ತೆಲಂಗಾಣ: ಶಿವಾಜಿ ಪ್ರತಿಮೆ ಬಳಿ ಮೂತ್ರ ವಿಸರ್ಜನೆ ಆರೋಪ – ಹಲ್ಲೆ, ಬೆತ್ತಲೆ ಮೆರವಣಿಗೆ!

ಗಜ್ವೇಲ್ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರು ಪ್ರತಿನಿಧಿಸುವ ಕ್ಷೇತ್ರವುವಾಗಿದೆ 

ತೆಲಂಗಾಣ: ಛತ್ರಪತಿ ಶಿವಾಜಿ ಪ್ರತಿಮೆ ಬಳಿ ಮುಸ್ಲಿಂ ವ್ಯಕ್ತಿಯನ್ನು ಬಲಪಂಥೀಯ ಸಂಘಟನೆಗಳ ಗುಂಪೊಂದು ಅಮಾನುಷವಾಗಿ ಥಳಿಸಿ ಮೆರವಣಿಗೆ ನಡೆಸಿದ ಘಟನೆ ಸೋಮವಾರ ರಾತ್ರಿ  ರಾಜ್ಯದ ಸಿದ್ದಿಪೇಟ್ ಜಿಲ್ಲೆಯ ಗಜ್ವೇಲ್ ಪಟ್ಟಣದಲ್ಲಿ ನಡೆದಿದೆ. ಘಟನೆಯ ನಂತರ ನಗರದಲ್ಲಿ ಉದ್ವಿಗ್ನತೆ ಉಂಟಾಗಿದೆ ಎಂದು ‘ದಿ ಸಿಯಾಸತ್ ಡೈಲಿ‘ ವರದಿ ಮಾಡಿದೆ.

ಸ್ಥಳೀಯ ನಿವಾಸಿಯಾಗಿರುವ ವ್ಯಕ್ತಿ ಶಿವಾಜಿ ಪ್ರತಿಮೆ ಬಳಿ ಮೂತ್ರ ವಿಸರ್ಜನೆ ಮಾಡುತ್ತಿದ್ದಾಗ ಸ್ಥಳೀಯರು ಇದನ್ನು ಗಮನಿಸಿ ಅವರನ್ನು ಹಿಡಿದಿದ್ದಾರೆ. ಆ ನಂತರ ಗುಂಪು ಅವರನ್ನು ತೀವ್ರವಾಗಿ ಥಳಿಸಿ  ಅರೆಬೆತ್ತಲೆಯಾಗಿ ಮೆರವಣಿಗೆ ಮಾಡಿ ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ವರದಿಯಾಗಿದೆ. ಗಜ್ವೇಲ್ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರು ಪ್ರತಿನಿಧಿಸುವ ಕ್ಷೇತ್ರವುವಾಗಿದೆ.

ಇದನ್ನೂ ಓದಿ: ಟಿಆರ್‌ಎಸ್‌ ಶಾಸಕರ ಖರೀದಿ ಯತ್ನ ಪ್ರಕರಣ ಸಿಬಿಐಗೆ ವರ್ಗ: ತೆಲಂಗಾಣ ಹೈಕೋರ್ಟ್

ಸ್ಥಳೀಯ ಬಿಜೆಪಿ, ವಿಎಚ್‌ಪಿ ಮತ್ತು ಬಜರಂಗದಳ ಸದಸ್ಯರು ಧರಣಿ ಮತ್ತು ರಸ್ತೆ ತಡೆ ನಡೆಸಿ ವ್ಯಕ್ತಿಯ ವಿರುದ್ಧ ಕ್ರಮ ಮತ್ತು ಸಮಗ್ರ ತನಿಖೆಗೆ ಒತ್ತಾಯಿಸಿದರು. ಇದು ಹಿಂದೂಗಳ ಭಾವನೆಗಳಿಗೆ ಧಕ್ಕೆ ತರುವ ಯೋಜಿತ ಕ್ರಮ ಎಂದು ಅವರು ಆರೋಪಿಸಿದ್ದಾರೆ. ಮಂಗಳವಾರ ಗಜ್ವೇಲ್ ಟೌನ್‌ನಲ್ಲಿ ಬಿಜೆಪಿ ಪರ ಸಂಘಟನೆಗಳಿಂದ ಬಂದ್‌ಗೆ ಕರೆ ನೀಡಲಾಗಿತ್ತು.

ಘಟನೆಯ ನಂತರ ಪೊಲೀಸ್ ಅಧಿಕಾರಿಗಳು ಗಸ್ತು ಹೆಚ್ಚಿಸಿ ಭದ್ರತೆಯನ್ನು ಹೆಚ್ಚಿಸಿದ್ದಾರೆ. ಇದೇ ವೇಳೆ ಗಜ್ವೇಲ್‌ನ ಕೆಲವೆಡೆ ಅಂಗಡಿ-ಮುಂಗಟ್ಟುಗಳು ಬಂದ್‌ ಆಗಿವೆ.

ಘಟನೆ ಕುರಿತು ಮಂಗಳವಾರ ಹೇಳಿಕೆ ನೀಡಿರುವ ಸಿದ್ದಿಪೇಟೆ ಪೊಲೀಸ್ ಕಮಿಷನರ್ ಶ್ವೇತಾ, ಛತ್ರಪತಿ ಶಿವಾಜಿ ಮೂರ್ತಿಗೆ ಮೂತ್ರ ವಿಸರ್ಜನೆ ಮಾಡಿದ ವ್ಯಕ್ತಿಯನ್ನು ಬಂಧಿಸಿ ಕಸ್ಟಡಿಗೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಹಲ್ಲೆ ನಡೆಸಿದ ಆರೋಪಿಗಳ ಪತ್ತೆಗೆ ಪ್ರತ್ಯೇಕ ತಂಡಗಳನ್ನು ರಚಿಸಲಾಗಿದ್ದು, ವಿವಿಧೆಡೆ ಶೋಧ ನಡೆಸಿದ್ದು, ಮಂಗಳವಾರ ಬೆಳಗ್ಗೆ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ.

ಇದನ್ನೂ ಓದಿ: ಆಂಧ್ರ ಸಿಎಂ ಜಗನ್‌ ಸಹೋದರಿ ವೈಎಸ್ ಶರ್ಮಿಳಾ ಇದ್ದ ಕಾರನ್ನು ಎಳೆದೊಯ್ದ ತೆಲಂಗಾಣ ಪೊಲೀಸರು

ಘಟನೆಯ ನಂತರ ನಡೆದ ಕೋಮು ಘರ್ಷಣೆಗೆ ಸಂಬಂಧಿಸಿದಂತೆ ಇನ್ನೂ ಮೂವರನ್ನು ಬಂಧಿಸಲಾಗಿದೆ. ಅವರನ್ನು 14 ದಿನಗಳ ಕಾಲ ಕಸ್ಟಡಿಗೆ ನೀಡಲಾಗಿದೆ. ಅವರ ವಿರುದ್ಧ ಲಭ್ಯವಿರುವ ವಿಡಿಯೋ ಸಾಕ್ಷ್ಯಗಳ ಆಧಾರದ ಮೇಲೆ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗುವುದು ಎಂದು ಪೊಲೀಸರು ಪ್ರತಿಪಾದಿಸಿದ್ದಾರೆ.

ಪ್ರಕರಣದ ಹೆಚ್ಚಿನ ತನಿಖೆ ನಡೆಯುತ್ತಿದ್ದು, ಶಾಂತಿ ಕಾಪಾಡುವಂತೆ ಪ್ರತಿಭಟನಾಕಾರರಿಗೆ ಪೊಲೀಸರು ಮನವಿ ಮಾಡಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *