ತನ್ನ ಬೆಂಗಾವಲು ವಾಹನದಿಂದ ಜನರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಪೊಲೀಸರಿಗೆ ತೆಲಂಗಾಣ ಸಿಎಂ ಮನವಿ

ಹೈದರಾಬಾದ್: ತನ್ನ ಪ್ರಯಾಣದ ವೇಳೆ ಬೆಂಗಾವಲು ವಾಹನದಿಂದಾಗಿ ಜನರಿಗೆ ಆಗುವ ಅನಾನುಕೂಲತೆಯನ್ನು ತಪ್ಪಿಸಲು ಕ್ರಮಗಳನ್ನು ತೆಗೆದುಕೊಳ್ಳುವಂತೆ  ತೆಲಂಗಾಣದ ನೂತನ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಶುಕ್ರವಾರ ಪೊಲೀಸರಿಗೆ ಸೂಚಿಸಿದರು. ಸಾಮಾನ್ಯ ಜನರಿಗೆ ಯಾವುದೇ ತೊಂದರೆಯಾಗದಂತೆ ಮುಖ್ಯಮಂತ್ರಿಯ ಬೆಂಗಾವಲು ಪಡೆಗಳ ಸಂಚಾರಕ್ಕೆ ಈಗಿರುವ ನಿಯಮಗಳನ್ನು ಸಡಿಲಿಸುವಂತೆ ಅವರು ತಿಳಿಸಿದ್ದಾರೆ.

ತಮ್ಮ ಬೆಂಗಾವಲು ಪಡೆ ಸಂಚರಿಸುವ ಮಾರ್ಗಗಳಲ್ಲಿ ಹೆಚ್ಚು ಹೊತ್ತು ಸಂಚಾರ ಸ್ಥಗಿತಗೊಳ್ಳದಂತೆ ನೋಡಿಕೊಳ್ಳುವಂತೆ ರೇವಂತ್ ರೆಡ್ಡಿ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ತಮ್ಮ ಬೆಂಗಾವಲು ಪಡೆಯಲ್ಲಿರುವ ವಾಹನಗಳ ಸಂಖ್ಯೆಯನ್ನು 15 ರಿಂದ ಒಂಬತ್ತಕ್ಕೆ ಇಳಿಸಲಾಗಿದೆ ಎಂದ ಅವರು, ಟ್ರಾಫಿಕ್ ಅನ್ನು ನಿಲ್ಲಿಸುವ ಅಗತ್ಯವಿಲ್ಲ ಮತ್ತು ಟ್ರಾಫಿಕ್ ಜಾಮ್ ಆಗದಂತೆ ಪರ್ಯಾಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ತೆಲಂಗಾಣ

ಇದನ್ನೂ ಓದಿ: NDTV ನಂತರ IANS ಕೂಡಾ ಅದಾನಿ ಗ್ರೂಪ್ ವಶಕ್ಕೆ!

ಜನರ ಸಮಸ್ಯೆಗಳನ್ನು ಖುದ್ದಾಗಿ ಅರಿಯಲು ವ್ಯಾಪಕ ಪ್ರವಾಸ ಮಾಡಬೇಕಿದ್ದು, ತಾನು ಸಂಚರಿಸುವ ಮಾರ್ಗಗಳಲ್ಲಿ ಜನರಿಗೆ ತೊಂದರೆಯಾಗದಂತೆ ಪರ್ಯಾಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ರೇವಂತ್ ರೆಡ್ಡಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜನರ ಸಮಸ್ಯೆಗಳನ್ನು ಬಗೆಹರಿಸದೆ ಮನೆಯಲ್ಲಿ ಕುಳಿತುಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ತೆಲಂಗಾಣ

ಹೈದರಾಬಾದ್‌ನಲ್ಲಿ ಕಳೆದ ಕೆಲವು ದಿನಗಳಿಂದ ವಿಐಪಿಗಳ ಪ್ರಯಾಣಗಳು ಸಾಮಾನ್ಯ ಜನರಿಗೆ ಅನಾನುಕೂಲತೆಯನ್ನು ಉಂಟುಮಾಡುತ್ತಿರುವ ವರದಿಗಳ ಹಿನ್ನೆಲೆ ಪೊಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಈ ನಿರ್ದೇಶನ ನೀಡಿದ್ದಾರೆ. ಅದಕ್ಕೂ ಹಿಂದೆ ಮುಖ್ಯಮಂತ್ರಿಯವರ ಬೆಂಗಾವಲು ಪಡೆ ಜುಬಿಲಿ ಹಿಲ್ಸ್‌ನಲ್ಲಿರುವ ಅವರ ನಿವಾಸದಿಂದ ರಾಜ್ಯ ಸಚಿವಾಲಯ, ವಿಧಾನಸಭೆ ಮತ್ತು ರಾಜ್ಯ ರಾಜಧಾನಿಯ ಇತರ ಸ್ಥಳಗಳಿಗೆ ತೆರಳಲು ಅನುಕೂಲವಾಗುವಂತೆ ಪೊಲೀಸರು ವಿವಿಧೆಡೆ ಸಂಚಾರವನ್ನು ತಡೆದಿದ್ದರು.

ಡಿಸೆಂಬರ್ 7 ರಂದು ಅಧಿಕಾರ ಸ್ವೀಕರಿಸಿದ ರೇವಂತ್ ರೆಡ್ಡಿ ಅವರು ಪ್ರತಿದಿನ ಸಚಿವಾಲಯಕ್ಕೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸುತ್ತಿದ್ದಾರೆ. ಈ ಹಿಂದೆ ತೆಲಂಗಾಣದಲ್ಲಿ ಬಿಆರ್‌ಎಸ್ ಅಧಿಕಾರದಲ್ಲಿದ್ದಾಗ, ಹಿಂದಿನ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು ಜನರ ಸಮಸ್ಯೆಗಳನ್ನು ತಿಳಿಯಲು ತಮ್ಮ ಅಧಿಕೃತ ನಿವಾಸದಿಂದ ಹೊರಗೆ ಹೋಗಲಿಲ್ಲ ಎಂದು ಕಾಂಗ್ರೆಸ್ ಟೀಕಿಸುತ್ತಿದೆ.

ವಿಡಿಯೊ ನೋಡಿ: SFI ನಾಯಕನ ಫೋಟೋ ಹಾಕಿ ಈತನೇ ಮನೋರಂಜನ್ ಎಂದು ಸುಳ್ಳು ಸುದ್ದಿ ಹಬ್ಬಿಸುತ್ತಿರುವ ಬಿಜೆಪಿ Janashakthi Media

Donate Janashakthi Media

Leave a Reply

Your email address will not be published. Required fields are marked *