ಚಂಡೀಗಢ:ಕೃಷಿ ಕಾನೂನುಗಳನ್ನು ಜಾರಿಗೆ ತಂದಿರುವ ಕೇಂದ್ರ ಸರ್ಕಾರದ ವಿರುದ್ಧ ರೈತರು ದೆಹಲಿ ಮತ್ತು ಪಂಜಾಬ್ ನಲ್ಲಿ ದೆಹಲಿ ಚಲೋ ಹೋರಾಟ ನಡೆಸಿದ್ದರು.ಹೋರಾಟದಿಂದ ಪ್ರಾಣ ಕಳೆದುಕೊಂಡ ಕುಟುಂಬಗಳಿಗೆ ಇಂದು ಚಂಡೀಗಢದಲ್ಲಿ ತೆಲಂಗಾಣ ಸಿಎಂ ಕೆ.ಚಂದ್ರಶೇಖರ್ ರಾವ್ 3 ಲಕ್ಷ ರೂ ಮೌಲ್ಯದ ಪರಿಹಾರದ ಚೆಕ್ ವಿತರಿಸಲಿದ್ದಾರೆ.
ವಿವಾದಾತ್ಮಕ ಕೃಷಿಕಾನೂನುಗಳಿಂದಾದ ಅನಾಹುತಕ್ಕೆ ಪ್ರಧಾನಿ ನರೇಂದ್ರ ಮೋದಿ ಅವುಗಳನ್ನು ಹಿಂಪಡೆದಿದ್ದರು. ಇದಾದ ನಂತರವೇ ತೆಲಂಗಾಣ ಮುಖ್ಯಮಂತ್ರಿ ಮೃತ ರೈತರ ಕುಟುಂಬಗಳಿಗೆ ಆರ್ಥಿಕ ನೆರವು ನೀಡುವುದಾಗಿ ಘೋಷಿಸಿದ್ದರು.
ಪಂಜಾಬ್ ಸರ್ಕಾರ ಈಗಾಗಲೇ ಮೃತರ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ ಮತ್ತು 5 ಲಕ್ಷ ರೂಪಾಯಿ ಪರಿಹಾರ ನೀಡಿದೆ. ತೆಲಾಂಗಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಚಂಡೀಗಢದಲ್ಲಿ ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ರಾಷ್ಟ್ರವ್ಯಾಪಿ ಆಂದೋಲನದ ಸಂದರ್ಭದಲ್ಲಿ ಸಾವನ್ನಪ್ಪಿದ 600 ರೈತರ ಕುಟುಂಬಗಳು ಸಾವನ್ನಪ್ಪಿದೆ.
ದೆಹಲಿಚಲೊ ಚಳುವಳಿ ವೇಳೆ ಪ್ರಾಣ ಕಳೆದುಕೊಂಡ ರೈತರ ಕುಟುಂಬಗಳನ್ನು ಇಂದು ಟ್ಯಾಗೋರ್ ರಂಗಮಂದಿರಕ್ಕೆ ಕರೆತರುವಂತೆ ರಾಜ್ಯ ಕೃಷಿ ಇಲಾಖೆ ಎಲ್ಲ ಜಿಲ್ಲೆಗಳ ಕೃಷಿ ಅಧಿಕಾರಿಗಳಿಗೆ ಸೂಚಿಸಿದೆ. ಪಂಜಾಬ್‌ನ ಮೃತ ರೈತರ ಕುಟುಂಬಕ್ಕೆ ಬೇರೆ ರಾಜ್ಯದ ಮುಖ್ಯಮಂತ್ರಿ ಇಷ್ಟು ದೊಡ್ಡ ಮೊತ್ತದ ಪರಿಹಾರ ನೀಡಿರುವುದು ಇದೇ ಮೊದಲು.
ಚಂಡೀಗಢದ ಟ್ಯಾಗೋರ್ ರಂಗಮಂದಿರದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಚಂದ್ರಶೇಖರ್ ರಾವ್ ಭಾಗಿಯಾಗುವರು. ಅವರೊಂದಿಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಕೂಡ ಇರಲಿದ್ದಾರೆ.
1ಡಿಸೆಂಬರ್ 20ರಂದು ನಡೆದ ಘಟಣೆ:ಕೇಂದ್ರ ಸರ್ಕಾರ ಹೊಸದಾಗಿ ಜಾರಿಗೆ ತಂದಿರುವ ಮೂರು ಕೃಷಿ ಕಾಯ್ದೆಯ ವಿರುದ್ಧ ಇಡೀ ದೇಶದ ರೈತರು ಇದೀಗ ಸಿಡಿದೆದ್ದಿದ್ದರು. ದೆಹಲಿ ಚಲೋ ಚಳುವಳಿಯಲ್ಲಿ ರೈತರು ಕೇಂದ್ರ ಸರ್ಕಾರಕ್ಕೆ ಕಗ್ಗಂಟಾಗಿ ಪರಿಣಮಿಸಿದ್ದರು. ಕೇಂದ್ರದ ಕೃಷಿ ಕಾನೂನುಗಳಾದ ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ ಕಾಯ್ದೆ, ರೈತರ ಬೆಲೆ ಖಾತರಿಯ ಒಪ್ಪಂದ ಕಾಯ್ದೆ ಮತ್ತು ಕೃಷಿ ಸೇವೆಗಳು ಮತ್ತು ಅಗತ್ಯ ಸರಕುಗಳ ಕಾಯ್ದೆಗಳು ರೈತರ ಕನಿಷ್ಟ ಬೆಂಬಲ ಬೆಲೆ (ಎಂಎಸ್‌ಪಿ) ವ್ಯವಸ್ಥೆಯನ್ನು ಕಿತ್ತುಹಾಕಲು ದಾರಿ ಮಾಡಿಕೊಡುತ್ತವೆ ಮತ್ತು ಈ ಮೂಲಕ ಕಾರ್ಪೊರೇಟ್ ಸಂಸ್ಥೆಗಳ ಪರವಾಗಿದೆ ಎಂದು ರೈತರು ಆತಂಕ ವ್ಯಕ್ತಪಡಿಸಿ ಹೋರಾಟ ನಡೆಸಿದ್ದರು.