ಸೋನಿಯಾ ಗಾಂಧಿ ಅವರನ್ನು ಲೋಕಸಭೆ ಚುನಾವಣೆಗೆ ರಾಜ್ಯದಿಂದ ಸ್ಪರ್ಧಿಸುವಂತೆ ಆಹ್ವಾನಿಸಿದ ತೆಲಂಗಾಣ ಕಾಂಗ್ರೆಸ್

ಹೈದರಾಬಾದ್: ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಿಂದ ಸ್ಪರ್ಧಿಸುವಂತೆ  ಕಾಂಗ್ರೆಸ್ ಪಕ್ಷದ ತೆಲಂಗಾಣ ಘಟಕವು ಸೋಮವಾರ ಆಹ್ವಾನಿಸಿದೆ. ಡಿಸೆಂಬರ್ 18 ರಂದು ಹೈದರಾಬಾದ್‌ನಲ್ಲಿ ನಡೆದ ಸಭೆಯಲ್ಲಿ ರಾಜ್ಯದ ರಾಜಕೀಯ ವ್ಯವಹಾರಗಳ ಸಮಿತಿ (ಪಿಎಸಿ) ಈ ನಿರ್ಣಯವನ್ನು ಅಂಗೀಕರಿಸಿದ್ದು, ರಾಜ್ಯದಿಂದ ಲೋಕಸಭೆಗೆ ಸ್ಪರ್ಧಿಸಲು ಸೋನಿಯಾ ಗಾಂಧಿಯವರಿಗೆ ಮನವಿ ಮಾಡಿದೆ.

ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರು 1980ರಲ್ಲಿ ಮೇಡಕ್‌ನಿಂದ ಲೋಕಸಭೆಗೆ ಆಯ್ಕೆಯಾಗಿದ್ದನ್ನು ಸ್ಮರಿಸಿದ ತೆಲಂಗಾಣ ಕಾಂಗ್ರೆಸ್, ಅದೇ ಕ್ಷೇತ್ರದಿಂದ ಸ್ಪರ್ಧಿಸುವಂತೆ ಸೋನಿಯಾ ಗಾಂಧಿ ಅವರಿಗೆ ಮನವಿ ಮಾಡಿದೆ. ತೆಲಂಗಾಣ ರಾಜ್ಯವನ್ನು ರಚಿಸಿದ್ದಕ್ಕಾಗಿ ಸೋನಿಯಾ ಗಾಂಧಿ ಅವರಿಗೆ ಕಾಂಗ್ರೆಸ್ ಧನ್ಯವಾದಗಳನ್ನು ಅರ್ಪಿಸಿದೆ ಎಂದು ಹಿರಿಯ ನಾಯಕ ಮೊಹಮ್ಮದ್ ಅಲಿ ಶಬ್ಬೀರ್ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಯುಜಿಸಿ ಅನುಮೋದನೆ ಇಲ್ಲದ ಯಾವುದೇ ವಿದೇಶಿ ಸಂಸ್ಥೆಗಳ ಪದವಿ ಭಾರತದಲ್ಲಿ ಮಾನ್ಯತೆಯಿಲ್ಲ: ಸರ್ಕಾರ

ತೆಲಂಗಾಣದ ಉಸ್ತುವಾರಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮಾಣಿಕ್ರಾವ್ ಠಾಕರೆ ನೇತೃತ್ವದಲ್ಲಿ ಪಿಎಸಿ ಸಭೆ ನಡೆಯಿತು. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ನಂತರ ನಡೆದ ಮೊದಲ ಸಭೆಯಲ್ಲಿ ರಾಜ್ಯಾಧ್ಯಕ್ಷ ಹಾಗೂ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ, ಉಪಮುಖ್ಯಮಂತ್ರಿ ಮಲ್ಲು ಭಟ್ಟಿ ವಿಕ್ರಮಾರ್ಕ, ಸಚಿವರು, ಪಿಎಸಿ ಸದಸ್ಯರು ಮತ್ತು ಹಿರಿಯ ಮುಖಂಡರು ಭಾಗವಹಿಸಿದ್ದರು.

ಮೂರು ಗಂಟೆಗಳ ಕಾಲ ನಡೆದ ಸಭೆಯಲ್ಲಿ ಮೂರು ನಿರ್ಣಯಗಳನ್ನು ಅಂಗೀಕರಿಸಲಾಯಿತು. ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದ ತೆಲಂಗಾಣ ಜನತೆಗೆ ಧನ್ಯವಾದ ಅರ್ಪಿಸಿದರು. ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತು ಇತ್ತೀಚಿನ ಚುನಾವಣೆಯಲ್ಲಿ ಪಕ್ಷದ ಪರವಾಗಿ ಪ್ರಚಾರ ಮಾಡಿದ ಎಲ್ಲಾ ಕಾಂಗ್ರೆಸ್ ನಾಯಕರಿಗೆ ಕಾಂಗ್ರೆಸ್‌ನ ರಾಜ್ಯ ಘಟಕ ಕೃತಜ್ಞತೆ ಸಲ್ಲಿಸಿದೆ.

ತೆಲಂಗಾಣದಲ್ಲಿ ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ 119 ಸದಸ್ಯ ಬಲದ ಅಸೆಂಬ್ಲಿಯಲ್ಲಿ ಕಾಂಗ್ರೆಸ್ 64 ಸ್ಥಾನಗಳನ್ನು ಪಡೆಯುವ ಮೂಲಕ ಭಾರತ್ ರಾಷ್ಟ್ರ ಸಮಿತಿಯಿಂದ (ಬಿಆರ್‌ಎಸ್) ಕಾಂಗ್ರೆಸ್ ಅಧಿಕಾರವನ್ನು ಕಸಿದುಕೊಂಡಿದೆ.

ವಿಡಿಯೊ ನೋಡಿ: ಸಮುದಾಯ ರಾಜ್ಯ ಸಮ್ಮೇಳನ : ರಂಗಗೀತೆಗಳು : ಜರ್ನಿ ಥಿಯೇಟರ್ ತಂಡದಿಂದ Janashakthi Media

Donate Janashakthi Media

Leave a Reply

Your email address will not be published. Required fields are marked *