಜೆಪಿಗೆ ಸೇರಿದ್ದ ತೇಜಸ್ವಿನಿ ಗೌಡ ವಿಧಾನ ಪರಿಷತ್‌ ಸದಸ್ಯರಾಗಿದ್ದರು. ಈಗ ಆ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಇದನ್ನು ನೋಡಿ : fact check units ಎನ್ನುವ ‘ಮೋದಿ-ಶಾ ಹದ್ದಿನ ಕಣ್ಣು Janashakthi Media

Donate Janashakthi Media

Leave a Reply

Your email address will not be published. Required fields are marked *