ಬೆಂಗಳೂರು: ರಾಜ್ಯದಲ್ಲಿನ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವುದರಿಂದ ಬಿಸಿಲಿನ ತಾಪ ಹೆಚ್ಚಾಗಿದ್ದೂ, ಪ್ರಮುಖವಾಗಿ ಕಲಬುರಗಿ, ಬೀದರ್ ಹಾಗೂ ವಿಜಯಪುರದಲ್ಲಿ ಗರಿಷ್ಠ ತಾಪಮಾನದ ಪ್ರಮಾಣ 41 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಾಗಿದೆ ಎಂದು ವರದಿಯಾಗಿದೆ. ಮಳೆ
ಕಲಬುರಗಿಯಲ್ಲಿ ದಾಖಲಾದ ಗರಿಷ್ಠ ಉಷ್ಣಾಂಶ ಸಾಮಾನ್ಯವಾಗಿದ್ದರೆ, ಬೀದರ್ ಹಾಗೂ ವಿಜಯಪುರದಲ್ಲಿ ವಾಡಿಕೆ ಪ್ರಮಾಣಕ್ಕಿಂತ 1.8 ಡಿ.ಸೆ ಹೆಚ್ಚಾಗಿದೆ. ಕಾರವಾರದಲ್ಲಿ ಗರಿಷ್ಠ ಉಷ್ಣಾಂಶ 37.2 ಡಿ.ಸೆ ದಾಖಲಾಗಿದ್ದು, ಇದು ವಾಡಿಕೆ ಪ್ರಮಾಣಕ್ಕಿಂತ 2.4 ಹೆಚ್ಚಾಗಿದೆ.
ಇದನ್ನೂ ಓದಿ: ಬೆಂಗಳೂರು| ಮೇ.5 – ಮೇ 31ರವರೆಗೆ ಹೈಕೋರ್ಟ್‌ಗೆ ಬೇಸಿಗೆ ರಜೆ
ರಾಯಚೂರಿನಲ್ಲಿ 39, ಹಾಗೂ ಬಾಗಲಕೋಟೆಯಲ್ಲಿ 38.3, ಧಾರಾವಾಡ ಹಾಗೂ ಕೊಪ್ಪಳದಲ್ಲಿ ತಲಾ 38, ಗದಗ 37.9, ಬೆಳಗಾವಿಯಲ್ಲಿ 37, ಹಾವೇರಿಯಲ್ಲಿ 36.8, ಚಿತ್ರದುರ್ಗ ಹಾಗೂ ದಾವಣಗೆರೆಯಲ್ಲಿ ತಲಾ 36, ಬೆಂಗಳೂರು ನಗರದಲ್ಲಿ 33 ಡಿ.ಸೆ. ಗರಿಷ್ಠ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇದನ್ನೂ ನೋಡಿ: ಪಹಲ್ಗಾಮ ಹತ್ಯೆಯ ದುರಂತದ ಮಧ್ಯೆ ಕೇಂದ್ರದ ಜಾತಿ ಗಣತಿ ಘೋಷಣೆಯ ಹಿಂದಿನ ರಾಜಕೀಯ ಹಿತಾಸಕ್ತಿಯೇನು?