ತೆಲಂಗಾಣ ಉದ್ಯೋಗಾಕಾಂಕ್ಷಿ ಆತ್ಮಹತ್ಯೆ: ಯುವಕರ ಕನಸು ಮತ್ತು ಆಕಾಂಕ್ಷೆಗಳ ಕೊಲೆ: ರಾಹುಲ್‌ಗಾಂಧಿ

ನವದೆಹಲಿ: ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ 23 ವರ್ಷದ ಯುವತಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣದಲ್ಲಿ ಕೆ ಚಂದ್ರಶೇಖರ್ ರಾವ್ ನೇತೃತ್ವದ ಬಿಆರ್‌ಎಸ್ ಸರ್ಕಾರವನ್ನು ಕಾಂಗ್ರೆಸ್ ಶನಿವಾರ ತರಾಟೆಗೆ ತೆಗೆದುಕೊಂಡಿದ್ದು ಇದು ಆತ್ಮಹತ್ಯೆಯಲ್ಲ, ಯುವಕರ ಕನಸು ಮತ್ತು ಆಕಾಂಕ್ಷೆಗಳ ಕೊಲೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು ತೆಲಂಗಾಣದ ಯುವಕರು ಇಂದು ನಿರುದ್ಯೋಗದಿಂದ ಸಂಪೂರ್ಣವಾಗಿ ನಾಶವಾಗಿದ್ದಾರೆ. ಕಳೆದ 10 ವರ್ಷಗಳಲ್ಲಿ, ‘ಬಿಜೆಪಿ ರಿಷ್ತೇದಾರ್ ಸಮಿತಿ ಬಿಆರ್‌ಎಸ್ ಮತ್ತು ಬಿಜೆಪಿ ಒಟ್ಟಾಗಿ ತಮ್ಮ ಅದಕ್ಷತೆಯಿಂದ ರಾಜ್ಯವನ್ನು ಹಾಳುಮಾಡಿದೆ ಎಂದು ಆರೋಪಿಸಿದರು.

ತೆಲಂಗಾಣದಲ್ಲಿ ಅಧಿಕಾರಕ್ಕೆ ಬಂದರೆ ಕಾಂಗ್ರೆಸ್ ಸರ್ಕಾರವು ಉದ್ಯೋಗ ಕ್ಯಾಲೆಂಡರ್ ಅನ್ನು ಬಿಡುಗಡೆ ಮಾಡುತ್ತದೆ. 1 ತಿಂಗಳಲ್ಲಿ ಯುಪಿಎಸ್‌ಸಿ ಮಾದರಿಯಲ್ಲಿ ಟಿಎಸ್‌ಪಿಎಸ್‌ಸಿ (ತೆಲಂಗಾಣ ರಾಜ್ಯ ಲೋಕಸೇವಾ ಆಯೋಗ) ಅನ್ನು ಮರುಸಂಘಟಿಸುತ್ತದೆ ಮತ್ತು ಒಂದು ವರ್ಷದೊಳಗೆ 2 ಲಕ್ಷ ಖಾಲಿ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡುತ್ತದೆ. ಇದುವೇ ಗ್ಯಾರಂಟಿ ಎಂದು ಹೇಳಿದ್ದಾರೆ.

ಇದನ್ನೂ ಓದಿ: ರೈತರಿಗೆ 5 ತಾಸು ವಿದ್ಯುತ್‌ ಪೂರೈಕೆ: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಟಿಎಸ್‌ಪಿಎಸ್‌ಸಿ ಪರೀಕ್ಷೆಯ ಅಧಿಸೂಚನೆಯನ್ನು ಮುಂದೂಡಿದ್ದರಿಂದ ಮನನೊಂದ 23 ವರ್ಷದ ಯುವತಿಯೊಬ್ಬಳು ಅಶೋಕನಗರದ ಪ್ರದೇಶದ ಹಾಸ್ಟೆಲಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗಿದ್ದು, ಈ ಸುದ್ದಿ ತಿಳಿದ ಬೆನ್ನಲ್ಲೇ ರಾಜ್ಯ ಸರ್ಕಾರದ ವಿರುದ್ಧ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆ ನಡೆಸಿದರು.

ಯುವತಿಯ ಮೃತದೇಹವನ್ನು ಆಸ್ಪತ್ರೆಗೆ ಸಾಗಿಸಲೂ ಪ್ರತಿಭಟನಾಕಾರರು ಶುಕ್ರವಾರ ರಾತ್ರಿ ತಡೆಯೊಡ್ಡಿದ್ದಾರೆ. ಯುವತಿ ಡೆತ್‌ ನೋಟ್‌ ಬರೆದಿಟ್ಟಿದ್ದಳು ಹಾಗೂ ಹೆತ್ತವರಿಗಾಗಿ ಏನೂ ಮಾಡಲು ಸಾಧ್ಯವಾಗದೇ ಇದ್ದುದಕ್ಕೆ ಕ್ಷಮೆಯಾಚಿಸಿ ಅದರಲ್ಲಿ ಬರೆದಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ ಎಂದು ವರದಿಯಾಗಿದೆ.

 

ಯಾರಾದರೂ ಮಾನಸಿಕ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದರೆ ಅಥವಾ ಆತ್ಮಹತ್ಯೆ ಮಾಡಿಕೊಳ್ಳುವ ಭಾವನೆಯಲ್ಲಿದ್ದರೆ, ಅವರಿಗೆ ದಯವಿಟ್ಟು ಸಹಾಯವನ್ನು ಒದಗಿಸಿ. ಇಂತಹ ವ್ಯಕ್ತಿಗಳಿಗೆ ಮತ್ತು ಕುಟುಂಬಗಳಿಗೆ ಭಾವನಾತ್ಮಕ ಬೆಂಬಲವನ್ನು ನೀಡುವ ಆತ್ಮಹತ್ಯೆ ತಡೆಗಟ್ಟುವಿಕೆ ಸಂಸ್ಥೆಗಳ ಕೆಲವು ಸಹಾಯವಾಣಿ ಸಂಖ್ಯೆಗಳು ಇಲ್ಲಿವೆ.

ಜೀವ ಅಮೂಲ್ಯವಾಗಿದೆ. ಮಾನಸಿಕ ಒತ್ತಡಗಳಿದ್ದರೆ ಇಲ್ಲಿ ಸಂಪರ್ಕಿಸಿ:

ಬೆಂಗಳೂರು ಸಹಾಯವಾಣಿ – 080-25497777, ಬೆಳಿಗ್ಗೆ 10 ರಿಂದ ಸಂಜೆ 8 ರವರೆಗೆ

ಕರ್ನಾಟಕ ಆರೋಗ್ಯ ಸಹಾಯವಾಣಿ – 104

 

ವಿಡಿಯೋ ನೋಡಿ: ಜೀವ ಜಗತ್ತಿನ ಓಟದಲ್ಲಿ ಗೆದ್ದ ಆಮೆಯೆಂಬ ಅದ್ಭುತ ಪ್ರಾಣಿ Janashakthi Media

Donate Janashakthi Media

Leave a Reply

Your email address will not be published. Required fields are marked *